ತುಮಕೂರು; ಸೆ. 11ರಂದು ಶಿರಾದಲ್ಲಿ ಉದ್ಯೋಗ ಮೇಳ, ವಿವರ

ತುಮಕೂರು, ಸೆಪ್ಟೆಂಬರ್ 06; ತುಮಕೂರು ಜಿಲ್ಲೆಯ ಶಿರಾದಲ್ಲಿ ಬೃಹತ್ ಉದ್ಯೋಗ ಮೇಳ ಮತ್ತು ಸಂದರ್ಶನ ಪೂರ್ವಭಾವಿ ತರಬೇತಿ ಶಿಬಿರವನ್ನು ಆಯೋಜನೆ ಮಾಡಲಾಗಿದೆ. ಆಸಕ್ತ ನಿರುದ್ಯೋಗಿ ಯುವಕ/ ಯುವತಿಯರು ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

ಶಿರಾ ಕ್ಷೇತ್ರದ ಕಾಂಗ್ರೆಸ್ ಶಾಸಕ, ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ. ಬಿ. ಜಯಚಂದ್ರ ಫೇಸ್‌ಬುಕ್ ಪೇಜ್‌ನಲ್ಲಿ ಈ ಕುರಿತು ಮಾಹಿತಿ ನೀಡಿದ್ದಾರೆ. ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಉದ್ಯೋಗ ಮೇಳ, ತರಬೇತಿ ಆಯೋಜನೆ ಮಾಡಲಾಗಿದೆ.

job-fair-in-sira-tumakuru

ಸಂದರ್ಶನದ ಪೂರ್ವಭಾವಿ ತರಬೇತಿ ಸೆಪ್ಟೆಂಬರ್ 9ರ ಶನಿವಾರ ಸರ್ಕಾರಿ ಪದವಿ ಪೂರ್ವ ಕಾಲೇಜು, ಐಬಿ ಹತ್ತಿರ, ಶಿರಾ ಇಲ್ಲಿ ನಡೆಯಲಿದೆ. ಸೆಪ್ಟೆಂಬರ್ 11ರಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯ ತನಕ ಉದ್ಯೋಗ ಮೇಳ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಆವರಣ, ಶಿರಾ ನಗರ, ತುಮಕೂರು ಇಲ್ಲಿ ನಡೆಯಲಿದೆ ಎಂದು ಮಾಹಿತಿ ನೀಡಲಾಗಿದೆ.

ನೋಂದಣಿ ಮಾಡಿಕೊಳ್ಳಿ; ಈ ಬೃಹತ್ ಉದ್ಯೋಗ ಮೇಳದಲ್ಲಿ 8 ಸಾವಿರಕ್ಕೂ ಅಧಿಕ ಉದ್ಯೋಗಾವಕಾಶಗಳು ಲಭ್ಯವಿದೆ. ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಇರುವ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಲಾಗಿದೆ.

ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಬಿಕಾಂ, ಡಿಪ್ಲೊಮಾ, ಇಂಜಿನಿಯರಿಂಗ್, ಬಿಎಸ್‌ಸಿ, ಬಿಸಿಎ, ಎಂಸಿಎ, ಎಂಕಾಂ ಹಾಗೂ ಎಲ್ಲಾ ಪದವೀಧರರು ಪಾಲ್ಗೊಳ್ಳಬಹುದಾಗಿದೆ.

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್‌ಪೋರ್ಟ್‌ ಅಳತೆಯ ಫೋಟೋ, ಆಧಾರ್‌ ಕಾರ್ಡ್ ಹಾಗೂ ಅಗತ್ಯ ದಾಖಲೆಗಳ ಜೊತೆ ಆಗಮಿಸಬೇಕು ಎಂದು ಸೂಚನೆ ನೀಡಲಾಗಿದೆ.

