ಶಿವಮೊಗ್ಗದಲ್ಲಿ ಜುಲೈ 30ರಂದು ಉದ್ಯೋಗ ಮೇಳ
ಶಿವಮೊಗ್ಗ, ಜುಲೈ 24 : ಶಿವಮೊಗ್ಗದಲ್ಲಿ ಜುಲೈ 30ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. 10ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿದ್ದು ನಿರುದ್ಯೋಗಿ ಯುವಕ/ಯುವತಿಯರು ಮೇಳದ ಸದುಪಯೋಗ ಪಡೆದುಕೊಳ್ಳಬಹುದಾಗಿದೆ.
ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಜುಲೈ 30ರಂದು ಉದ್ಯೋಗ ಮೇಳವನ್ನು ಆಯೋಜಿಸಿದೆ. ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಮೇಳಕ್ಕೆ ಚಾಲನೆ ಸಿಗಲಿದೆ.
ಈ ಉದ್ಯೋಗ ಮೇಳದಲ್ಲಿ 10 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿ, ನೇರ ಸಂದರ್ಶನದ ಮೂಲಕ ವಿವಿಧ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿವೆ. ವಿದ್ಯಾರ್ಹತೆ ಪ್ರಮಾಣ ಪತ್ರ ಸೇರಿದಂತೆ ಅಗತ್ಯ ದಾಖಲೆಗಳ ಜೊತೆ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲಮೋ ಹಾಗೂ ಯಾವುದೇ ಪದವಿ ತೇರ್ಗಡೆಯಾಗಿರುವ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಭಾಗವಹಿಸುವಂತೆ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.
ವಿಳಾಸ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಸಾಗರ ರಸ್ತೆ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಶಿವಮೊಗ್ಗ.












Click it and Unblock the Notifications