ಶಿವಮೊಗ್ಗ; ನ. 8ರಂದು ಉದ್ಯೋಗ ಮೇಳ, 7 ಸಾವಿರ ಹುದ್ದೆಗಳು

ಶಿವಮೊಗ್ಗ, ನವೆಂಬರ್ 06: ಶಿವಮೊಗ್ಗ ನಗರದಲ್ಲಿ ನವೆಂಬರ್ 8ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಸುಮಾರು 7 ಸಾವಿರ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತರು ಸದುಪಯೋಗ ಪಡಿಸಿಕೊಳ್ಳುವಂತೆ ಕರೆ ನೀಡಲಾಗಿದೆ.

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಆಯುಕ್ತಾಲಯ, ಕರ್ನಾಟಕ ಕೌಶಲ ಅಭಿವೃದ್ಧಿ ನಿಗಮ ಹಾಗೂ ಶಿವಮೊಗ್ಗ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಜಿಲ್ಲಾ ಪಂಚಾಯಿತಿ ಜಂಟಿಯಾಗಿ ಉದ್ಯೋಗ ಮೇಳ ಆಯೋಜನೆ ಮಾಡಿವೆ.

Job Fair In Shivamogga On November 8

ನವೆಂಬರ್ 8ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯ ತನಕ ಸರ್ಕಾರಿ ಪದವಿ ಪೂರ್ವ ಕಾಲೇಜು, ಸೈನ್ಸ್ ಫೀಲ್ಡ್, ಬಿಹೆಚ್‌ ರೋಡ್, ಶಿವಮೊಗ್ಗ ಇಲ್ಲಿ ಉದ್ಯೋಗ ಮೇಳ ನಡೆಯಲಿದೆ. ಸುಮಾರು 7 ಸಾವಿರ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ ಎಸ್ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಡಿಗ್ರಿ, ಸ್ನಾತಕೋತ್ತರ ಪದವಿ ಮತ್ತು ಇಂಜಿನಿಯರಿಂಗ್ ಪದವಿ ಪಡೆದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ. ರೆಸ್ಯೂಮ್ ಮತ್ತು ಸೂಕ್ತ ವಿದ್ಯಾರ್ಹತೆಯ ದಾಖಲೆಗಳ 10 ಪ್ರತಿ ಜೆರಾಕ್ಸ್ ಜೊತೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು ಎಂದು ಮಾಹಿತಿ ನೀಡಲಾಗಿದೆ.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು
https://skillconnect.kaushalkar.com/candidatereg ಲಿಂಕ್ ಮೂಲಕ ನೋಂದಣಿ ಮಾಡಿಕೊಳ್ಳಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಲು ದೂರವಾಣಿ ಸಂಖ್ಯೆಗಳು 08182-255294, 9019485688, 9880005425.

ವಿವಿಧ ಯೋಜನೆಯಡಿ ಅರ್ಜಿ ಆಹ್ವಾನ; 2023-24ನೇ ಸಾಲಿಗೆ ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ದಿ ನಿಗಮ, ಕರ್ನಾಟಕ ಆದಿಜಾಂಬವ ಅಭಿವೃದ್ದಿ ನಿಗಮ, ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ನಿಗಮಗಳಿಂದ ವಿವಿಧ ಯೋಜನೆ ಅನುಷ್ಠಾನಗೊಳಿಸಲಾಗುತ್ತಿದೆ.

ಯೋಜನೆಗಳಡಿ ಸ್ವಯಂ ಉದ್ಯೋಗ ಯೋಜನೆ (ನೇರಸಾಲ), ಉದ್ಯಮಶೀಲತಾ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಮೈಕ್ರೋ ಕ್ರೆಡಿಟ್ (ಪ್ರೇರಣಾ) ಯೋಜನೆ, ಭೂ ಒಡೆತನ ಯೋಜನೆ, ಗಂಗಾ ಕಲ್ಯಾಣ ಯೋಜನೆಗಳಿಗೆ ಆಯಾ ಸಮುದಾಯಗಳ ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಸೇವಾಸಿಂಧು ಪೋರ್ಟಲ್ http://sevasindhu.karantaka.gov.in ಮೂಲಕ ಕರ್ನಾಟಕ ಒನ್, ಗ್ರಾಮ್-ಒನ್, ಹುಬ್ಬಳ್ಳಿ-ಧಾರವಾಡ ಒನ್ ಕೇಂದ್ರಗಳಲ್ಲಿ ನವೆಂಬರ್‌ 29ರೊಳಗೆ ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಿದ ಫಲಾನುಭವಿಗಳ ಅರ್ಜಿಗಳನ್ನು ಶಾಸಕರ ಅಧ್ಯಕ್ಷತೆಯಲ್ಲಿರುವ ಆಯ್ಕೆ ಸಮಿತಿಯ ಮೂಲಕ ಆಯಾ ಯೋಜನೆಗಳ ಭೌತಿಕ ಗುರಿಗೆ ಅನುಗುಣವಾಗಿ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುತ್ತದೆ ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ ಮತ್ತು ಡಾ. ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+