ಹಾವೇರಿ; ಡಿ. 25ಕ್ಕೆ ಬ್ಯಾಡಗಿಯಲ್ಲಿ ಬೃಹತ್ ಉದ್ಯೋಗ ಮೇಳ
ಹಾವೇರಿ, ಡಿಸೆಂಬರ್ 19; ಶ್ರೀ ಆರ್. ಜಿ. ಪಾಟೀಲ್ ಅಂಡ್ ಕಂಪನಿ ಇದರ ಸುವರ್ಣ ಮಹೋತ್ಸವದ ಅಂಗವಾಗಿ ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಡಿಸೆಂಬರ್ 25ಕ್ಕೆ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.
ಬ್ಯಾಡಗಿ ಪಟ್ಟಣದ ಬಿ. ಇ. ಎಸ್. ಎಂ. ಮಹಾವಿದ್ಯಾಲಯದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ. ಸುಮಾರು 30 ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ. ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಲಾಗಿದೆ.
ಬ್ಯಾಡಗಿ ತಾಲೂಕಿನ ಉದ್ಯೋಗ ಆಕಾಂಕ್ಷಿಗಳು ಈ ಕೆಳಗಿನ ಲಿಂಕ್ ಅನ್ನು ಬಳಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಮತ್ತು ಇತರರಿಗೂ ಈ ಕುರಿತು ಮಾಹಿತಿ ನೀಡಿ ಈ ಅವಕಾಶ ಬಳಸಿಕೊಳ್ಳಲು ಮನವಿ ಮಾಡಲಾಗಿದೆ.
ಶ್ರೀ ಎಸ್. ಆರ್. ಪಾಟೀಲ ಅಭಿಮಾನಿ ಬಳಗದ ವತಿಯಿಂದ ಈ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಆಯ್ಕೆಯಾದವರಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರವನ್ನು ವಿತರಣೆ ಮಾಡಲಾಗುತ್ತದೆ.

ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಬಿಎ, ಬಿಕಾಂ, ಬಿಎಸ್‌ಸಿ, ಬಿಬಿಎ, ಎಂಬಿಎ, ಬಿಸಿಎ, ಎಂಸಿಎ, ಡಿಪ್ಲೊಮಾ (ಎಲ್ಲಾ ವಿಭಾಗ), ಐಟಿಐ, ಬಿಇ (ಎಲ್ಲಾ ವಿಭಾಗ) ಮತ್ತು ಕಂಪ್ಯೂಟರ್ ಸೈನ್ಸ್ ವ್ಯಾಸಂಗ ಮಾಡಿರುವ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.
ಡಿಸೆಂಬರ್ 25ರ ಭಾನುವಾರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯ ತನಕ ಬಿ. ಇ. ಎಸ್. ಎಂ. ಕಾಲೇಜು, ರಟ್ಟಿಹಳ್ಳಿ ರಸ್ತೆ, ಬ್ಯಾಡಗಿ ಇಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆಗಳು; 9480582522, 9449122185, 8497048310, 9242696946, 9241640005.
ತರಬೇತಿಗೆ ಅರ್ಜಿ ಆಹ್ವಾನ; ಹೊಸಪೇಟೆ ನಗರಸಭೆ ವ್ಯಾಪ್ತಿಯಲ್ಲಿ 2022-23ನೇ ಸಾಲಿನ ಡೇ-ನಲ್ಮ್ ಅಭಿಯಾನದ ಹಿನ್ನಲೆಯಲ್ಲಿ ಉದ್ಯೋಗ ಕೌಶಲ್ಯ ತರಬೇತಿ ಮತ್ತು ಸ್ಥಳ ನಿಯುಕ್ತಿ ಉಪಘಟದಡಿ ಫ್ರಂಟ್ ಆಫೀಸ್ ಟ್ರೈನಿ, ಡೊಮೆಸ್ಟಿಕ್ ಡಾಟಾ ಎಂಟ್ರಿ ಆಪರೇಟರ್, ಡೊಮೆಸ್ಟಿಕ್ ಐಟಿ ಹೆಲ್ಪ್ ಡೆಸ್ಕ್ ಅಟೆಂಡಂಟ್, ಸೇವಿಂಗ್ ಮಶಿನ್ ಆಪರೇಟರ್, ಸ್ವ ಉದ್ಯೋಗ ಟೈಲರ್‌ಗೆ ಕೌಶಲ್ಯಾ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ.
ಹೊಸಪೇಟೆ ನಗರಸಭೆ ಪೌರಾಯುಕ್ತ ಮನೋಹರ್ ನಾಗರಾಜ ಈ ಕುರಿತು ಮಾಹಿತಿ ನೀಡಿದ್ದಾರೆ. ಆಸಕ್ತರು ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿಯನ್ನು ಭರ್ತಿ ಮಾಡಿ ಡಿಸೆಂಬರ್ 31ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಡೇ-ನಲ್ಮ್ ವಿಭಾಗವನ್ನು ಸಂರ್ಪಕಿಸಬಹುದು.












Click it and Unblock the Notifications