ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗದಲ್ಲಿ ಆಗಸ್ಟ್‌ 6ರಂದು ಮಿನಿ ಉದ್ಯೋಗ ಮೇಳ

|
Google Oneindia Kannada News

ಶಿವಮೊಗ್ಗ, ಆಗಸ್ಟ್ 03; ಶಿವಮೊಗ್ಗದಲ್ಲಿ ಆಗಸ್ಟ್ 6ರಂದು ಮಿನಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

ಜಿಲ್ಲಾ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‍ಮೆಂಟ್ ಕಾಲೇಜು ವತಿಯಿಂದ ಈ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಐಬಿಪಿಎಸ್ ನೇಮಕಾತಿ 2022; ಯಾವ ಬ್ಯಾಂಕ್‌ಗಳಲ್ಲಿ ಎಷ್ಟು ಹುದ್ದೆಗಳಿವೆಐಬಿಪಿಎಸ್ ನೇಮಕಾತಿ 2022; ಯಾವ ಬ್ಯಾಂಕ್‌ಗಳಲ್ಲಿ ಎಷ್ಟು ಹುದ್ದೆಗಳಿವೆ

ಆಗಸ್ಟ್ 6ರಂದು ಬೆಳಗ್ಗೆ 10ರಿಂದ ಸಂಜೆ 4 ಗಂಟೆವರೆಗೆ ಮಿನಿ ಉದ್ಯೋಗ ಮೇಳ ಪಿಇಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ & ಮ್ಯಾನೇಜ್‍ಮೆಂಟ್ ಕಾಲೇಜು, ಶಿವಮೊಗ್ಗ ಇಲ್ಲಿ ನಡೆಯಲಿದೆ.

ಕೆಎಸ್‌ಆರ್‌ಟಿಸಿಗೆ ಹೊರಗುತ್ತಿಗೆ ಆಧಾರದಲ್ಲಿ ಚಾಲಕರ ನೇಮಕಾತಿ ಕೆಎಸ್‌ಆರ್‌ಟಿಸಿಗೆ ಹೊರಗುತ್ತಿಗೆ ಆಧಾರದಲ್ಲಿ ಚಾಲಕರ ನೇಮಕಾತಿ

Job Fair In Shivamogga PES Institute On August 6th

ಯಾವುದೇ ಪದವಿ ಹೊಂದಿದ ಅಭ್ಯರ್ಥಿಗಳು ಆನ್‍ಲೈನ್ ಲಿಂಕ್ https://forms.gle/8F4Uw5ieZFWCxnju5 ಮೂಲಕ ತಮ್ಮ ಹೆಸರನ್ನು ನೊಂದಾಯಿಸಿಕೊಂಡು ಮೇಳದಲ್ಲಿ ಪಾಲ್ಗೊಳ್ಳಬಹುದು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-255294ಗೆ ಕರೆ ಮಾಡಬಹುದಾಗಿದೆ. ಮೊಬೈಲ್ ಸಂಖ್ಯೆ 8217478207.

ಕೊಪ್ಪಳ; ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ ಕೊಪ್ಪಳ; ಅತಿಥಿ ಬೋಧಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಆಗಸ್ಟ್ 7ರಂದು ಸಂದರ್ಶನ; ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಉದಯೋನ್ಮುಖ ಯೋಜನೆಯಾದ ಅಂತರರಾಷ್ಟ್ರೀಯ ವಲಸೆ ಕೇಂದ್ರ ಕರ್ನಾಟಕ ಮುಖಾಂತರ ದುಬೈನಲ್ಲಿರುವ ಬೃಹತ್ ಕಟ್ಟಡ ನಿರ್ಮಾಣ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ.

ಇದಕ್ಕಾಗಿ ಆಗಸ್ಟ್ 7 ರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಸಂದರ್ಶನ ಆಯೋಜನೆ ಮಾಡಲಾಗಿದೆ. ಈ ಸಂದರ್ಶನ ಗುಲಬರ್ಗಾ ಟೆಕ್ನಿಕಲ್ ಟ್ರೇನಿಂಗ್ ಇನ್‍ಸ್ಟಿಟ್ಯೂಟ್ ಪ್ರೈ.ಲೀ., ಕೆಐಎಡಿಬಿ ಕೈಗಾರಿಕಾ ಪ್ರದೇಶ, 2ನೇ ಹಂತ, ಬೇಲೂರು ಕ್ರಾಸ್ ಸಮೀಪ, ಮೈಲಾರಲಿಂಗ ದಾಲ್‍ಮಿಲ್ ಕಂಪೌಂಡ್, ಕಲಬುರಗಿ ಇಲ್ಲಿ ನಡೆಯಲಿದೆ.

