Job Fair: ಫೆಬ್ರವರಿ 12ರಂದು ಉಡುಪಿಯಲ್ಲಿ ಉದ್ಯೋಗ ಮೇಳ

Job Fair: ಇತ್ತೀಚಿನ ದಿನಗಳಲ್ಲಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಫೆಬ್ರವರಿ 12, 2025ರಂದು ಬೆಳಗ್ಗೆ 10:30ಕ್ಕೆ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಹಾಗಾದರೆ, ಅಭ್ಯರ್ಥಿಗಳು ಗಮನಿಸಬೇಕಾದ ಪ್ರಮುಖಾಂಶಗಳು ಇಲ್ಲಿವೆ ಗಮನಿಸಿ.

ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಬಿಕಾಂ, ಬಿಇ ಇಂಜಿನಿಯರಿಂಗ್, ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್‌ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು.

Job fair in Udupi on February 12

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670, 9901472710 ಮತ್ತು 8105774936 ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

₹18,000 ವೇತನದ ಹುದ್ದೆಗೆ ಅರ್ಜಿ ಆಹ್ವಾನ: ಕೊಡಗು ಜಿಲ್ಲೆಯ ಈ ಭಾಗಗಳಲ್ಲಿ ಖಾಲಿಯಿರುವ ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವೀಚಾರಕರ ಒಟ್ಟು 10 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ ಅರ್ಜಿ ಸಲ್ಲಿಸುವವರು ಗಮನಿಸಬೇಕಾದ ಅಂಶಗಳು ಹಾಗೂ ಮಾಸಿಕ ವೇತನ ಎಷ್ಟಿರಲಿದೆ ಎಂದು ಇಲ್ಲಿ ತಿಳಿಯಿರಿ.

ಗ್ರಾಮ ಪಂಚಾಯತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳ ನೇಮಕಾತಿ ಮಾಡುವ ಬಗ್ಗೆ ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆ ಹೊರಡಿಸಿದ್ದಾರೆ. ಜಿಲ್ಲೆಯ ಬೇರೆ-ಬೇರೆ ತಾಲೂಕುಗಳಲ್ಲಿ ಈ ಉದ್ಯೋಗಗಳು ಖಾಯಿಯಿವೆ. ಸದ್ಯ ಇವುಗಳ ಭರ್ತಿಗೆ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಗೆ ಕೊನೇ ದಿನಾಂಕ ಫೆಬ್ರುವರಿ 13, 2025 ಆಗಿದೆ.

ವಿರಾಜಪೇಟೆ-ಚೆಂಬೆಬೆಳ್ಳೂರು, ಚೆನ್ನಯ್ಯನ ಕೋಟೆ, ಆರ್ಜಿ, ಪೊನ್ನಂಪೇಟೆ-ಬಾಳೆಲೆ, ಕುಟ್ಟ, ಗೋಣಿಕೊಪ್ಪ, ಕೆ.ಬಾಡಗ, ಸೋಮವಾರಪೇಟೆ-ಶನಿವಾರ ಸಂತೆ, ನಿಡ್ತ, ಕುಶಾಲನಗರ-ಶಿರಂಗಾಲ ಇಲ್ಲಿರುವ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ನೇಮಕಾತಿ ಕುರಿತು ಅರ್ಜಿ ಆಹ್ವಾನಿಸಲಾಗಿದೆ.

ಮಾಸಿಕ ವೇತನ ಎಷ್ಟು?: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ವೇತನ 18,606 ರೂಪಾಯಿ ಇರಲಿದೆ. ವಿದ್ಯಾರ್ಹತೆ ವಿಚಾರಕ್ಕೆ ಬಂದರೆ, ದ್ವಿತೀಯ ಪಿಯುಸಿಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಸರ್ಟಿಫಿಕೇಶನ್‌ ಕೋರ್ಸ್‌ ಇನ್ ಲೈಬ್ರರಿ ಸೈನ್ಸ್‌ನಲ್ಲಿ ಪ್ರಮಾಣ ಪತ್ರ ಪಡೆದಿರಬೇಕು. ಮಾನ್ಯತೆ ಪಡೆದ ಸಂಸ್ಥೆಯಲ್ಲಿ 3 ತಿಂಗಳ ಕಂಪ್ಯೂಟರ್ ಕೋರ್ಸ್‌ ಮಾಡಿರಬೇಕು.

ವಯೋಮಿತಿ ವಿವರ: ಒಂದು ವೇಳೆ ಇಬ್ಬರು ಸಮನವಾದ ಅಂಕ ಹೊಂದಿದ್ದರೇ ವಯಸ್ಸಿನಲ್ಲಿ ಹಿರಿಯರನ್ನು ಪರಿಗಣಿಸಲಾಗುತ್ತದೆ. ಈ ಕೆಲಸಕ್ಕೆ ಅರ್ಜಿ ಸಲ್ಲಿಸಬಯಸುವವರು ಸಂಬಂಧಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿ ಆಗಿರಬೇಕು. ವಯಸ್ಸಿನ ಮಿತಿ 18 ರಿಂದ 40 ವರ್ಷಗಳು. ಅರ್ಜಿ ಸಲ್ಲಿಕೆಗೆ https://www.kodagu.nic.in ಗೆ ಭೇಟಿ ನೀಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+