ಬೆಂಗಳೂರಿನಲ್ಲಿ ಏಪ್ರಿಲ್ 5ರಂದು ಉದ್ಯೋಗ ಮೇಳ, ವಿವರಗಳು

ಬೆಂಗಳೂರು, ಏಪ್ರಿಲ್ 03: ಬೆಂಗಳೂರು ನಗರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಏಪ್ರಿಲ್ 5ರಂದು ಬೆಂಗಳೂರು ನಗರದಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ರಾಜರಾಜೇಶ್ವರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಉದ್ಯೋಗ ಮೇಳ ನಡೆಯಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳ ಜೊತೆ ಪಾಲ್ಗೊಳ್ಳಬಹುದು.

ದೀನ್ ದಯಾಳ್ ಉಪಾದ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ, ಬೆಂಗಳೂರು ದಕ್ಷಿಣ ತಾಲ್ಲೂಕು ಪಂಚಾಯಿತಿ ಮತ್ತು ಕುಂಬಳಗೋಡು ಗ್ರಾಮ ಪಂಚಾಯಿತಿ ವತಿಯಿಂದ ಏಪ್ರಿಲ್ 5ರ ಬೆಳಗ್ಗೆ 9.30ರಿಂದ ಸಂಜೆ 4.30ರ ತನಕ ಉದ್ಯೋಗ ಮೇಳ ನಡೆಯಲಿದೆ.

Job Fair On April 5th Rajarajeshwari Nagar Bengaluru

ರಾಜರಾಜೇಶ್ವರಿ ತಾಂತ್ರಿಕ ಮಹಾವಿದ್ಯಾಲಯ ನಂ.14, ರಾಮೋಹಳ್ಳಿ ಕ್ರಾಸ್, ಮೈಸೂರು ರಸ್ತೆ, ಕುಂಬಳಗೋಡು. ಬೆಂಗಳೂರು ದಕ್ಷಿಣ ತಾಲ್ಲೂಕು. ಬೆಂಗಳೂರು-560074 ಇಲ್ಲಿ ಉದ್ಯೋಗ ಮೇಳ-2025 ನಡೆಯಲಿದೆ.

ಈ ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿಇ/ ಬಿಸಿಎ/ ಬಿಟೆಕ್/ ಬಿಕಾಂ/ ಬಿಬಿಎ ಮತ್ತು ಸ್ನಾತಕೋತ್ತರ ಪದವಿ ಹೊಂದಿರುವ 18 ವರ್ಷ ಮೇಲ್ಪಟ್ಟ ಅಭ್ಯರ್ಥಿಗಳು ಭಾಗವಹಿಸಬಹುದು.

ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9964901444, 9964902444ಗೆ ಸಂಪರ್ಕಿಸಬಹುದು ಎಂದು ತಿಳಿಸಲಾಗಿದೆ.

ವೃತ್ತಿಪರ ತರಬೇತಿ ಕೋರ್ಸುಗಳಿಗೆ ಅರ್ಜಿ ಆಹ್ವಾನ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಐಐಎಸ್‌ಸಿ, ಐಐಟಿ ಮತ್ತು ಎನ್‌ಐಟಿ ಸಂಸ್ಥೆಗಳ ಮೂಲಕ Artificial Intelligence and Machine Learning ಮುಂತಾದ ವೃತ್ತಿಪರ ತರಬೇತಿ ಕೋರ್ಸುಗಳಿಗೆ ರೂ. 15,000 ಶಿಷ್ಯವೇತನದೊಂದಿಗೆ ತರಬೇತಿಯನ್ನು ಪಡೆಯಲು ಇಚ್ಛಿಸುವ ಪರಿಶಿಷ್ಟ ಪಂಗಡದ ಇಂಜಿನಿಯರಿಂಗ್ ಪದವೀಧರರಿಂದ ಅರ್ಜಿ ಕರೆಯಲಾಗಿದೆ.

ರಾಜ್ಯ/ ಕೇಂದ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾನಿಲಯಗಳಲ್ಲಿ ಬಿಇ/ ಬಿಟೆಕ್ ಕೋರ್ಸುಗಳನ್ನು ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಶಿಷ್ಯವೇತನಕ್ಕೆ ಅರ್ಹರಾಗಿರುತ್ತಾರೆ.

ಆಸಕ್ತರು ಅರ್ಜಿ ನಮೂನೆಯನ್ನು ಸಹಾಯಕ ನಿರ್ದೇಶಕರು (ಗ್ರೇಡ್-1) ಅವರ ಕಛೇರಿ, ಸಮಾಜ ಕಲ್ಯಾಣ ಇಲಾಖೆ, ಟಿ. ಸಿ. ಪಾಳ್ಯ ಮುಖ್ಯ ರಸ್ತೆ, ಬೆಂಗಳೂರು ಪೂರ್ವ ತಾಲ್ಲೂಕು -560 049 ಇಲ್ಲಿ ಪಡೆದು ಏಪ್ರಿಲ್ 11ರೊಳಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-29535045, 9480843049 ಸಂಪರ್ಕಿಸಬಹುದು.

ನೇಮಕಾತಿಗೆ ತಡೆ: ಕೊಡಗು ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ನೇಮಕಾತಿಗೆ ಹೊರಡಿಸಲಾದ ಅಧಿಸೂಚನೆಯನ್ನು ಹಿಂಪಡೆಯಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಆನಂದ್ ಪ್ರಕಾಶ್ ಮೀನಾ ತಿಳಿಸಿದ್ದಾರೆ.

ಸರ್ಕಾರ 2025ರ ಜನವರಿ 24 ಮತ್ತು 2024ರ ನವೆಂಬರ್ 25 ಮತ್ತು 2025ರ ಮಾರ್ಚ್ 29ರಂದು ಹೊರಡಿಸಿರುವ ಪತ್ರದಲ್ಲಿ ಸುತ್ತೋಲೆಯಂತೆ ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೂ ಹೊರಡಿಸಬಾರದು ಎಂದು ಸೂಚಿಸಲಾಗಿದೆ. ಈ ಹಿನ್ನಲೆಯಲ್ಲಿ ಅಧಿಸೂಚನೆ ವಾಪಸ್ ಪಡೆಯಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+