ಜನವರಿ 30ರಂದು ಬೆಂಗಳೂರಲ್ಲಿ ವಿವಿಧ ಹುದ್ದೆಗಳಿಗೆ ಉದ್ಯೋಗ ಮೇಳ
ಬೆಂಗಳೂರು, ಜನವರಿ 29: ರಾಷ್ಟ್ರೀಯ ಸೇವಾ ಯೋಜನೆಯಡಿ (ಎನ್.ಸಿ.ಎಸ್) ಉದ್ಯೋಗ ಮೇಳವನ್ನು ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಸರ್ಕಾರಿ ಕಾಲೇಜು ಇವರ ಸಹಯೋಗದಲ್ಲಿ ಆಯೋಜಿಸಲಾಗಿದೆ. ಅರ್ಹ, ಆಸಕ್ತ ಅಭ್ಯರ್ಥಿಗಳು ಜನವರಿ 30ರಂದು ನೇರ ಸಂದರ್ಶನಕ್ಕೆ ಹಾಜರಾಗಬಹುದು.
ಸ್ಥಳ: ಸರ್ಕಾರಿ ಕಾಲೇಜು, ಡಾ. ಬಿ. ಆರ್ ಅಂಬೇಡ್ಕರ್ ವೀಧಿ(ಸೆಂಟ್ರಲ್ ಕಾಲೇಜು ಮುಂಭಾಗ), ಬೆಂಗಳೂರು 560 001.
ಸಮಯ: ಬೆಳಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ
ಜ.30 ರಂದು ನಡೆಯುವ ಉದ್ಯೋಗ ಮೇಳದಲ್ಲಿ 20 ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಿ ತಮ್ಮಲ್ಲಿ ಖಾಲಿಯಿರುವ ಹುದ್ದೆಗಳನ್ನು ನೇರವಾಗಿ ಭರ್ತಿ ಮಾಡಿಕೊಳ್ಳಲಿದ್ದಾರೆ.

ವಿದ್ಯಾರ್ಹತೆ: ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಎಲ್ಲಾ ಪದವೀಧರರು ಹಾಗೂ ಕಂಪ್ಯೂಟರ್ ತರಬೇತಿ ಪಡೆದ ಅಭ್ಯರ್ಥಿಗಳು ಭಾಗವಹಿಸಬಹುದು.
ವಯೋಮಿತಿ: 18 ರಿಂದ 35 ವರ್ಷದೊಳಗಿನ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು
ದಾಖಲೆ ಪತ್ರ: ಉದ್ಯೋಗವಕಾಶಕ್ಕಾಗಿ ತಮ್ಮ ವಿದ್ಯಾರ್ಹತೆಯ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ತಮ್ಮ ಬಯೋಡಟಾ, ಆಧಾರ್ ಸಂಖ್ಯೆ ಹಾಗೂ ಭಾವಚಿತ್ರಗಳೊಂದಿಗೆ ಭಾಗವಹಿಸಬಹುದಾಗಿದೆ.
ಹೆಚ್ಚಿನ ಸಂಪರ್ಕ: ಹೆಚ್ಚಿನ ಮಾಹಿತಿಗಾಗಿ ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕೇಂದ್ರ, ಬೆಂಗಳೂರು ಇವರ ದೂರವಾಣಿ ಸಂಖ್ಯೆ:8073741245/8197239971/9686922982ಗೆ ಸಂಪರ್ಕಿಸಬಹುದು.
ಸೂಚನೆ: ಕೋವಿಡ್ -19 ಇರುವ ಹಿನ್ನೆಲೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಉಪ ಪ್ರಾದೇಶಿಕ ಉದ್ಯೋಗ ವಿನಿಮಯ ಕೇಂದ್ರ ಅಧಿಕಾರಿಗಳು ಸೂಚಿಸಿದ್ದಾರೆ.












Click it and Unblock the Notifications