ಹೊಸಪೇಟೆಯಲ್ಲಿ ಮಾರ್ಚ್ 3ರ ಬುಧವಾರ ಉದ್ಯೋಗ ಮೇಳ
ಬಳ್ಳಾರಿ, ಮಾರ್ಚ್ 02: ಹೊಸಪೇಟೆಯ ಶ್ರೀ ಶಂಕರ್ ಆನಂದ್ ಸಿಂಗ್ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾರ್ಚ್ 3ರ ಬುಧವಾರ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ನಿರುದ್ಯೋಗಿ ಯುವಕ/ ಯುವತಿಯರು ಮೇಳದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಬಳ್ಳಾರಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಮತ್ತು ಶ್ರೀ ಶಂಕರ್ ಆನಂದ್ ಸಿಂಗ್ ಪ್ರಥಮ ದರ್ಜೆ ಕಾಲೇಜು ವತಿಯಿಂದ ಈ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯ ತನಕ ಉದ್ಯೋಗ ಮೇಳ ನಡೆಯಲಿದೆ.
ನಿರುದ್ಯೋಗಿ ಯುವಕ/ ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ಉದ್ಯೋಗ ಮೇಳದಲ್ಲಿ 15ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ.

ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿಗಿಂತ ಕಡಿಮೆ, ಎಸ್‌ಎಸ್ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಬಿಇ, ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿದವರು ಪಾಲ್ಗೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.
ಉದ್ಯೋಗ ಮೇಳದಲ್ಲಿ ಭಾಗವಹಿಸುವವರು ಕಡ್ಡಾಯವಾಗಿ ಕೋವಿಡ್ 19 ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು, ಎಲ್ಲರು ತಪ್ಪದೇ ಮಾಸ್ಕ್ ಧರಿಸಬೇಕು ಮತ್ತು ಸ್ಯಾನಿಟೈಸರ್ ಬಳಕೆ ಮಾಡಬೇಕು, ಸಾಮಾಜಿಕ ಅಂತರ ಪಾಲಿಸಬೇಕು.
ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಬಹುದುದ. ದೂರವಾಣಿ ಸಂಖ್ಯೆಗಳು 08392-273988, 9844444958.











Click it and Unblock the Notifications