100 ಜನ ಟೈಲ್ ಮೇಸ್ತ್ರಿಗಳು ಹಾಗೂ 100 ಮಾರ್ಬಲ್ ಮೇಸ್ತ್ರಿಗಳ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ ಎಂದು ಕಲಬುರಗಿ ಜಿಲ್ಲಾ ಕೌಶಲ್ಯ ಮಿಷನ್‍ನ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಮುರಳೀಧರ್ ರತ್ನಗಿರಿ ತಿಳಿಸಿದ್ದಾರೆ.

ಟೈಲ್ ಮೇಸ್ತ್ರೀ (ಹುದ್ದೆಗೆ 2 ವರ್ಷಕ್ಕಿಂತ ಹೆಚ್ಚು ಅನುಭವ ಉಳ್ಳವರಿಗೆ 1000-1200 ಯುಎಇ ದಿರ್ಹಾಮ್ (ಭಾರತೀಯ ರೂ. 21,720 - 26,064) ವೇತನ ಹಾಗೂ ಹೊಸಬರಿಗೆ 850-950 ಯುಎಇ ದಿರ್ಹಾಮ್ (ಭಾರತೀಯ ರೂ.18,462 - 20,634) ವೇತನ ಇರುತ್ತದೆ.

ಮಾರ್ಬಲ್ ಮೇಸ್ತ್ರೀ ಹುದ್ದೆಗೆ 2 ವರ್ಷ ಕ್ಕಿಂತ ಹೆಚ್ಚು ಅನುಭವ ಉಳ್ಳವರಿಗೆ 1000-1200 ಯುಎಇ ದಿರ್ಹಾಮ್ (ಭಾರತೀಯ ರೂ. 21,720-26,064) ವೇತನ ಹಾಗೂ ಹೊಸಬರಿಗೆ 850-950 ಯುಎಇ ದಿರ್ಹಾಮ್ (ಭಾರತೀಯ ರೂ.18, 462 - 20,634) ವೇತನ ನೀಡಲಾಗುತ್ತದೆ.

2 ವರ್ಷಕ್ಕಿಂತ ಹೆಚ್ಚು ಅನುಭವ ಉಳ್ಳವರ ವಯೋಮಿತಿ 24 ರಿಂದ 32 ವರ್ಷದೊಳಗಿರಬೇಕು. ಹೊಸದಾಗಿ ಉದ್ಯೋಗಕ್ಕೆ ಸೇರುವವರಿಗೆ ವಯೋಮಿತಿ 18 ರಿಂದ 23 ವರ್ಷಗಳು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7506450851, 9731750800, 9632214436 ಕರೆ ಮಾಡಬಹುದಾಗಿದೆ.

ತರಬೇತಿಗಾಗಿ ಅರ್ಜಿ ಆಹ್ವಾನ; ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ಉದ್ಯಮಶಿಲತಾಭಿವೃದ್ಧಿ ಕೇಂದ್ರ (ಸಿಡಾಕ್) ಧಾರವಾಡ ಸ್ವಯಂ ಉದ್ಯಮಗಳನ್ನು ಪ್ರಾರಂಭಿಸಲು ಆಸಕ್ತಿಯುಳ್ಳ ಕಲಬುರಗಿ ಜಿಲ್ಲೆಯ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ ಮಹಿಳಾ ಅಭ್ಯರ್ಥಿಗಳಿಗೆ ತರಬೇತಿ ನೀಡಲಿದೆ.

