ಶಿವಮೊಗ್ಗ; ಸಹ್ಯಾದ್ರಿ ಕಾಲೇಜಿನಲ್ಲಿ ಫೆ.4ರಂದು ಉದ್ಯೋಗ ಮೇಳ
ಫೆಬ್ರವರಿ 4ರ ಶನಿವಾರ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಒಟ್ಟು 4500 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದಾಗಿದೆ.
ಶಿವಮೊಗ್ಗ, ಜನವರಿ 30; ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಫೆಬ್ರವರಿ 4ರಂದು ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಪ್ರತಿಷ್ಠಿತ ಕಂಪನಿಗಳು ಇದರಲ್ಲಿ ಪಾಲ್ಗೊಳ್ಳಲಿವೆ.
ಕುವೆಂಪು ವಿಶ್ವವಿದ್ಯಾಲಯ, ಬೆಂಗಳೂರಿನ ಗೆಟ್ ಲೆಕ್ಟ್‌ಯುನಿಕ್ಲಬ್ ವತಿಯಿಂದ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ಹೇಳಿದ್ದಾರೆ.
ಫೆಬ್ರವರಿ 4ರ ಶನಿವಾರ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯ ತನಕ ಉದ್ಯೋಗ ಮೇಳ ನಡೆಯಲಿದೆ. ಸಹ್ಯಾದ್ರಿ ಕಾಲೇಜು ಆವರಣದಲ್ಲಿ ನಡೆಯುವ ಮೇಳದಲ್ಲಿ ಸುಮಾರು 10 ಸಾವಿರ ಅಭ್ಯರ್ಥಿಗಳು ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಉದ್ಯೋಗ ಮೇಳದ ಬಗ್ಗೆ ವಿಧಾನ ಪರಿಷತ್ ಸದಸ್ಯ ಡಿ. ಎಸ್. ಅರುಣ್ ಮಾಹಿತಿ ನೀಡಿದ್ದಾರೆ. ಬೆಂಗಳೂರು ಮೂಲದ ಲೆಕ್ಟ್ ಇದುವರೆಗೂ ಹಲವಾರು ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ. ಶಿವಮೊಗ್ಗದಲ್ಲಿ ನಡೆಯುವ ಮೇಳದಲ್ಲಿ 4500 ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ.
ಶಿವಮೊಗ್ಗ ಜಿಲ್ಲೆ ಮಾತ್ರವಲ್ಲದೇ ರಾಜ್ಯದ ಯಾವುದೇ ಜಿಲ್ಲೆಯ ಯುವಕ/ ಯುವತಿಯರು ಉದ್ಯೋಗ ಮೇಳದಲ್ಲಿ ಪಾಳ್ಗೊಳ್ಳಬಹುದಾಗಿದೆ. ಕುವೆಂಪು ವಿಶ್ವವಿದ್ಯಾಲ ವ್ಯಾಪ್ತಿಯ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಯ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ವಿವಿ ಮನವಿ ಮಾಡಿದೆ.
ಈ ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಬಿಎ, ಬಿಕಾಂ, ಬಿಎಸ್‌ಸಿ, ಬಿಬಿಎ, ಎಂಬಿಎ, ಬಿಸಿಎ, ಎಂಸಿಎ, ಡಿಪ್ಲೊಮಾ, ಐಟಿಐ, ಕಂಪ್ಯೂಟರ್ ಕೋರ್ಸ್ ಮಾಡಿರುವ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.
ಯಾವ-ಯಾವ ಕಂಪನಿಗಳು; ಒಂದು ದಿನ ನಡೆಯುವ ಈ ಉದ್ಯೋಗ ಮೇಳದಲ್ಲಿ ಇನ್ಫೋಸಿಸ್, ಆಕ್ಸೆಚಂರ್, ಎಚ್‌ಎಸ್‌ಬಿಸಿ, ಹೆಚ್‌ಸಿಎಲ್ ಟೆಕ್, ಮತ್ತೋಟ್ ಫೈನಾನ್ಸ್, ನೋ ಬ್ರೋಕರ್, ಜನ ಸ್ಮಾಲ್ ಫೈನಾನ್ಸ್ ಬ್ಯಾಂಕ್, ಮೆಡ್ ಪ್ಲಸ್, ಫ್ಲಿಪ್ ಕಾರ್ಟ್, ಅಪೋಲೋ ಫಾರ್ಮಾ, ಹೆಜಿಎಸ್, ಜೆಟ್‌ಕಿಂಗ್, ಎಸ್‌ಬಿಐ ಬ್ಯಾಂಕ್, ಎಕ್ಸ್‌ಪರ್ಟ್ ಕಾಲರ್ಸ್, ಬೈಜೂಸ್, ಯೆಸ್ ಬ್ಯಾಂಕ್, ನಂದಿ ಟೊಯೋಟಾ, ಕೋಟಕ್ ಮಹೀಂದ್ರಾ, ಬೆಂಗಳೂರು ವಿಮಾನ ನಿಲ್ದಾಣ, ಎಲ್ ಎಂಡ್ ಟಿ ಫೈನಾನ್ಸ್ ಸೇರಿದಂತೆ ಹಲವಾರು ಕಂಪನಿಗಳು ಭಾಗವಹಿಸಲಿವೆ.
ಆಸಕ್ತ ಅಭ್ಯರ್ಥಿಗಳು ಗೂಗಲ್ ಫಾರ್ಮ್ ಭರ್ತಿ ಮಾಡಿ ನೋಂದಣಿ ಮಾಡಿಕೊಳ್ಳಬಹುದಾಗಿದೆ.
https://docs.google.com/forms/d/e/1FAIpQLScQSMH6DaKciM9JZn_bYzyGzN901m1H2_cKlS_2MJ58DFxRSA/viewform?vc=0&c=0&w=1&flr=0












Click it and Unblock the Notifications