ಉಡುಪಿಯಲ್ಲಿ ಜುಲೈ 14ರಂದು ಮಿನಿ ಉದ್ಯೋಗ ಮೇಳ
ಬೆಂಗಳೂರು, ಜುಲೈ 11; ಉಡುಪಿ ಜಿಲ್ಲಾ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಜುಲೈ 14 ರಂದು ಮಿನಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತರು ಬೆಳಗ್ಗೆ 10.30ಕ್ಕೆ ಆಗಮಿಸಬಹುದು.
ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಬಿಕಾಂ, ಬಿಇ ಇಂಜಿನಿಯರಿಂಗ್ ಮತ್ತು ಡಿಪ್ಲೊಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯವರು ಪಾಲ್ಗೊಳ್ಳಬಹುದು.

ಮಿನಿ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವವರು ಮೇಲೆ ತಿಳಿಸಿದ ಕೋರ್ಸ್‌ಗಳಲ್ಲಿ ಉತ್ತೀರ್ಣರಾಗಿರಬೇಕು. ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 8105618291, 9945856670 ಹಾಗೂ 9901472710.
ನೇರ ಸಂದರ್ಶನ; ದಾವಣಗೆರೆಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ ಇವರ ವತಿಯಿಂದ ಜುಲೈ 13ರಂದು ಬೆಳಗ್ಗೆ 10 ಗಂಟೆಗೆ ನೇರ ಸಂದರ್ಶನವನ್ನು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ 51, ಜಿಲ್ಲಾಧಿಕಾರಿಗಳ ಕಚೇರಿ ದಾವಣಗೆರೆ ಇಲ್ಲಿ ಆಯೋಜಿಸಲಾಗಿದೆ.
ಈ ನೇರ ಸಂದರ್ಶನದಲ್ಲಿ ಸುರ್ವೆ ಅಗ್ರಿಟೆಕ್, ಹಾವೇರಿ ಇವರು ಭಾಗವಹಿಸುತ್ತಿದ್ದು ತಮ್ಮ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳಿಗೆ ಪಿಯುಸಿ, ಐಟಿಐ, ಡಿಪ್ಲೋಮಾ & ಪದವಿ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ ಎಂದು ಪ್ರಕಟಣೆ ಹೇಳಿದೆ.
ಆಸಕ್ತ ಅಭ್ಯರ್ಥಿಗಳು ಕನಿಷ್ಠ 2 ಸೆಟ್ ಬಯೋಡಾಟಾ ಮತ್ತು ಆಧಾರ್ ಕಾರ್ಡ್‌ನೊಂದಿಗೆ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ 08192-259446, 63615 50016.
ದೈಹಿಕ, ವಿಜ್ಞಾನ ಶಿಕ್ಷಕರ ಹುದ್ದೆಗೆ ಅರ್ಜಿ ಹಾಕಿ; ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಸನ ಡಾ. ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ, ಹಾಲುವಾಗಿಲು, ಹಾಸನ ಇಲ್ಲಿ ಖಾಲಿಯಿರುವ ವಿಜ್ಞಾನ ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುತ್ತಿದೆ.
ಆಂಗ್ಲ ಮಾದ್ಯಮದಲ್ಲಿ ಬೋಧಿಸಲು ಅರ್ಜಿ ಅಹ್ವಾನಿಸಿದ್ದು, ಆಸಕ್ತರು ಶೈಕ್ಷಣಿಕ ದಾಖಲಾತಿಗಳೊಂದಿಗೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಆಕಾಶ ವಾಣಿ ಹಿಂಭಾಗ, ಹಾಸನ ಇಲ್ಲಿಗೆ ದಿನಾಂಕ 15/7/2023 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಆಕಾಶವಾಣಿ ಹಿಂಭಾಗ, ಹಾಸನ- 573202 ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08172-267373, 08172-268373.












Click it and Unblock the Notifications