ಶಿವಮೊಗ್ಗದಲ್ಲಿ ನವೆಂಬರ್ 15ರಂದು ಉದ್ಯೋಗ ಮೇಳ

ಶಿವಮೊಗ್ಗ, ನವೆಂಬರ್ 11; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ನವೆಂಬರ್ 15ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಜಿಲ್ಲಾ ಉದ್ಯೋಗ ವಿನಿಮಯಲ್ಲಿ ನವೆಂಬರ್ 15ರ ಮಂಗಳವಾರ ಬೆಳಗ್ಗೆ 10ಕ್ಕೆ ರಾಷ್ಟ್ರೀಯ ವೃತ್ತಿ ಸೇವೆ (ಎನ್‍ಸಿಎಸ್) ಯೋಜನೆಯಡಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಉದ್ಯೋಗ ಮೇಳದಲ್ಲಿ ಪ್ರತಿಷ್ಟಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಮೇಳದಲ್ಲಿ ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಪ್ರವೇಶ ಉಚಿತ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08182-255293, 9380663606/ 9482023412.

Job Fair In Shivamogga On November 15

ಉದ್ಯೋಗ ಮೇಳ ನಡೆಯುವ ವಿಳಾಸ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ.

ನವೆಂಬರ್ 14ರಂದು ಅಪ್ರೆಂಟಿಶಿಪ್ ಮೇಳ; ವಿಜನಗರ ಜಿಲ್ಲೆಯ ಹೊಸಪೇಟೆ ಜಂಬುನಾಥಹಳ್ಳಿಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಆವರಣದಲ್ಲಿ ವಿಜಯನಗರ ಜಿಲ್ಲಾ ಮಟ್ಟದ ಅಪ್ರೆಂಟಿಶಿಪ್ ಮೇಳವನ್ನು ನವೆಂಬರ್ 14ರಂದು ಆಯೋಜನೆ ಮಾಡಲಾಗಿದೆ.

ಬೆಳಗ್ಗೆ 10 ಗಂಟೆಗೆ ಅಪ್ರೆಂಟಿಶಿಪ್ ಮೇಳ ಆರಂಭವಾಗಲಿದೆ ಎಂದು ಜಿಲ್ಲಾ ನೋಡಲ್ ಅಧಿಕಾರಿ ಹಾಗೂ ಕಾಲೇಜಿನ ಪ್ರಾಂಶುಪಾಲರಾದ ಎಂ. ಡಿ. ಜಾಕೀರ್ ಹುಸೇನ್ ತಿಳಿಸಿದ್ದಾರೆ.

ಮೇಳದಲ್ಲಿ NMDC Ltd, BMM, JSW, MSPL Group of Companies, RBSSN, MUNER GROUPS, TOYOTA KIRLOSKAR Banglore, SMIORE, KFIL, BEVINAHALLI MNC ಕಂಪನಿಗಳು ಸೇರಿದಂತೆ ಬೆಂಗಳೂರಿನ ಇನ್ನಿತರ ಉದ್ದಿಮೆದಾರರು ಪಾಲ್ಗೊಳ್ಳಲಿದ್ದಾರೆ.

ಶಿಶಿಕ್ಷು ತರಬೇತಿಗೆ ಐಟಿಐ ಪಾಸಾದ ಆಸಕ್ತ ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ತಪ್ಪದೇ ಹಾಜರಾಗಬೇಕು ಎಂದು ಪ್ರಕಟಣೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+