ಉಡುಪಿ; ಮೇ 29ರಂದು ಮಿನಿ ಉದ್ಯೋಗ ಮೇಳ

ಉಡುಪಿ, ಮೇ 26; ಉಡುಪಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 29ರಂದು ಮಿನಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ ಯುವಕ/ ಯುವತಿಯರು ಆಧಾರ್ ಕಾರ್ಡ್, ಅಂಕಪಟ್ಟಿ, ರೆಸ್ಯೂಮ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 29ರ ಸೋಮವಾರ ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಆಸಕ್ತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.

Job Fair In Udupi Employment Exchange Office On May 29

ಈ ಉದ್ಯೋಗ ಮೇಳದಲ್ಲಿ ಎಸ್. ಎಸ್. ಎಲ್. ಸಿ, ಪಿಯುಸಿ, ಐಟಿಐ, ಬಿಕಾಂ, ಬಿಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ಪಡೆದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 8105618291, 9945856670 ಹಾಗೂ 9901472710.

ಜೂನ್‌ 2ರಂದು ನೇರ ಸಂದರ್ಶನ; ಧಾರವಾಡ ಕೃಷಿ ವಿಶ್ವವಿದ್ಯಾಲಯದ ಕೃಷಿ ಅರ್ಥಶಾಸ್ತ್ರ ವಿಭಾಗದಲ್ಲಿ ಎಂಎಸ್ಸಿ ಪದವಿ ಪಡೆದಿರುವ ಸಹಾಯಕ ಪ್ರಾಧ್ಯಾಪಕರ ತಾತ್ಕಾಲಿಕ ಹುದ್ದೆಗೆ ನೇರ ಸಂದರ್ಶನವನ್ನು ಜೂನ್‌ 2ರಂದು ಕರೆಯಲಾಗಿದೆ.

ಅಭ್ಯರ್ಥಿಗಳು ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಗೆ ಸಂಬಂಧಪಟ್ಟ ಎಲ್ಲ ಮೂಲ ದಾಖಲೆಗಳನ್ನು ಹಾಗೂ ಅರ್ಜಿ ನಮೂನೆಯ ಎರಡು ಪ್ರತಿಗಳನ್ನು ತರಬೇಕು. ಬೆಳಗ್ಗೆ 11 ಗಂಟೆಗೆ ಸಂದರ್ಶನ ಡೀನ್ (ಕೃಷಿ) ಕಛೇರಿಯಲ್ಲಿ ನಡೆಯಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+