ಮಡಿಕೇರಿಯಲ್ಲಿ ನವೆಂಬರ್ 22ರಂದು ಉದ್ಯೋಗ ಮೇಳ
ಮಡಿಕೇರಿ, ನವೆಂಬರ್ 19: ಉದ್ಯೋಗ ಹುಡುಕುತ್ತಿರುವ ಕೊಡಗು ಜಿಲ್ಲೆಯ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಕೊಡಗು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನವೆಂಬರ್ 22ರಂದು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ವಿವಿಧ ಖಾಸಗಿ ಈ ಮೇಳದಲ್ಲಿ ಭಾಗವಹಿಸಿ ವಿವಿಧ ಹುದ್ದೆಗಳಿಗೆ ನೇಮಕಾತಿಯನ್ನು ಮಾಡಿಕೊಳ್ಳಲಿವೆ. ಆಸಕ್ತ, ಅರ್ಹರು ಅಗತ್ಯ ದಾಖಲೆಗಳ ಜೊತೆ ಮೇಳದಲ್ಲಿ ಪಾಲ್ಗೊಳ್ಳಬಹುದು ಎಂದು ಕರೆ ನೀಡಲಾಗಿದೆ.
ಮಡಿಕೇರಿ ನಗರದ ಸರ್ಕಾರಿ ಕೈಗಾರಿಕೆ ತರಬೇತಿ ಸಂಸ್ಥೆ (ಐಟಿಐ) ಕಾಲೇಜಿನಲ್ಲಿ ನವೆಂಬರ್ 22ರಂದು ಬೆಳಗ್ಗೆ 10:30 ರಿಂದ ಮಧ್ಯಾಹ್ನ 3 ಗಂಟೆವರೆಗೆ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ, ಕಲ್ಯಾಣಿ ಮೋಟಾರ್ಸ್, ಮಡಿಕೇರಿ, ರಾಣಿ ಮದ್ರಾಸ್, ಮೈಸೂರು, ಆಟೋಮೇಟೇಕ್ಸಿಲ್ ಮೈಸೂರು, ಇಬ್ಬನಿ ರೆಸಾರ್ಟ್, ಮಡಿಕೇರಿ, ಅಪೋಲೋ ಫಾರ್ಮಸಿ, ಬೆಂಗಳೂರು, ಈಕ್ವಲೈಸರ್ ಆರ್.ಸಿ. ಮೈಸೂರು, ಯುವ ಸ್ಪಂದನ, ಮಡಿಕೇರಿ ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ವಿವಿಧ ಖಾಲಿಯಿರುವ ಹುದ್ದೆಗಳನ್ನು ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳ್ಳಲಿದ್ದಾರೆ. ಈ ಉದ್ಯೋಗಮೇಳದಲ್ಲಿ ಎಸ್‍ಎಸ್‍ಎಲ್‍ಸಿಗಿಂತ ಕಡಿಮೆ, ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಹಾಗೂ ಸ್ನಾತಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿ ಉದ್ಯೋಗದ ನೆರವನ್ನು ಪಡೆಯಬಹುದಾಗಿದೆ.
ಆಸಕ್ತ ಅಭ್ಯರ್ಥಿಗಳು ಸ್ವವಿವರ ಪ್ರತಿಗಳೊಂದಿಗೆ ಉದ್ಯೋಗ ಮೇಳಕ್ಕೆ ಹಾಜರಾಗುವಂತೆ ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಮಡಿಕೇರಿ ಅವರನ್ನು ಖುದ್ದಾಗಿ ಭೇಟಿ ಮಾಡಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 8296020826.
ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ 2024-25ನೇ ಸಾಲಿಗೆ ಹಮ್ಮಿಕೊಂಡಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ವಿಸ್ತರಣೆ ಮಾಡಿದೆ.
ಅಭ್ಯರ್ಥಿಗಳು ನವೆಂಬರ್ 25ರ ತನಕ ಅರ್ಜಿ ಸಲ್ಲಿಸಬಹುದು. ಪರಿಶಿಷ್ಟ ಜಾತಿಯ ಒಬ್ಬ ಅಭ್ಯರ್ಥಿಯನ್ನು ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಒಟ್ಟು 12 ತಿಂಗಳುಗಳ ತರಬೇತಿ ಇದಾಗಿದ್ದು, ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ಮಾಸಿಕ ರೂ 15,000ಗಳ ಸ್ಟೈಫಂಡ್ ನೀಡಲಾಗುತ್ತದೆ.
ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುತ್ತದೆ. ಅಭ್ಯರ್ಥಿಗಳು ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳ ವಯಸ್ಸು 35 ವರ್ಷ ಮೀರಿರಬಾರದು. ಅರ್ಜಿಯೊಂದಿಗೆ ಎಸ್ಎಸ್‌ಎಲ್‌ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ, ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕು.
ಅರ್ಜಿಗಳನ್ನು ಉಪ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ವಾರ್ತಾ ಸೌಧ, 2ನೇ ಮಹಡಿ, ನಂ.17, ಭಗವಾನ್ ಮಹಾವೀರ್ ರಸ್ತೆ, ಬೆಂಗಳೂರು- 560001 ಈ ವಿಳಾಸಕ್ಕೆ ಕಳಿಸಬೇಕು. ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ತಿಳಿಸಿದೆ.
ಅಭ್ಯರ್ಥಿಗಳು ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ 'ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ' ಎಂದು ನಮೂದಿಸಬೇಕು.
ಬೆಂಗಳೂರು ನಗರ ಜಿಲ್ಲೆಯಲ್ಲಿ ವಾಸಿಸುವ ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 080-22028059, ಇ-ಮೇಲ್ - [email protected] ಹಾಗೂ ಮೊಬೈಲ್ ಸಂಖ್ಯೆ 9480841219ಗೆ ಕಚೇರಿ ಸಮಯದಲ್ಲಿ ಸಂರ್ಪಕಿಸಬಹುದಾಗಿದೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications