ಶಿವಮೊಗ್ಗ; ಮಾರ್ಚ್ 22ರಂದು ಉದ್ಯೋಗ ಮೇಳ
ಶಿವಮೊಗ್ಗ, ಮಾರ್ಚ್ 20; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮಾರ್ಚ್ 22ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಇದರಲ್ಲಿ ಪಾಲ್ಗೊಳ್ಳಬಹುದಾಗಿದೆ.
ಮಾರ್ಚ್ 22ರ ಬೆಳಗ್ಗೆ 10ಕ್ಕೆ ರಾಷ್ಟ್ರೀಯ ವೃತ್ತಿ ಸೇವೆ (ಎನ್‍ಸಿಎಸ್) ಯೋಜನೆಯಡಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.

ಉದ್ಯೋಗ ಮೇಳಕ್ಕೆ ಪ್ರವೇಶ ಉಚಿತವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಇವರನ್ನು ಸಂಪರ್ಕಿಸಬಹುದಾಗಿದೆ. ದೂರವಾಣಿ ಸಂಖ್ಯೆ 08182-255293, 9535312531, 9482023412.
ವಿಳಾಸ; ಉದ್ಯೋಗ ಮೇಳವು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ನಡೆಯಲಿದೆ.
ತರಬೇತಿ ಪಡೆಯಲು ಸಂದರ್ಶನ; ಸಮಾಜ ಕಲ್ಯಾಣ ಇಲಾಖೆಯಿಂದ 2021-22ನೇ ಸಾಲಿನಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗೆ ಮೈಸೂರಿನಲ್ಲಿರುವ ಭಾರತ ಸರ್ಕಾರದ ಕೇಂದ್ರಿಯ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆಯಲ್ಲಿ ಉಚಿತ ಊಟ ಹಾಗೂ ವಸತಿಯೊಂದಿಗೆ ಪ್ಲಾಸ್ಟಿಕ್ಸ್ ತಂತ್ರಜ್ಞಾನದ ಬಗ್ಗೆ ಮೂರು ತಿಂಗಳ ಅವಧಿಗೆ ವಿವಿಧ ವೃತ್ತಿಪರ ತರಬೇತಿಗಳನ್ನು ಹಮ್ಮಿಕೊಳ್ಳಲಾಗಿದೆ.
ತರಬೇತಿ ಅವಧಿಯಲ್ಲಿ ತಿಂಗಳಿಗೆ 2000 ರೂ.ಗಳ ಶಿಷ್ಯವೇತನ ನೀಡಲಾಗುತ್ತದೆ. ತರಬೇತಿ ಪಡೆಯಲಿಚ್ಛಿಸುವ ಅರ್ಹ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ದಾಖಲೆ, ಜನ್ಮ ದಿನಾಂಕದ ದಾಖಲೆ, ಗುರುತಿನ ಚೀಟಿ ದಾಖಲೆ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಪಡಿತರ ಚೀಟಿ ಇತ್ತೀಚಿನ ಜಾತಿ ಮತ್ತು ಆದಾಯ ಪ್ರಮಾಣಪತ್ರಗಳ ಎಲ್ಲಾ ಮೂಲ ದಾಖಲೆಗಳೊಂದಿಗೆ ಒಂದು ಸೆಟ್ ಝೆರಾಕ್ಸ್ ಪ್ರತಿ, 6 ಪಾಸ್‍ಫೋರ್ಟ್ ಅಳತೆಯ ಇತ್ತೀಚಿನ ಪೋಟೋಗಳೊಂದಿಗೆ ಏಪ್ರಿಲ್ 10ನೇ ತಾರೀಖನೊಳಗಾಗಿ ಸಂದರ್ಶನಕ್ಕೆ ಹಾಜರಾಗಬೇಕು.
ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಸೆಂಟ್ರಲ್ ಇನ್ಸ್‍ಸ್ಟಿಟ್ಯೂಟ್ ಆಫ್ ಪೆಟ್ರೋಕೆಮಿಕಲ್ಸ್ ಇಂಜಿನಿಯರಿಂಗ್ ಆಂಡ್ ಟೆಕ್ನಾಲಜಿ, ಭಾರತ ಸರ್ಕಾರ (ಸಿಐಪಿಇಟಿ-ಸಿಎಸ್‍ಟಿಎಸ್) # 437/ಎ, ಹೆಬ್ಬಾಳ್ ಇಂಡಸ್ಟ್ರಿಯಲ್ ಏರಿಯಾ, ಮೈಸೂರು-16 ಇಲ್ಲಿ ಸಂದರ್ಶನ ನಡೆಯಲಿದೆ.
ಸಂಸ್ಥೆಯ ಇ-ಮೇಲ್ ವಿಳಾಸ [email protected] ಮೂಲಕ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿ ಪಡೆಯಬಹುದು ಅಥವ ಮೈಸೂರಿನಲ್ಲಿರುವ ಭಾರತ ಸರ್ಕಾರದ ಕೇಂದ್ರಿಯ ಪೆಟ್ರೋಕೆಮಿಕಲ್ಸ್ ತಂತ್ರಜ್ಞಾನ ಸಂಸ್ಥೆಗೆ ಕರೆ ಮಾಡಬಹುದಾಗಿದೆ. ದೂರವಾಣಿ ಸಂಖ್ಯೆ 0821-2510619.
ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ; ಕಲಬುರಗಿಯ ಎಸ್.ಬಿ.ಐ. ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಕಲಬುರಗಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಏಪ್ರಿಲ್ 4 ರಿಂದ 13ರವರೆಗೆ ಉಚಿತವಾಗಿ ಹತ್ತು ದಿನಗಳ ಕಾಲ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ಕಾರ್ಯಕ್ರಮ ಆಯೋಜನೆ ಮಾಡಿದೆ.
ಅರ್ಹ ಅಭ್ಯರ್ಥಿಗಳು ತರಬೇತಿಯಲ್ಲಿ ಪಾಲ್ಗೊಳ್ಳಲು ಅರ್ಜಿ ಸಲ್ಲಿಸಬಹುದಾಗಿದೆ. ತರಬೇತಿ ಸಂದರ್ಭದಲ್ಲಿ ಉಚಿತ ಊಟ ಹಾಗೂ ವಸತಿ ಸೌಲಭ್ಯ ನೀಡಲಾಗುತ್ತದೆ. ಅಭ್ಯರ್ಥಿಗಳಿಗೆ ಕನ್ನಡ ಓದಲು ಮತ್ತು ಬರೆಯಲು ಬರಬೇಕು.
ವಯೋಮಿತಿ 18 ರಿಂದ 45 ವರ್ಷಗಳು. ಬಿಪಿಎಲ್, ಅಂತ್ಯೋದಯ ರೇಷನ್, ಎಮ್‍ಜಿಎನ್‍ಆರ್‍ಇಜಿಎ ಕಾರ್ಡ್ ಹೊಂದಿದ ಕುಟುಂಬದ ನಿರುದ್ಯೋಗಿ ಅಭ್ಯರ್ಥಿಗಳು ಸಂಸ್ಥೆಯಿಂದ ನಿಗದಿತ ಅರ್ಜಿ ನಮೂನೆಯನ್ನು ಪಡೆದು ಭರ್ತಿ ಮಾಡಿ ಮಾರ್ಚ್ 31 ರೊಳಗಾಗಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತರಬೇತಿ ಸಂಸ್ಥೆಯಲ್ಲಿ ಏಪ್ರಿಲ್ 1 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 3.30 ಗಂಟೆಯವರೆಗೆ ನಡೆಯುವ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ 9243602888, 9886781239 ಹಾಗೂ 9900135705.












Click it and Unblock the Notifications