ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗದಲ್ಲಿ ಸೆಪ್ಟೆಂಬರ್ 14ರಂದು ಉದ್ಯೋಗ ಮೇಳ

|
Google Oneindia Kannada News

ಶಿವಮೊಗ್ಗ, ಸೆಪ್ಟೆಂಬರ್ 10; ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸೆಪ್ಟೆಂಬರ್ 14ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. 5ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಮೇಳದಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುತ್ತಿವೆ.

ಸೆಪ್ಟೆಂಬರ್ 14ರ ಮಂಗಳವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಯಮ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. 18 ರಿಂದ 35 ವರ್ಷದ ವಯೋಮಾನದವರು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; ವಿವರ ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಸಬ್ ಇನ್ಸ್‌ಪೆಕ್ಟರ್ ನೇಮಕಾತಿ; ವಿವರ

ಎಸ್‌. ಎಸ್. ಎಲ್. ಸಿ., ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿಯಲ್ಲಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ

Job Fair In Shivamogga On September 14

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಜೊತೆಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಯನ್ನು ಮಾಡಿಕೊಳ್ಳಲಾಗುತ್ತದೆ.

ಬ್ಯಾಂಕ್ ಆಫ್ ಮಹಾರಾಷ್ಟ್ರ ನೇಮಕಾತಿ; 190 ಹುದ್ದೆಗಳು ಬ್ಯಾಂಕ್ ಆಫ್ ಮಹಾರಾಷ್ಟ್ರ ನೇಮಕಾತಿ; 190 ಹುದ್ದೆಗಳು

ಉದ್ಯೋಗ ಮೇಳದಲ್ಲಿ ಭಾಗವಹಿಸಲು ಆಸಕ್ತಿ ಇರುವವರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08182-255294.

ಉದ್ಯೋಗ ಮೇಳ ನಡೆಯುವ ಸ್ಥಳ; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾ ನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ.

ಸಮಾಲೋಚಕರ ಹುದ್ದೆ ಭರ್ತಿ; ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಸಮಾಲೋಚಕರ ಹುದ್ದೆಯನ್ನು ಭರ್ತಿ ಮಾಡಲು ಅರ್ಜಿಯನ್ನು ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಲು ಸೆಪ್ಟೆಂಬರ್ 25 ಕೊನೆಯ ದಿನವಾಗಿದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅನುದಾನದಡಿ ನಿರ್ವಹಿಸಲಾಗುವ ಹರಿಹರದಲ್ಲಿನ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರದಲ್ಲಿ ಖಾಲಿ ಇರುವ ಸಮಾಲೋಚಕರ ಹುದ್ದೆಯನ್ನು ಗೌರವಧನದ ಆಧಾರದ ಮೇಲೆ ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ.

ಆಯ್ಕೆಯಾದ ಸಮಾಲೋಚಕರಿಗೆ ಪ್ರತಿ ತಿಂಗಳು 15,000 ರೂ.ಗಳ ಗೌರವಧನ ನೀಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 45 ವರ್ಷಗಳು.

ಅರ್ಜಿ ಸಲ್ಲಿಸುವವರು ಎಂ. ಎಸ್. ಡಬ್ಲ್ಯೂ, ಎಂ.ಎ (ಸೈಕಾಲಜಿ/ ಸೋಷಿಯಾಲಜಿ/ ಎಂ.ಎಸ್) ಕೌನ್ಸಲಿಂಗ್ ಮತ್ತು ಸೈಕೋಥೆರಪಿ ಜೊತೆಗೆ ಒಂದು ವರ್ಷದ ಕಂಪ್ಯೂಟರ್ ನಿರ್ವಹಣೆ ಅನುಭವ ಹೊಂದಿರಬೇಕು.

ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 25 ಕೊನೆಯ ದಿನವಾಗಿದೆ. ಅಗತ್ಯ ದಾಖಲೆಗಳನ್ನು ಲಗತ್ತಿಸಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08192-244045, 9845908219, 9742550797.

ಅರ್ಜಿಗಳನ್ನು ಸಲ್ಲಿಸಲು ವಿಳಾಸ; ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ, ಆಸ್ಪತ್ರೆ ರಸ್ತೆ, ಮೋಚಿ ಕಾಲೋನಿ, ಹರಿಹರ.

ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ನೇಮಕಾತಿ; ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ನಲ್ಲೂರು ಹಾಗೂ ಜಗಳೂರು ತಾಲ್ಲೂಕಿನ ಗುತ್ತಿದುರ್ಗ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗಳನ್ನು ಭರ್ತಿ ಮಾಡಲು ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

ಆಯ್ಕೆಯಾದ ಕಾರ್ಯಕರ್ತರಿಗೆ ಪ್ರತಿ ತಿಂಗಳು 6,000 ರೂ. ಗಳ ಗೌರವಧನ ನೀಡಲಾಗುತ್ತದೆ. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 18 ರಿಂದ 45 ವರ್ಷದ ವಯೋಮಾನದವರಾಗಿರಬೇಕು. ಅಭ್ಯರ್ಥಿಗಳು ಎಸ್. ಎಸ್. ಎಲ್. ಸಿ. ಉತ್ತೀರ್ಣ ಅಥವಾ ಅನುತ್ತೀರ್ಣರಾಗಿರಬೇಕು. ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಆಸಕ್ತರು ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 18 ಕೊನೆಯ ದಿನವಾಗಿದೆ. ಆಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸವಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.

ಆಸಕ್ತರು ಅರ್ಜಿ ಹಾಗೂ ಇತರೆ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಛೇರಿ, ಶಂಕರಲೀಲಾ ಗ್ಯಾಸ್ ಏಜೆನ್ಸಿ ಹತ್ತಿರ, ಎಂ.ಸಿ.ಸಿ. 'ಬಿ' ಬ್ಲಾಕ್ ದಾವಣಗೆರೆ ಇಲ್ಲಿಗೆ ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08192-263939.

English summary
Shivamogga district employment exchange office organized job fair in Shivamogga on September 14, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X