ಜನವರಿ 12 ರಂದು ಕಲಬುರಗಿಯ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ
ಕಲಬುರಗಿ, ಜ.10: ಕಲಬುರಗಿಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜನವರಿ 12 ರಂದು ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಅರ್ಹ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಭಾಗವಹಿಸಬಹುದು.
ಕಲಬುರಗಿಯ ಸರ್ಕಾರಿ ಐ.ಟಿ.ಐ. ಕಾಲೇಜು ಹಿಂದೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಜನವರಿ 12 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
*ಉದ್ಯೋಗ ಮೇಳದಲ್ಲಿ ಭಾಗವಹಿಸುವ ಕಂಪನಿಗಳ ವಿವರ ಇಂತಿದೆ*
* ಲೋಡ್‍ಶೇರ್ ನೆಟ್‍ವರ್ಕ್ ಪ್ರೈವೇಟ್ ಲಿಮಿಟೆಡ್: ಡೆಲಿವರಿ ಎಕ್ಸಿಕ್ಯೂಟಿವ್ ಹುದ್ದೆಗೆ ಎಸ್‌ಎಸ್‌ಎಲ್‌ಸಿ, ಪಿ.ಯು.ಸಿ ಮತ್ತು ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.

* ಪ್ರೋಸೆಸ್‍ವೇರ್ ಸಿಸ್ಟಮ್: ಟೆಕ್ನಿಕಲ್ ಸಪೋರ್ಟ್ ಎಕ್ಸಿಕ್ಯೂಟಿವ್ ಹುದ್ದೆಗೆ ಬಿಸಿಎ, ಬಿಎಸ್‌ಸಿ, ಎಂಎಸ್‌ಸಿ(ಸಿ.ಎಸ್), ಬಿ.ಇ/ಬಿ-ಟೆಕ್, ಡಿಪ್ಲೋಮಾ, ಎಮ್‌ಸಿಎ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 26 ವರ್ಷದೊಳಗಿರಬೇಕು.
* ಚಾನನ್ ಪ್ಲೇ: ಫೀಲ್ಡ್ ಸೇಲ್ಸ್, ಇನ್‍ಸೈಡ್ ಸೇಲ್ಸ್, ಸೇಲ್ಸ್ ಬ್ರಾಂಡ್ ಪ್ರಮೋಟರ್, ಮಾರ್ಕೆಟಿಂಗ್ ಸೇಲ್ಸ್ ಹುದ್ದೆಗೆ ಎಸ್‌ಎಸ್‌ಎಲ್‌ಸಿ, ಪಿ.ಯು.ಸಿ / ಐಟಿಐ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.
* ಜಸ್ಟ್‍ಕ್ಲಬ್: ಅಸಿಸ್ಟಂಟ್ ಎಲೆಕ್ಟ್ರಿಷಿಯನ್, ಎ.ಸಿ. ಟಿಕ್ನಿಷಿಯನ್ ಹುದ್ದೆಗೆ ಐಟಿಐನಲ್ಲಿ (ಎಲೆಕ್ಟ್ರಿಷಿಯನ್, ಎ.ಸಿ. ಟಿಕ್ನಿಷಿಯನ್) ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು.
ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿ ನಕಲುಪತ್ರ, ರೆಸ್ಯೂಮ್ (ಬಯೋಡಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ದಾಖಲಾತಿಗಳೊಂದಿಗೆ ಜನವರಿ 12 ರಂದು ಬೆಳಿಗ್ಗೆ 10.30 ಕ್ಕೆ ಸಂದರ್ಶನಕ್ಕೆ ಹಾಜರಾಗಬೇಕು.
ಉದ್ಯೋಗ ಮೇಳಕ್ಕೆ ಭಾಗಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ ಧರಿಸಬೇಕು ಹಾಗೂ ದೈಹಿಕ ಅಂತರ ಕಾಯ್ದಕೊಳ್ಳಬೇಕು. ಈ ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ತಿಳಿಸಲಾಗಿದೆ.












Click it and Unblock the Notifications