ಶಿವಮೊಗ್ಗ: ಅಕ್ಟೋಬರ್ 8ರಂದು ಉದ್ಯೋಗ ಮೇಳ

ಶಿವಮೊಗ್ಗ, ಅಕ್ಟೋಬರ್ 07: ಶಿವಮೊಗ್ಗದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳು ಗಮನಿಸಿ. ಶಿವಮೊಗ್ಗದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ ಮತ್ತು ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ಪಾಲ್ಗೊಳ್ಳಬಹುದು, ಕೆಲಸವನ್ನು ಪಡೆಯಬಹುದಾಗಿದೆ. ವಿವರಗಳು ಹೀಗಿವೆ.

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಅಕ್ಟೋಬರ್ 8ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ.

Job Fair In Shivamogga On October 8 Details

ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಮತ್ತು ಇತರೆ ಪದವಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

ಬಯೋಡೆಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಪ್ರವೇಶ ಉಚಿತವಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಪಂಪನಗರ, ಸಾಗರ ರಸ್ತೆ, ಶಿವಮೊಗ್ಗ ಇವರನ್ನು ಸಂಪರ್ಕಿಸಿ. ದೂರವಾಣಿ ಸಂಖ್ಯೆಗಳು 08182-255293/ 9380663606/ 9535312531.

ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳ ಭರ್ತಿ: 2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅಕ್ಟೋಬರ್ 9 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30ರ ವರೆಗೆ ಅರ್ಜಿ ನಮೂನೆಯನ್ನು ಎನ್.ಹೆಚ್.ಎಂ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿಯ ಆವರಣ, ಬಿ. ಹೆಚ್. ರಸ್ತೆ, ಶಿವಮೊಗ್ಗ ಇಲ್ಲಿ ವಿತರಿಸಲಾಗುವುದು ಹಾಗೂ ಅದೇ ದಿನ ಎಲ್ಲಾ ಹುದ್ದೆಯ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಸಂಜೆ 5.30 ರವರೆಗೆ ನಡೆಸಲಾಗುತ್ತದೆ.

ವೈದ್ಯರು, ಸಿಹೆಚ್, ಐಸಿಯು- ಹೆಚ್‌ಡಿಯು, ಎಮ್‌ಹೆಚ್, ಐಸಿಯು- ಹೆಚ್‌ಡಿಯು, ಎನ್‌ಆರ್‌ಸಿ ವಿಭಾಗಕ್ಕೆ 28 ಹುದ್ದೆಗಳು, ವಿದ್ಯಾರ್ಹತೆ ಎಂ.ಬಿ.ಬಿಎಸ್, ಐಸಿಯು ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ ಇಂಟರ್ನ್‌ಶಿಪ್ ಪೂರೈಸಿರಬೇಕು ಹಾಗೂ ಕೆ.ಎಂ.ಸಿ ಯ ನೋಂದಣಿಯನ್ನು ಹೊಂದಿರತಕ್ಕದ್ದು.

ಆಡಿಯೋಮೆಟ್ರಿಕ್ ಅಸಿಸ್ಟೆಂಟ್, ಎನ್‌ಪಿಪಿಸಿಡಿ ವಿಭಾಗ 01 ಹುದ್ದೆ, ವಿದ್ಯಾರ್ಹತೆ ಒಂದು ವರ್ಷದ ಡಿಪ್ಲೋಮಾ ಇನ್ ಹಿಯರಿಂಗ್ ಲ್ಯಾಂಗ್ವೇಜ್ ಹೊಂದಿರುವ ತಾಂತ್ರಿಕ ವ್ಯಕ್ತಿ (ಡಿ.ಹೆಚ್.ಎಲ್.ಎಸ್) ಮತ್ತು ಆರ್.ಸಿ.ಐ ಸಂಸ್ಥೆಯಿಂದ ಮಾನ್ಯತೆ ಪಡೆದಿರುವ ಪ್ರಮಾಣ ಪತ್ರ.

ಎನ್‌ಪಿಪಿಸಿಡಿ ವಿಭಾಗಕ್ಕೆ ಶ್ರವಣದೋಷವುಳ್ಳ ಮಕ್ಕಳ ಬೋಧಕರು, 01 ಹುದ್ದೆ, ವಿದ್ಯಾರ್ಹತೆ ಯುವ ಕಿವುಡ ಮತ್ತು ಶ್ರವಣ ನ್ಯೂನತೆಯ ತರಬೇತಿಯಲ್ಲಿ ಡಿಪ್ಲೋಮಾ (ಡಿ.ಟಿ.ವೈ.ಹೆಚ್.ಹೆಚ್) ಹೊಂದಿರುವುದು ಹಾಗೂ ಆರ್.ಸಿ.ಐ ಸಂಸ್ಥೆಯಿಂದ ಮಾನ್ಯತೆ ಪಡೆದಿರುವ ಪ್ರಮಾಣ ಪತ್ರ.

ಡಿಇಐಸಿ ವಿಭಾಗ ಕ್ಕೆ ಡಿಇಐಸಿ ಮ್ಯಾನೇಜರ್, 01 ಹುದ್ದೆ, ವಿದ್ಯಾರ್ಹತೆ ಎಂಡಿಆರ್‌ಎ, ಆರ್‌ಸಿಐ ಅಥವಾ ಸ್ನಾತಕೋತ್ತರ ಪಧವಿ, ಡಿಪ್ಲೋಮಾ ಇನ್ ಹಾಸ್ಪಿಟಲ್, ಹೆಲ್ತ್ ಮ್ಯಾನೇಜ್ ಮೆಂಟ್ ಅಥವಾ ಎಮ್‌ಬಿಎ ಹಾಸ್ಪಿಟಲ್ ಮ್ಯಾನೇಜ್ ಮೆಂಟ್ ಆಗಿರಬೇಕು.

ಎನ್‌ಹೆಚ್‌ಎಂ ಮಾರ್ಗಸೂಚಿಯಂತೆ ನೇಮಕಾತಿಯು ಮೇರಿಟ್ ಕಂ ರೋಸ್ಟರ್ ಆಧಾರದ ಮೇಲೆ ಮೇಲಿನ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಸಂಬಂಧಪಟ್ಟ ಹುದ್ದೆಯ ಸ್ವಯಂ ದೃಢೀಕರಿಸಿದ ದಾಖಲೆಗಳ ನಕಲು ಪ್ರತಿ, ಇತ್ತೀಚಿನ ಭಾವಚಿತ್ರ, 2-5 ವರ್ಷಗಳ ಅನುಭವ ಪ್ರಮಾಣ ಪತ್ರ, ಗುರುತಿನ ಚೀಟಿ, ಜಾತಿ ಪ್ರಮಾಣ ಪತ್ರ, ಹಾಗೂ ಖಾಯಂ ವಿಳಾಸ ಸ್ವವಿವರದೊಂದಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-200337 ಸಂಪರ್ಕಿಸಬಹುದು ಹಾಗೂ ಪ್ರತಿ ತಿಂಗಳ 3ನೇ ಸೋಮವಾರದಂದು (ಸಾರ್ವಜನಿಕ ರಜೆ ಇದ್ದಲ್ಲಿ ನಂತರದ ದಿನದಲ್ಲಿ) ವೈದ್ಯರ ಹುದ್ದೆಗಳು ಭರ್ತಿ ಆಗುವ ತನಕ ನೇರ ಸಂದರ್ಶನ ನಡೆಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+