ಮಡಿಕೇರಿ: ಮಾರ್ಚ್ 8ರಂದು ಉದ್ಯೋಗ ಮೇಳ

ಮಡಿಕೇರಿ, ಮಾರ್ಚ್‌ 03: ಕೊಡಗು ಜಿಲ್ಲೆಯಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಮಾರ್ಚ್ 8ರಂದು ಮಡಿಕೇರಿಯಲ್ಲಿ ಆಯೋಜನೆ ಮಾಡಲಾಗಿದೆ. ಈ ಉದ್ಯೋಗ ಮೇಳದಲ್ಲಿ 18 ರಿಂದ 35 ವರ್ಷದ ವಯೋಮಿತಿಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.

ಸಂಜೀವಿನಿ ಕೆಎಸ್‍ಆರ್‍ಎಲ್‍ಪಿಎಸ್‌ನ ಡಿಡಿಯುಜಿಕೆವೈ ಯೋಜನೆಯಡಿ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದ್ದು, ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ ಮೂಲಕ ಉದ್ಯೋಗವಕಾಶ ಕಲ್ಪಿಸುವ ಗುರಿಯನ್ನು ಹೊಂದಲಾಗಿದೆ.

Job Fair On Government ITI College Madikeri On March 8

ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಮಾರ್ಚ್ 8ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ) ನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಉದ್ಯೋಗ ಮೇಳದಲ್ಲಿ ಹಲವಾರು ಪ್ರತಿಪ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು, ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಿ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ಕೊಡಗು ಜಿಲ್ಲೆಯ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ/ ಯುವತಿಯರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಕೊಡಗು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ ಪ್ರಕಾಶ್ ಮೀನಾ ಕರೆ ನೀಡಿದ್ದಾರೆ.

ಮಾರ್ಚ್‌ 5ರೊಳಗೆ ಅರ್ಜಿ ಹಾಕಿ: ಕೊಡಗು ಜಿಲ್ಲಾಧಿಕಾರಿಗಳ ಕಚೇರಿಯ ಚುನಾವಣಾ ಶಾಖೆಯಲ್ಲಿ ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಮಾರ್ಚ್ 5ರೊಳಗೆ ಅರ್ಜಿ ಸಲ್ಲಿಸಬೇಕಿದೆ.

ಜಿಲ್ಲಾ ಟೆಕ್ನಿಕಲ್ ಪ್ರೋಗ್ರಾಮರ್ ಹುದ್ದೆಗೆ ಬಿಇ ಅಥವಾ ಬಿಟೆಕ್, ಬಿಸಿಎ, ಎಂಸಿಎ, ಕಂಪ್ಯೂಟರ್ ಸೈನ್ಸ್ ಅಥವಾ ಇನ್‍ಫಾರ್ಮೇಶನ್ ಸೈನ್ಸ್ ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ ಮತ್ತು ಕಮ್ಯುನಿಕೇಷನ್ ಟೆಲಿಕಾಂ ವಿದ್ಯಾರ್ಹತೆ ಹೊಂದಿರಬೇಕು.

ಯಾವುದೇ ಸರ್ಕಾರಿ ಕಚೇರಿಯಲ್ಲಿ, ಕಂಪನಿ, ಸಂಸ್ಥೆಗಳಲ್ಲಿ ಕನಿಷ್ಠ 2 ವರ್ಷಗಳ ಕಾಲ ಕೆಲಸ ಮಾಡಿದ ಅನುಭವ ಹೊಂದಿರಬೇಕು. ಅಭ್ಯರ್ಥಿಗಳಿಗೆ ವಯೋಮಿತಿ ಕನಿಷ್ಠ 18 ಮತ್ತು ಗರಿಷ್ಠ 40 ವರ್ಷಗಳು.

ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ರೂ. 30,053 ಎಂದು ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಮಾರ್ಚ್ 5ರ ಸಂಜೆ 5.30 ಕೊನೆಯ ದಿನವಾಗಿದೆ. ಒಂದು ವರ್ಷಕ್ಕೆ ಮಾತ್ರ ಹೊರಗುತ್ತಿಗೆ ಆಧಾರದ ಮೇಲೆ ಈ ನೇಮಕಾತಿ ನಡೆಯುತ್ತಿದೆ. ಒಂದು ವರ್ಷದ ಸೇವೆಯನ್ನು ತೃಪ್ತಿಕರವಾಗಿ ಪೂರೈಸಿದಲ್ಲಿ, ಅಗತ್ಯವಿದಲ್ಲಿ ಮಾತ್ರ ಮುಂದಿನ ವರ್ಷಕ್ಕೆ ಸೇವೆ ವಿಸ್ತರಿಸಲಾಗುತ್ತದೆ.

ಅರ್ಜಿ ಸಲ್ಲಿಕೆ ಮಾಡುವವರು ಭಾರತೀಯ ನಾಗರಿಕನಾಗಿರಬೇಕು. ಅಭ್ಯರ್ಥಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು ಮತ್ತು ಅವರ ನೇಮಕಾತಿಯು ಕರ್ತವ್ಯಗಳ ದಕ್ಷ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಬಂಧ ಇರುವ ಯಾವುದೇ ದೈಹಿಕ ನ್ಯೂನ್ಯತೆಯಿಂದ ಮುಕ್ತರಾಗಿರಬೇಕು. ಅಭ್ಯರ್ಥಿಯು ಯಾವುದೇ ಕ್ರಿಮಿನಲ್ ಮೊಕದ್ದಮೆಯಲ್ಲಿ ಭಾಗಿಯಾಗಿರಬಾರದು.

ಅಭ್ಯರ್ಥಿಯ ಸ್ವ-ವಿವರ, 10ನೇ ತರಗತಿ ಅಂಕಪಟ್ಟಿ, ವಿದ್ಯಾಭ್ಯಾಸಕ್ಕೆ ಸಂಬಂಧಪಟ್ಟ ಎಲ್ಲಾ ಪ್ರಮಾಣ ಪತ್ರ/ ದಾಖಲೆಗಳನ್ನು, ನೇಮಕಾತಿ ಆದೇಶಗಳನ್ನು, ಅನುಭವ ಪ್ರಮಾಣ ಪತ್ರ ಹಾಗೂ ಒಂದು ಭಾವಚಿತ್ರ ಮತ್ತು ಆಧಾರ್ ಪ್ರತಿಯನ್ನು ಅರ್ಜಿಯೊಂದಿಗೆ ದೃಢೀಕರಿಸಿ, ಲಗತ್ತಿಸಿ ಕೊನೆಯ ದಿನಾಂಕದೊಳಗೆ ಖುದ್ದಾರಿ ಅಥವ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬೇಕು.

ಅರ್ಜಿದಾರರು ನಿಗದಿತ ಅರ್ಜಿ ನಮೂನೆಯನ್ನು ವೆಬ್‍ಸೈಟ್ https://kodagu.nic.nic.in ರಲ್ಲಿ ಪಡೆದು ಭರ್ತಿ ಮಾಡಿ ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಸಲ್ಲಿಸಬೇಕು. ಅರ್ಜಿ ಸಲ್ಲಿಕೆ ಮಾಡಲು ವಿಳಾಸ ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+