ಜನವರಿ 9ರಂದು ತುಮಕೂರಿನಲ್ಲಿ ಉದ್ಯೋಗ ಮೇಳ, ಪ್ರವೇಶ ಉಚಿತ

ತುಮಕೂರು, ಜನವರಿ 06: ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದಿಗೆ. ತುಮಕೂರಿನಲ್ಲಿ ಜನವರಿ 9ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಸಂಕಲ್ಪ ಯೋಜನೆಯಡಿ ಉದ್ಯೋಗ ಮೇಳ-2025 ಆಯೋಜಿಸಲಾಗಿದ್ದು, ಪ್ರವೇಶ ಉಚಿತವಾಗಿದೆ. 18 ರಿಂದ 35 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು.

ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ತುಮಕೂರು, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಮತ್ತು ತುಮಕೂರು ವಿಶ್ವವಿದ್ಯಾನಿಲಯ, ಉದ್ಯೋಗ ಕೋಶ, ಸ್ನಾತಕೋತ್ತರ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಹಾಗೂ ರೆಡ್ಡಿ ಫೌಂಡೇಶನ್, ತುಮಕೂರು ಜಂಟಿಯಾಗಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಿದೆ.

Job Fair In Tumakuru On January 9 Entry Free

ತುಮಕೂರು ವಿಶ್ವವಿದ್ಯಾನಿಯಲದ ಸದಾನಂದಮಯ್ಯ ಬ್ಲಾಕ್‌ನಲ್ಲಿ 9/1/2025ರ ಗುರುವಾರ ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯ ತನಕ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳಕ್ಕೆ ಪ್ರವೇಶ ಉಚಿತವಾಗಿದ್ದು, ಆಸಕ್ತ ಮಹಿಳಾ/ ಪುರುಷ ಅಭ್ಯರ್ಥಿಗಳು ಉದ್ಯೋಗ ಮೇಳದ ಉಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

ಯಾವ-ಯಾವ ಕಂಪನಿಗಳು ಪಾಲ್ಗೊಳ್ಳುತ್ತವೆ?; ಸಂಕಲ್ಪ ಯೋಜನೆಯಡಿ ಉದ್ಯೋಗ ಮೇಳ-2025 ಆಯೋಜನೆ ಮಾಡಲಾಗಿದೆ. ಈ ಉದ್ಯೋಗ ಮೇಳದಲ್ಲಿ ವಸಂತ ನರಸಾಪುರ, ಅಂತರಸನಹಳ್ಳಿ, ಹಿರೇಹಳ್ಳಿ ಮತ್ತು ದಾಬಸ್‌ಪೇಟೆ ಕೈಗಾರಿಕಾ ಪ್ರದೇಶದ ಹಾಗೂ ಬೆಂಗಳೂರಿನ ಮತ್ತು ಸ್ಥಳೀಯ ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ.

ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ., ಪಿಯುಸಿ, ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಡಿಪ್ಲೋಮಾ, ಡಿ. ಫಾರ್ಮ, ಬಿ. ಫಾರ್ಮ ಮತ್ತು ಬಿಇ (ಮೆಕ್ಯಾನಿಕಲ್, ಸಿವಿಲ್, ಎಲೆಕ್ಟಿಕಲ್ ಅಂಡ್ ಎಲೆಕ್ಟ್ರಾನಿಕ್ಸ್) ಪದವಿ ಪಾಸಾದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

ಉದ್ಯೋಗ ಮೇಳಕ್ಕಾಗಿ ಅಭ್ಯರ್ಥಿಗಳ ನೋಂದಣಿ ಕಡ್ಡಾಯವಾಗಿರುತ್ತದೆ. ಅಭ್ಯರ್ಥಿಗಳು ಕನಿಷ್ಠ 10 ಬಯೋಡಾಟಾಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗಬೇಕು. ಆಧಾರ್‌ ಕಾರ್ಡ್ ಜೆರಾಕ್ಸ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕ ಇರುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ತುಮಕೂರು ವಿಶ್ವವಿದ್ಯಾನಿಲಯ ಉದ್ಯೋಗ ಕೋಶವನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 0816-2278488, 0816-2255652.

ಯುವನಿಧಿ ಯೋಜನೆ ವಿಶೇಷ ನೋಂದಣಿ: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಯಾದ 'ಯುವನಿಧಿ'ಗೆ ವಿಶೇಷ ನೋಂದಣಿ ಅಭಿಯಾನ ಆರಂಭಿಸಲಾಗಿದೆ. ಜನವರಿ 6 ರಿಂದ 20ರ ತನಕ ವಿಶೇಷ ನೋಂದಣಿ ಅಭಿಯಾನ ನಡೆಯಲಿದೆ. 2022-23 ಮತ್ತು 2023-24ನೇ ಸಾಲಿನಲ್ಲಿ ಸ್ನಾತಕ ಪದವಿ/ ಸ್ನಾತಕೋತ್ತರ ಪದವಿ ಮತ್ತು ಡಿಪ್ಲೋಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ಪೋರ್ಟಲ್‌ನಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು.

ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ https://sevasindhugs.karnataka.gov.in ಮೂಲಕ ಹೆಸರು ನೋಂದಾಯಿಸಿ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ. ಯೋಜನೆ ಫಲಾನುಭವಿ ಪದವೀಧರರಿಗೆ ಪ್ರತಿ ತಿಂಗಳು ರೂ. 3000 ಹಾಗೂ ಡಿಪ್ಲೋಮಾ ಪದವೀಧರರಿಗೆ ರೂ. 1500 ನಿರುದ್ಯೋಗಿ ಭತ್ಯೆಯನ್ನು ನೀಡಲಾಗುತ್ತದೆ.

ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿನ ಪೂರೈಸಿ ಹೆಸರನ್ನು ನೋಂದಾಯಿಸಿಕೊಂಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತಿದೆ. ನಂತರ ಪ್ರತಿ ತಿಂಗಳು ಯುವನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಿದ್ದರೆ ಸೇವಾ ಸಿಂಧು ಪೋರ್ಟಲ್‌ನಲ್ಲಿ ಮಾಸಿಕ ತಾನು ನಿರುದ್ಯೋಗಿಯೆಂದು, ಉನ್ನತ ವ್ಯಾಸಂಗ ಮುಂದುವರೆಸುತ್ತಿಲ್ಲವೆಂದು ಹಾಗೂ ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಸ್ವಯಂ ಘೋಷಣೆ ಆಧಾರದ ಮೇಲೆ ಅಭ್ಯರ್ಥಿಗಳಿಗೆ ಮುಂದಿನ ಕಂತು ಪಾವತಿಸಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+