ಆಗಸ್ಟ್ 10ರಿಂದ ಕಲಬುರಗಿಯಲ್ಲಿ ಹತ್ತು ದಿನಗಳ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ನಡೆಯಲಿದೆ. ಈ ತರಬೇತಿಯಲ್ಲಿ ಪಾಲ್ಗೊಳ್ಳಲು ಬಯಸುವವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ತರಬೇತಿಯಲ್ಲಿ ಸ್ವಯಂ ಉದ್ಯಮಗಳ ಬಗ್ಗೆ ಮಾಹಿತಿ, ಉದ್ಯಮಶೀಲತೆ, ಯಶಸ್ವಿ ಉದ್ಯಮಶೀಲರ ಗುಣಲಕ್ಷಣಗಳು, ನಾಯಕತ್ವದ ಗುಣಲಕ್ಷಣಗಳು, ಉದ್ಯಮವನ್ನು ಆಯ್ಕೆ ಮಾಡುವ ವಿಧಾನ, ವ್ಯಾಪಾರೋದ್ಯಮಗಳ ಅವಕಾಶಗಳು, ಉದ್ಯಮಗಳನ್ನು ಪ್ರಾರಂಭಿಸುವ ಹಂತಗಳು, ಸ್ವಯಂ ಉದ್ಯೋಗಕ್ಕೆ ಇರುವ ಸರ್ಕಾರದ ಯೋಜನೆಗಳ ಮಾಹಿತಿ ನೀಡಲಾಗುತ್ತದೆ.

ಬ್ಯಾಂಕ್ ವ್ಯವಹಾರ ಮಾಡುವ ಬಗ್ಗೆ, ಸಾಲ ಮತ್ತು ಹಣಕಾಸು ಮತ್ತು ಹಣಕಾಸೇತರ ಸೌಲಭ್ಯಗಳ ಬಗ್ಗೆ, ಲೆಕ್ಕಪತ್ರ ನಿರ್ವಹಣೆ, ಯೋಜನಾ ವರದಿ ತಯಾರಿಕೆ, ಸಾಲ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸುವಲ್ಲಿ ಸಹಾಯ ನೀಡುವುದು ಹಾಗೂ ಈಗಾಗಲೇ ಸಿಡಾಕ್ ಮುಖಾಂತರ ತರಬೇತಿ ಪಡೆದು ಉದ್ಯಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಹೋಗುತ್ತಿರುವ ಉದ್ಯಮಶೀಲರ ಅನುಭವ ಹಂಚಿಕೆ ಮತ್ತು ಸಂಬಂಧಪಟ್ಟ ವಿಷಯಗಳ ಬಗ್ಗೆ ಅನುಭವಿ ಅತಿಥಿ ಬೋಧಕರಿಂದ ಉಪನ್ಯಾಸ / ಮಾಹಿತಿ ನೀಡಲಾಗುತ್ತದೆ.

ತರಬೇತಿಗೆ ಅರ್ಜಿ ಸಲ್ಲಿಕೆ ಮಾಡಲು ವಯೋಮಿತಿ 20 ರಿಂದ 40 ವರ್ಷ. ಅಭ್ಯರ್ಥಿ ಕನಿಷ್ಠ ಎಸ್. ಎಸ್. ಎಲ್. ಸಿ. ಉತ್ತೀರ್ಣರಾಗಿರಬೇಕು. ನಿಗದಿತ ಅರ್ಜಿ ನಮೂನೆಯಲ್ಲಿ ಅಥವಾ ಬಿಳಿ ಹಾಳೆಯಲ್ಲಿ ಸ್ವ-ವಿವರ ಬರೆದು, ಆಧಾರ ಕಾರ್ಡ್ ಪ್ರತಿ, ರೇಷನ್ ಕಾರ್ಡ್ ಪ್ರತಿ, ಜಾತಿ ಪ್ರಮಾಣಪತ್ರ ಪ್ರತಿ, ಇತ್ತೀಚಿನ 2 ಭಾವಚಿತ್ರ, ವಿದ್ಯಾಭ್ಯಾಸದ ಅಂಕಪಟ್ಟಿ ಪ್ರತಿ ಮತ್ತು ಇತರೆ ಸಂಬಂಧಪಟ್ಟ ದಾಖಲಾತಿಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬೇಕು.

ಅರ್ಜಿಗಳನ್ನು ಜಂಟಿ ನಿರ್ದೇಶಕರು, ಸಿಡಾಕ್, ಜಿಲ್ಲಾ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಸರ್ಕಾರಿ ಬಾಲಕರ ಐಟಿಐ ಆವರಣ, ಎಂ.ಎಸ್.ಕೆ. ಮಿಲ್ ರಸ್ತೆ, ಕಲಬುರಗಿ-585102 ವಿಳಾಸಕ್ಕೆ ಆಗಸ್ಟ್ 6 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 9916006910 / 8618797704 ಸಂಖ್ಯೆಗೆ ಕರೆ ಮಾಡಿ.

English summary
Job fair organized in PES Institute of Technology and Management (PESITM), Shivamogga on August 6tht. Any degree holder can attend job fair.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X