ಚಿತ್ರದುರ್ಗದಲ್ಲಿ ಉದ್ಯೋಗ ಮೇಳ, ಅ. 19ರಂದು ನೇರ ಸಂದರ್ಶನ
ಚಿತ್ರದುರ್ಗ, ಅಕ್ಟೋಬರ್17: ಜನರ ಜೀವ ಎಷ್ಟು ಮುಖ್ಯವೋ ಜೀವನವೂ ಅಷ್ಟೇ ಮುಖ್ಯವಾಗಿದ್ದು ಕೊರೊನಾ ಹೊಡೆತದಿಂದ ಕಳೆದ ಒಂದೂವರೆ ವರ್ಷಗಳಿಂದ ಜನಜೀವನದಲ್ಲಿ ಸಾಕಷ್ಟು ಏರುಪೇರುಗಳಾಗಿತ್ತು. ಈ ನಿಟ್ಟಿನಲ್ಲಿ ಯುವ ಸಮುದಾಯಕ್ಕೆ ಜೀವನೋಪಾಯ ಕಲ್ಪಿಸಿಕೊಟ್ಟು ದುಡಿಯುವ ಆತ್ಮವಿಶ್ವಾಸ ಹೆಚ್ಚಿಸುವ ಹಿನ್ನೆಲೆಯಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ.
ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಅಕ್ಟೋಬರ್ 19 ಮಂಗಳವಾರದಂದು ಬೆಳಗ್ಗೆ 10 ಗಂಟೆಗೆ ಚಿತ್ರದುರ್ಗದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಎಲ್ಲಾ ಉದ್ಯೋಗಕಾಂಕ್ಷಿಗಳು, ಯುವಕರು ಇದರ ಸದುಪಯೋಗವನ್ನು ಪಡಿಸಿಕೊಳ್ಳಬಹುದು ಎಂದು ಉದ್ಯೋಗಾಧಿಕಾರಿ ಕೋರಿದ್ದಾರೆ.
ಪ್ರಮುಖ ಕಂಪನಿಗಳು: ಐಸಿಐಸಿಐ ಬ್ಯಾಂಕ್, ಯಶಸ್ವಿ ಗ್ರೂಪ್, ಹ್ಯುಂಡೈ ಸೇರಿದಂತೆ ಪ್ರತಿಷ್ಠಿತ ಕಂಪನಿಗಳು ನೇರ ಸಂದರ್ಶನ ನಡೆಸಲಿವೆ.
ಉದ್ಯೋಗ ಮೇಳದ ದಿನಾಂಕ: 19/10/2021.
ಸಮಯ: ಬೆಳಗ್ಗೆ 10 ರಿಂದ ಮಧ್ಯಾಹ್ನ 3
ಸಂದರ್ಶನ ಸ್ಥಳ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಚಿತ್ರದುರ್ಗ.
ವಯೋಮಿತಿ: 18 ರಿಂದ 28 ವರ್ಷದೊಳಗಿರಬೇಕು.
ವಿದ್ಯಾರ್ಹತೆ: ಪಿ.ಯು, ಐಟಿಐ, ಡಿಪ್ಲಮೋ, ಬಿ.ಎ, ಬಿ.ಕಾಂ, ಬಿ.ಎಸ್ಸಿ, ಬಿಬಿಎಂ, ಎಂಬಿಎ, ಎಂ.ಕಾಂ ಮತ್ತು ಪದವೀಧದರು.
ಅಗತ್ಯ ದಾಖಲೆಗಳು:
ಬಯೋಡೇಟಾ- 4 ಪ್ರತಿ, ವಿದ್ಯಾರ್ಹತೆ ಪ್ರಮಾಣ ಪತ್ರ, ಫೋಟೋಸ್, ಆಧಾರ್ ಕಾರ್ಡ್
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಸಂಪರ್ಕ ಸಂಖ್ಯೆ: 70224 59064, 81056, 19020.

ಕಳೆದ ಒಂದೂವರೆ ವರ್ಷದಿಂದ ಜಿಲ್ಲೆಯ ಜನರನ್ನು ಕೊರೋನಾ ಹೊಡೆತದಿಂದ ತಪ್ಪಿಸಲು ಕೊರೋನಾ ಲಾಕ್ ಡೌನ್, ವೀಕೆಂಡ್ ಲಾಕ್‌ಡೌನ್ ಎಂದು ಕೊರೋನಾ ಮಾರ್ಗಸೂಚಿಗಳ ಅನ್ವಯ ನಿರ್ಬಂಧಿಸಲಾಗಿತ್ತು. ಇದರಿಂದ ಸಾಕಷ್ಟು ಆರ್ಥಿಕವಾಗಿ ಸಹ ಜನರಿಗೆ ತೊಂದರೆಯಾಗಿತ್ತು. ಆದರೆ ಜಿಲ್ಲೆಯಲ್ಲಿ ಇದೀಗ ಕೊರೋನಾ ಪರಿಸ್ಥಿತಿ ಸಂಪೂರ್ಣ ಹತೋಟಿಯಲ್ಲಿದ್ದು ಸಾರ್ವಜನಿಕ ಜನಜೀವನ ಮಾರ್ಗಸೂಚಿ ನಿಯಮಗಳ ಪಾಲನೆಯೊಂದಿಗೆ ಸಹಜ ಸ್ಥಿತಿಗೆ ಮರಳುತ್ತಿರುವುದು ಸಂತಸದ ವಿಷಯವಾಗಿದೆ.
ಜಿಲ್ಲೆಯ ಯುವ ಸಮುದಾಯಕ್ಕೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯಾಭಿವೃದ್ದಿ ಕಛೇರಿ, ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಮತ್ತು ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಚಿಕ್ಕಬಳ್ಳಾಪುರ ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 29ರಂದು ಮಿನಿ ಉದ್ಯೋಗ ಮೇಳವನ್ನು ಚಿಕ್ಕಬಳ್ಳಾಪುರದ ಎಂಜಿ ರಸ್ತೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಲಾಗುತ್ತಿದೆ.
ಉದ್ಯೋಗ ಮೇಳದಲ್ಲಿ ಕೋವಿಡ್ ನಿಯಮಗಳನ್ನು ಪಾಲಿಸುವುದು ಮತ್ತು ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು ಯುವ ಜನತೆ ಇದರ ಪ್ರಯೋಜನ ಪಡೆದುಕೊಳ್ಳಬೇಕೆಂದು ತಿಳಿಸಿದರು.
ಸೂಚನೆ: ಕೋವಿಡ್ -19 ಇರುವ ಹಿನ್ನೆಲೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.
ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ಪ್ರಮಾಣವು ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದು ಶೂನ್ಯಕ್ಕೆ ತರಲು ಜಿಲ್ಲಾಡಳಿತವು ಎಲ್ಲ ಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಂಡಿದೆ. ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸುವ ಉದ್ದೇಶವನ್ನು ಜಿಲ್ಲಾಡಳಿತ ಹೊಂದಿದೆ. ಗ್ರಾಮೀಣ ಭಾಗದ ವಿದ್ಯಾವಂತ ಯುವಕ ಯುವತಿಯರಿಗೆ ಹೆಚ್ಚಿನ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚೆಚ್ಚು ಉದ್ಯೋಗ ಮೇಳಗಳನ್ನು ಗ್ರಾಮೀಣ ಭಾಗದಲ್ಲಿ ಆಯೋಜಿಸಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾ ಉದ್ಯೋಗಾಧಿಕಾರಿಗೆ ಸೂಚನೆ ನೀಡಿದರು. (ಮಾಹಿತಿ ಕೃಪೆ: ಕರ್ನಾಟಕ ವಾರ್ತೆ)
2021-22ನೇ ಸಾಲಿನ ಕೇಂದ್ರ ಸರ್ಕಾರದ ನ್ಯಾಷನಲ್ ಇ-ಸ್ಕಾಲರ್‍ಶಿಪ್ ಯೋಜನೆಯಡಿ ವಿಕಲಚೇತನ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕೆ ಇ-ಸ್ಕಾಲರ್‍ಶಿಪ್ ಪೋರ್ಟಲ್‍ನಲ್ಲಿ ಆನ್‍ಲೈನ್‍ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜುಗಳು, ಶಿಕ್ಷಣ ಸಣಸ್ಥೆಗಳ ಮುಖಾಂತರ ಈ ಯೋಜನೆಯ ವೆಬ್‍ಸೈಟ್ www.scholarship.gov.in ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಪ್ರಿ-ಮೆಟ್ರಿಕ್ ವಿದ್ಯಾಥಿಗಳಿಗೆ ನವೆಂಬರ್ 15 ಹಾಗೂ ಪೋಸ್ಟ್-ಮೆಟ್ರಿಕ್ ಮತ್ತು ಟಾಪ್ ಕ್ಲಾಸ್ ವಿದ್ಯಾರ್ಥಿಗಳಿಗೆ ನವೆಂಬರ್ 30 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.












Click it and Unblock the Notifications