ಉದ್ಯೋಗ ಮೇಳಕ್ಕೆ ಆಗಮಿಸುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಐಬಿ ಸರ್ಕಲ್‌ನಿಂದ ಪಾಲಿಟೆಕ್ನಿಕ್ ಕಾಲೇಜು ತನಕ ಬಸ್ ವ್ಯವಸ್ಥೆ ಇರುತ್ತದೆ. ಆಸಕ್ತರು 9606492216 ಸಂಖ್ಯೆಗೆ ಕರೆ ಮಾಡಬಹುದು ಎಂದು ತಾಲೂಕು ಆಡಳಿತ ಶಿರಾದ ಪ್ರಕಟಣೆ ತಿಳಿಸಿದೆ.

ನೋಂದಣಿ ವಿವರಗಳು; ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲು ಆಸಕ್ತಿ ಹೊಂದಿರುವ ಅಭ್ಯರ್ಥಿಗಳು https://skillconnect.kaushalkar.com/candidatereg ಮೂಲಕ ನೋಂದಣಿ ಮಾಡಿಕೊಳ್ಳಬೇಕು.

ಉದ್ಯೋಗ ಆಕಾಂಕ್ಷಿಗಳಿಗಾಗಿ ಸಂದರ್ಶನ ಪೂರ್ವಭಾವಿ ತರಬೇತಿ ಶಿಬಿರ ಸರ್ಕಾರಿ ಪದವಿ ಪೂರ್ವ ಕಾಲೇಜು ಶಿರಾ ಇಲ್ಲಿ ಶನಿವಾರ ಬೆಳಗ್ಗೆ 10 ರಿಂದ 1 ಗಂಟೆಯ ತನಕ ನಡೆಯಲಿದೆ. ಲಿಂಕ್ https://g.co/kgs/QH4A7t.

ನೇರ ಸಂದರ್ಶನ; ತುಮಕೂರು ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮತ್ತು ಥರ್ಮೋವ್ಯಾಕ್ ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ಸಹಭಾಗಿತ್ವದಲ್ಲಿ ಸೆಪ್ಟೆಂಬರ್ 15ರ ತನಕ ಬೆಳಗ್ಗೆ 10.30 ರಿಂದ ರಿಂದ 1 ಗಂಟೆಯವರೆಗೆ ನೇರ ಸಂದರ್ಶನವನ್ನು ಆಯೋಜನೆ ಮಾಡಲಾಗಿದೆ.

ಐಟಿಐ (ಫಿಟ್ಟರ್), ಡಿಪ್ಲೊಮಾ (ಮೆಕಾನಿಕಲ್), ಬಿಇ (ಮೆಕಾನಿಕಲ್) ಪಾಸಾದ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳು ಹಾಗೂ ವಿಎಂಸಿ ಮೆಷಿನ್‌ನಲ್ಲಿ ಅನುಭವ ಹೊಂದಿರುವ ಡಿಪ್ಲೊಮಾ ಮತ್ತು ಐಟಿಐ ಫ್ರೆಶರ್ಸ್, ಮಾರ್ಕೆಟಿಂಗ್‌ನಲ್ಲಿ ಎಂಬಿಎ ಮಾಡಿರುವ ಯಾವುದೇ ಅಭ್ಯರ್ಥಿಯು ನೇರ ಸಂದರ್ಶನಕ್ಕೆ ಹಾಜರಾಗಬಹುದು.

ಸೆಪ್ಟೆಂಬರ್ 15ರ ತನಕ ನೇರ ಸಂದರ್ಶನ ಪ್ಲಾಟ್ ನಂ.548 ಸೋಂಪುರ, 2ನೇ ಸ್ಟೇಜ್, ಬೀರಗೊಂಡನಹಳ್ಳಿ, ತ್ಯಾಮಗೊಂಡ್ಲು, ನೆಲಮಂಗಲ, ಬೆಂಗಳೂರು - 562111 ಇಲ್ಲಿಗೆ ತಮ್ಮ ಬಯೋಡೇಟಾದೊಂದಿಗೆ ಹಾಜರಾಗಬಹುದಾಗಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0816-2278488/ 9606955152 ಸಂಪರ್ಕಿಸಬಹುದಾಗಿದೆ ಎಂದು ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+