ಆ. 23 ಶಿವಮೊಗ್ಗದಲ್ಲಿ ಉದ್ಯೋಗ ಮೇಳ, ದಾವಣಗೆರೆಯಲ್ಲಿ ನೇರ ಸಂದರ್ಶನ

ಬೆಂಗಳೂರು, ಆಗಸ್ಟ್ 22: ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ಸಿಹಿಸುದ್ದಿ. ಆಗಸ್ಟ್ 23ರಂದು ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಮತ್ತು ದಾವಣಗೆರೆಯಲ್ಲಿ ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಆಗಸ್ಟ್ 23ರ ಬುಧವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಹಲವು ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ವಿವಿಧ ಹುದ್ದೆಗಳಿಗೆ ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ.

Job Fair In Shivamogga Walk In Interview At Davanagere On August 24

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ ಮತ್ತು ಪದವಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು. 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಭಾಗವಹಿಸಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಖುದ್ದಾಗಿ ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆಗಳು 08182-255293, 9380663606, 9482023412, 9535312531.

ವಾಕ್ ಇನ್ ಸಂದರ್ಶನ; ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರದ ವತಿಯಿಂದ ಆಗಸ್ಟ್ 23ರ ಬುಧವಾರ ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ (ಕೊಠಡಿ.ಸಂ.51)ದಲ್ಲಿ ವಾಕ್ ಇನ್ ಸಂದರ್ಶನ ಆಯೋಜನೆ ಮಾಡಲಾಗಿದೆ.

ಶಾ ಇನ್‍ಫ್ರಾಟವರ್ಸ್ ಪ್ರೈವೇಟ್ ಲಿ. ಅವರು ಭಾಗವಹಿಸುತ್ತಿದ್ದು ಅಪ್ರೆಂಟಿಷಿಪ್ ತರಬೇತಿಗೆ ಐಟಿಐ (ಫಿಟ್ಟರ್, ವೆಲ್ಡರ್, ಎಲೆಕ್ಟ್ರೀಷಿಯನ್, ಸಿಎನ್‍ಸಿ ಆಪರೇಟರ್) ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ನಿಗದಿತ ಸ್ಥಳ ಮತ್ತು ಸಮಯಕ್ಕೆ ಕನಿಷ್ಠ 2 ಸೆಟ್ ಬಯೋಡಾಟಾ ಮತ್ತು ಆಧಾರ್ ಕಾರ್ಡ್‍ನೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಲು ದೂರವಾಣಿ ಸಂಖ್ಯೆ 6361550016, 08192-259446.

ನಿರುದ್ಯೋಗಿ ಯುವಕ/ ಯುವತಿಯರಿಗೆ ತರಬೇತಿ; ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ (ರಿ) ಹಳಿಯಾಳ ನಿರುದ್ಯೋಗಿ ಯುವಕ/ ಯುವತಿಯರಿಗಾಗಿ 10 ದಿನಗಳ ಪಾಸ್ಟ್‌ಫುಢ್ ಸ್ಟಾಲ್ ಉದ್ಯಮ, ಕೋಳಿ ಸಾಕಾಣಿಕೆ, ಹೈನುಗಾರಿಕೆ, ಎರೆಹುಳ ಮತ್ತು ಗೊಬ್ಬರ ತಯಾರಿಕೆ ತರಬೇತಿಯನ್ನು ನೀಡಲಿದೆ.

ಈ ತರಬೇತಿ ಪಡೆಯಲು ಆಸಕ್ತಿ ಇರುವ ಯುವಕ/ ಯುವತಿಯರು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದು. ಉಚಿತ ಕೌಶಲ್ಯಾಧಾರಿತ ತರಬೇತಿಗಾಗಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 18 ರಿಂದ 45 ವರ್ಷದೊಳಗಿರಬೇಕು. ತರಬೇತಿಯು ಊಟ, ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿದ್ದು, ಮೊದಲು ಬಂದವರಿಗೆ ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಹೆಸರು, ವಿಳಾಸಗಳನ್ನು ನೋಂದಾಯಿಸಲು ಸೆಪ್ಟಂಬರ್ 3 ಕೊನೆಯ ದಿನವಾಗಿದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಸ್ಕೀಲ್ಸ್, ಯೋಗ ತರಬೇತಿ ಹಾಗೂ ಬ್ಯಾಂಕಿನಿಂದ ಸಾಲ ಪಡೆದು ಸ್ವ-ಉದ್ಯೋಗ ಪ್ರಾರಂಭಿಸಲು ಬೇಕಾಗುವ ಜ್ಞಾನ, ಸರ್ಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಹಾಗೂ ಇನ್ನಿತರ ಮಾಹಿತಿಗಳನ್ನು ಉಚಿತವಾಗಿ ನೀಡಲಾಗುತ್ತದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಕೆನರಾ ಬ್ಯಾಂಕ್ ದೇಶಪಾಂಡೆ ಆರ್‌ಸೆಟ್ ಸಂಸ್ಥೆ(ರಿ) ಹಳಿಯಾಳ, ಉತ್ತರ ಕನ್ನಡ ಜಿಲ್ಲೆ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 9980510717, 9482188780, 9632225123, 9483485489.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+