ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗ; ನವೆಂಬರ್ 30ರಂದು ಮಿನಿ ಉದ್ಯೋಗ ಮೇಳ

|
Google Oneindia Kannada News

ಶಿವಮೊಗ್ಗ, ನವೆಂಬರ್ 29; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ನವೆಂಬರ್ 30 ಮಿನಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ಆರಂಭವಾಗಲಿದೆ. ಆಸಕ್ತರು ಪಾಲ್ಗೊಳ್ಳಬಹುದಾಗಿದೆ.

ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ; 376 ಹುದ್ದೆ ಬ್ಯಾಂಕ್ ಆಫ್ ಬರೋಡಾ ನೇಮಕಾತಿ; 376 ಹುದ್ದೆ

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳಿಗೆ 18 ರಿಂದ 35ವರ್ಷ ವಯೋಮಿತಿ ನಿಗದಿ ಮಾಡಲಾಗಿದೆ. ತಮ್ಮ ಬಯೋಡಾಟ ಮತ್ತು ಆಧಾರ್ ಕಾರ್ಡ್‌ನೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.

ವಿಳಾಸ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸಾಗರ ರಸ್ತೆ ಗುತ್ಯಪ್ಪ ಕಾಲೋನಿ, ಪಂಪಾನಗರದ 2ನೇ ತಿರುವು, ಶಿವಮೊಗ್ಗ.

Job Fair

ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನೇಮಕಾತಿ; ಅರ್ಜಿ ಹಾಕಿ ಎಣ್ಣೆಬೀಜ ಬೆಳೆಗಾರರ ಸಹಕಾರ ಸಂಘಗಳ ಒಕ್ಕೂಟ ನೇಮಕಾತಿ; ಅರ್ಜಿ ಹಾಕಿ

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-255293, 9535312531/ 9482023412 ಸಂಖ್ಯೆಗೆ ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕುರಿ ಹಾಗೂ ಮೇಕೆ ಸಾಕಾಣಿಕೆ ತರಬೇತಿ; ಕಲಬುರಗಿಯ ಸೇಡಂ ರಸ್ತೆಯಲ್ಲಿರುವ ಪಶು ಆಸ್ಪತ್ರೆ ಆವರಣದಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಕಲಬುರಗಿ, ಯಾದಗಿರಿ ಹಾಗೂ ರಾಯಚೂರ ಜಿಲ್ಲೆಗಳ ರೈತರಿಗೆ 2021ರ ಡಿಸೆಂಬರ್ 9 ಹಾಗೂ 10 ರಂದು ವೈಜ್ಞಾನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ಹಾಗೂ ಡಿಸೆಂಬರ್ 14 ಹಾಗೂ 15 ರಂದು ವೈಜ್ಞಾನಿಕ ಹೈನುಗಾರಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.

ಜನತಾ ಸೇವಾ ಸಹಕಾರಿ ಬ್ಯಾಂಕ್ ನೇಮಕಾತಿ; ಬೆಂಗಳೂರಲ್ಲಿ ಕೆಲಸ ಜನತಾ ಸೇವಾ ಸಹಕಾರಿ ಬ್ಯಾಂಕ್ ನೇಮಕಾತಿ; ಬೆಂಗಳೂರಲ್ಲಿ ಕೆಲಸ

ತರಬೇತಿಗೆ ಹಾಜರಾಗುವ ರೈತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಮತ್ತು ಮಾಸ್ಕ್‌ ಅನ್ನು ಅವರೇ ತರಬೇಕು. ರೈತರಿಗೆ ಯಾವುದೇ ಭತ್ಯೆ ಇರುವುದಿಲ್ಲ. ಮಧ್ಯಾಹ್ನ ಅಲ್ಪ ಉಪಹಾರ ನೀಡಲಾಗುತ್ತದೆ. ಎರಡು ದಿನಗಳ ಕಾಲ ಕಡ್ಡಾಯವಾಗಿ ತರಬೇತಿಗೆ ಹಾಜರಾದವರಿಗೆ ಮಾತ್ರ ತರಬೇತಿ ಪ್ರಮಾಣಪತ್ರ ನೀಡಲಾಗುತ್ತದೆ.

ಈ ತರಬೇತಿಗೆ ಹಾಜರಾಗುವ ರೈತರು ಅರ್ಜಿಯ ಜೊತೆಗೆ ಎರಡು ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ, ಆಧಾರ ಕಾರ್ಡ್ ಪ್ರತಿ ಲಗತ್ತಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಜಾತಿ ಪ್ರಮಾಣಪತ್ರ ಲಗತ್ತಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಪಶು ಪಾಲನೆ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ಸೇಡಂ ರಸ್ತೆ ಕಲಬುರಗಿ ವಿಳಾಸಕ್ಕೆ ಅಥವಾ ಕಚೇರಿ ದೂರವಾಣಿ ಸಂಖ್ಯೆ 08472-220576ಗೆ ಸಂಪರ್ಕಿಸಲು ಕೋರಲಾಗಿದೆ.

ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ; ಕೊಪ್ಪಳ ಜಿಲ್ಲೆಯ 7 ತಾಲ್ಲೂಕುಗಳ ಆಯ್ದ 122 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿತ್ತು. 6 ತಾಲ್ಲೂಕುಗಳ ಒಟ್ಟು 15 ಗ್ರಾಮ ಪಂಚಾಯಿತಿಗಳಿಗೆ ಯಾವುದೇ ಅರ್ಜಿಗಳು ಸ್ವೀಕೃತವಾಗಿರದ ಹಿನ್ನೆಲೆಯಲ್ಲಿ ಖಾಲಿ ಉಳಿದ ಹುದ್ದೆ ಭರ್ತಿಗೆ ಮರು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಕೊಪ್ಪಳ ತಾಲ್ಲೂಕಿನ ಬೆಟಗೇರಿ, ಬಿಸರಹಳ್ಳಿ, ಕಲಕೇರಿ, ಕೋಳೂರು, ಕುಷ್ಟಗಿ ತಾಲ್ಲೂಕಿನ ತುಗ್ಗಲದೋಣಿ, ಕನಕಗಿರಿ ತಾಲ್ಲೂಕಿನ ನವಲಿ, ಯಲಬುರ್ಗಾ ತಾಲ್ಲೂಕಿನ ಮುರಡಿ, ಮಾಟಲದಿನ್ನಿ, ವಣಗೇರಿ, ಹಿರೇಅರಳಿಹಳ್ಳಿ, ಚಿಕ್ಕಮ್ಯಾಗೇರಿ, ಕುಕನೂರು ತಾಲ್ಲೂಕಿನ ಮಂಗಳೂರು, ಶಿರೂರು ಹಾಗೂ ಗಂಗಾವತಿ ತಾಲ್ಲೂಕಿನ ಆನೆಗುಂದಿ ಮತ್ತು ಮಲ್ಲಾಪುರ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಮಹಿಳೆಯರು ಅರ್ಜಿ ಸಲ್ಲಿಸಬಹುದು.

ಹುದ್ದೆಗೆ ನೇಮಕವಾದವರಿಗೆ ಮಾಸಿಕ ಗೌರವಧನ 6000 ರೂ.ಗಳನ್ನು ನೀಡಲಾಗುವುದು. ಕಾರ್ಯನಿರ್ವಹಣೆ ಆಧರಿಸಿ 5000 ರೂ.ಗಳ ಪ್ರೋತ್ಸಾಹಧನವನ್ನು ನೀಡಲಾಗುವುದು. ಅರ್ಜಿಯನ್ನು ಡಿಸೆಂಬರ್ 6 ಮಧ್ಯಾಹ್ನ 01.30 ಗಂಟೆಯೊಳಗೆ ಸಲ್ಲಿಸಬೇಕು. ನಿಗದಿತ ದಿನಾಂಕ ಮತ್ತು ಸಮಯದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವ ಮಹಿಳೆಯರು ಆಯಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಾಗಿರಬೇಕು. ಕನಿಷ್ಟ 10ನೇ ತರಗತಿ ಉತ್ತೀರ್ಣರಾಗಿರಬೇಕು. ದಿನಾಂಕ 1/1/2021ಕ್ಕೆ ಅನ್ವಯಿಸುವಂತೆ ಅಭ್ಯರ್ಥಿ ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್‌ಕಾರ್ಡ್ ಹೊಂದಿರಬೇಕು.

ಕಳೆದ 3 ವರ್ಷಗಳಲ್ಲಿ (2018-19, 2019-20 ಮತ್ತು 2020-21) ಕನಿಷ್ಟ 2 ವರ್ಷ ಯೋಜನೆಯಡಿ ಅಕುಶಲ ಕಾರ್ಮಿಕರಾಗಿ ಕೆಲಸ ನಿರ್ವಹಿಸಿರಬೇಕು. ವಯೋಮಿತಿಯು ದಿನಾಂಕ 1/1/2021ಕ್ಕೆ ಅನ್ವಯಿಸುವಂತೆ 45 ವರ್ಷ ಮೀರಿರಬಾರದು. ಓದು ಬರಹ ತಿಳಿದಿರಬೇಕು. ಪರಿಣಾಮಕಾರಿ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೋಮದಿಗೆ ಸ್ಪಂದಿಸುವ ಗುಣಲಕ್ಷಣ ಹೊಂದಿರಬೇಕು.

Recommended Video

ಕೃಷಿ ಕಾಯ್ದೆ ರದ್ದತಿ ಮಸೂದೆ ಮಂಡಿಸಲು ಸರ್ಕಾರದ ಸಿದ್ಧತೆ ಹೇಗಿದೆ? | Oneindia Kannada

ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲ್ಲೂಕು ಪಂಚಾಯತಿ ಅಥವಾ ಗ್ರಾಮ ಪಂಚಾಯತಿಗಳಿಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
Shivamogga district employment exchange office organized job fair on November 30. 18 to 35 age group candidates can attended the job fair.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X