ಬೆಂಗಳೂರಿನಲ್ಲಿ ಜುಲೈ 19ರಂದು ಉದ್ಯೋಗ ಮೇಳ
ಬೆಂಗಳೂರು, ಜುಲೈ 10: ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿಗೆ. ಬೆಂಗಳೂರಿನಲ್ಲಿ ಜುಲೈ 19ರಂದು ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಅಗತ್ಯ ದಾಖಲೆಗಳ ಜೊತೆ ಅಭ್ಯರ್ಥಿಗಳು ಹಾಜರಾಗಬಹುದು.
ಡೈರೆಕ್ಟೊರೇಟ್ ಜನರಲ್ ರಿಸೆಟಲ್‌ಮೆಂಟ್ ರಕ್ಷಣಾ ಸಚಿವಾಲಯ ಬೆಂಗಳೂರಿನಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಿದೆ. 19 ಜುಲೈ ಬೆಳಗ್ಗೆ 7 ಗಂಟೆಯಿಂದ ನೋಂದಣಿ ಆರಂಭವಾಗಲಿದ್ದು, 10 ಗಂಟೆಗೆ ಉದ್ಯೋಗ ಮೇಳ ಆರಂಭವಾಗಲಿದೆ.

ಇಎಸ್‌ಎಂಐ ಕಾರ್ಡ್ ಮತ್ತು ಭಾವಚಿತ್ರದೊಂದಿಗೆ, ಇತ್ತೀಚಿನ ಸಿವಿ/ ಬಯೋಡೇಟಾದ ಐದು ಪ್ರತಿಗಳ ಜೊತೆಗೆ ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದು. ಈ ಉದ್ಯೋಗ ಮೇಳದಲ್ಲಿ ಪ್ರಮುಖ ಪಿಎಸ್‌ಯುಗಳು/ ಕಾರ್ಪೊರೇಟ್ ಕಂಪನಿಗಳಿಂದ ವಿವಿಧ ಹುದ್ದೆಗಳಿಗೆ ನೇಮಕಾತಿ.
ಉದ್ಯೋಗ ಮೇಳ 19ನೇ ಜುಲೈರಂದು ಏರ್‌ಪೋರ್ಸ್ ಸ್ಟೇಷನ್, ಜಾಲಹಳ್ಳಿ (ಎಂಟಿ ಕಾಂಪ್ಲೆಕ್ಸ್), ಜಾಲಹಳ್ಳಿ ಪಶ್ಚಿಮ (ಸಿಟಿಐ ಹತ್ತಿರ), ಬೆಂಗಳೂರು, 560015 ಇಲ್ಲಿ ನಡೆಯಲಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರು (ಎಸ್‌ಇ ಮತ್ತು ಸಿಐ), ಡೈರೆಕ್ಟೊರೇಟ್ ಜನರಲ್ ರಿಸೆಟಲ್‌ಮೆಂಟ್ ವೆಸ್ಟ್ ಬ್ಲಾಕ್, ಕೆಆರ್ ಪುರಂ, ನವದೆಹಲಿ 110066. ದೂರವಾಣಿ ಸಂಖ್ಯೆ 011-20862542. htpp://www.dgrindia.gov.in ವೆಬ್‌ಸೈಟ್‌ಗೆ ಭೇಟಿ ನೀಡಬಹುದು.
ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ: ಶಿವಮೊಗ್ಗ ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರುಗಳ ಹುದ್ದೆಗಳ ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ವಿನೋಬನಗರ, ಶಿವಮೊಗ್ಗ ಇಲ್ಲಿ ಜುಲೈ 15 ರಂದು ಬೆಳಗ್ಗೆ 11 ಗಂಟೆಯಿಂದ ನೇರ ಸಂದರ್ಶನ ನಡೆಯಲಿದೆ.
ಖಾಲಿಯಿರುವ ಪ್ರಾಣಿ ಆಹಾರ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ ವಿಭಾಗ, ಪಶುವೈದ್ಯಕೀಯ ಸಾರ್ವಜನಿಕ ಆರೋಗ್ಯ ಮತ್ತು ಸಮುದಾಯ ರೋಗ ಅಧ್ಯಯನ ಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ (ಪ್ರಾಣಿ ಅನುವಂಶೀಯತೆ ಮತ್ತು ತಳಿಶಾಸ್ತ್ರ), ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಶಸ್ತ್ರಚಿಕಿತ್ಸೆ ಮತ್ತು ಕ್ಷ-ಕಿರಣ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುವುದು.
ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದ್ದು, ಆಯ್ಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ. 56,700 ಮತ್ತು ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ರೂ. 50,000 ವೇತನ ನಿಗದಿ ಮಾಡಲಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ 08182-200872 ದೂರವಾಣಿ ಸಂಖ್ಯೆ ಅಥವಾ ವೆಬ್‍ಸೈಟ್ www.kvafsu.edu.in ಭೇಟಿ ನೀಡಬಹುದು.












Click it and Unblock the Notifications