ಶಿವಮೊಗ್ಗದಲ್ಲಿ ಸೆಪ್ಟೆಂಬರ್ 27ರಂದು ಉದ್ಯೋಗ ಮೇಳ
ಶಿವಮೊಗ್ಗ, ಸೆಪ್ಟೆಂಬರ್ 25 : ಶಿವಮೊಗ್ಗದಲ್ಲಿ ಸೆಪ್ಟೆಂಬರ್ 27ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಮೇಳಕ್ಕೆ ಪ್ರವೇಶ ಉಚಿತವಾಗಿದ್ದು, ಯುವಕ/ಯುವತಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಶಿವಮೊಗ್ಗ ಜಂಟಿಯಾಗಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಿವೆ.
10ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿದ್ದು, ವಿವಿಧ ಹುದ್ದೆಗಳಿಗೆ ನೇರ ನೇಮಕಾತಿಯನ್ನು ಮಾಡಿಕೊಳ್ಳಲಿವೆ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಯಾವುದೇ ಪದವಿ ಪಡೆದ ಯುವಕ/ಯುವತಿಯರು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ. ವಯೋಮಿತಿ 18 ರಿಂದ 35 ವರ್ಷಗಳು.
ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವವರು 5 ಸೆಟ್ ರೆಸ್ಯೂಮ್‌ಗಳನ್ನು ತರಬೇಕು ಎಂದು ಪ್ರಕಟಣೆಯಲ್ಲಿ ಸೂಚಿಸಲಾಗಿದೆ. ಸೆಪ್ಟೆಂಬರ್ 27ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ಆರಂಭವಾಗಲಿದೆ.
ಉದ್ಯೋಗ ಮೇಳ ನಡೆಯುವ ವಿಳಾಸ : ಜಿಲ್ಲಾ ಉದ್ಯೋಗ ವಿನಿಯ ಕಚೇರಿ, ಗುತ್ಯಪ್ಪ ಕಾಲೋನಿ, 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ
ಹೆಚ್ಚಿನ ಮಾಹಿತಿಗಾಗಿ 08182-255293 ಸಂಖ್ಯೆಗೆ ಕರೆ ಮಾಡಬಹುದಾಗಿದೆ.












Click it and Unblock the Notifications