ಉಡುಪಿ; ಅಕ್ಟೋಬರ್ 19ರಂದು ಮಿನಿ ಉದ್ಯೋಗ ಮೇಳ
ಉಡುಪಿ, ಅಕ್ಟೋಬರ್ 17; ಉಡುಪಿಯಲ್ಲಿ ಅಕ್ಟೋಬರ್ 19ರಂದು ಮಿನಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ರೆಸ್ಯೂಮ್ ಮತ್ತು ಆಧಾರ್ ಕಾರ್ಡ್ ಪ್ರತಿ ಜೊತೆ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಬೆಳಗ್ಗೆ 10.30ಕ್ಕೆ ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ ಎಸ್ಎಸ್ಎಲ್‌ಸಿ, ಪಿಯುಸಿ, ಐಟಿಐ, ಬಿ.ಕಾಂ, ಬಿಇ ಇಂಜಿನಿಯರಿಂಗ್, ಡಿಪ್ಲೊಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.

ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ಇವರನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 8105618291, 9945856670, 8197440155, 9901472710.
ಅಭ್ಯರ್ಥಿಗಳ ದೈಹಿಕ ಪರೀಕ್ಷೆ; ಧಾರವಾಡ ಜಿಲ್ಲೆಯ ಗೃಹರಕ್ಷಕ ದಳ ಗೌರವ ಸ್ವಯಂ ಸೇವಕ ಸದಸ್ಯತ್ವಕ್ಕೆ ಈಗಾಗಲೇ ಅರ್ಜಿ ಸಲ್ಲಿಸಿರುವ ಧಾರವಾಡ ಜಿಲ್ಲೆಯ ವಿವಿಧ ಘಟಕಗಳಿಗೆ ಸಂಬಂಧಿಸಿದ ಅಭ್ಯರ್ಥಿಗಳಿಗೆ ಅಕ್ಟೋಬರ್ 20ರಂದು ಬೆಳಗ್ಗೆ 6 ಗಂಟೆಗೆ ಆರ್. ಎನ್. ಶೆಟ್ಟಿ ಜಿಲ್ಲಾ ಕ್ರೀಡಾಂಗಣ ಮೈದಾನದಲ್ಲಿ ದೈಹಿಕ ಪರೀಕ್ಷೆ ಮತ್ತು ಸಂದರ್ಶನ ನಡೆಸಲಾಗುತ್ತದೆ.
ಅಭ್ಯರ್ಥಿಗಳು ಸಂಬಂಧಪಟ್ಟ ವಿದ್ಯಾರ್ಹತೆ ಮತ್ತು ಜನ್ಮ ದಿನಾಂಕ ಸೂಚಿಸುವ ಮೂಲ ದಾಖಲಾತಿಗಳು ಮತ್ತು ಒಂದು ಸೆಟ್ ನಕಲು ಪ್ರತಿಗಳೊಂದಿಗೆ ಹಾಜರಾಗಬಹುದು. ದೈಹಿಕ ಪರೀಕ್ಷೆ, ಸಂದರ್ಶನಕ್ಕೆ ಹಾಜರಾಗದಿದ್ದಲ್ಲಿ ಆಯ್ಕೆಗೆ ಪರಿಗಣಿಸಲಾಗುವುದಿಲ್ಲ.
ಪುರಷ ಅಭ್ಯರ್ಥಿಗಳು 168 ಸೆಂ. ಮೀ. ಎತ್ತರವಿರಬೇಕು. 7 ನಿಮಿಷದಲ್ಲಿ 1200 ಮೀಟರ್ ಓಟ ಹಾಗೂ 3.80 ಮೀಟರ್ ಉದ್ದಜಿಗಿತ ಇರುತ್ತದೆ. ಮಹಿಳಾ ಅಭ್ಯರ್ಥಿಗಳು 155 ಸೆಂ. ಮೀ ಎತ್ತರವಿರಬೇಕು. 2.5 ನಿಮಿಷದಲ್ಲಿ 200 ಮೀಟರ್ ಹಾಗೂ 2.50 ಮಿ. ಉದ್ದಜಿಗಿತ ಇರುತ್ತದೆ.
ಅರ್ಹ ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಹಾಜರಾಗಬಹುದು ಎಂದು ಪ್ರಕಟಣೆ ತಿಳಿಸಿದೆ.












Click it and Unblock the Notifications