• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಲಬುರಗಿ: ಜನವರಿ 21 ರಂದು ಉದ್ಯೋಗ ಮೇಳ, ನೇರ ನೇಮಕಾತಿ

|
Google Oneindia Kannada News

ಕಲಬುರಗಿ, ಜನವರಿ 12: ಕೇಂದ್ರ ಸರ್ಕಾರದ ರಾಪ್ಟ್ರೀಯ ವೃತ್ತಿ ಸೇವಾ ಯೋಜನೆಯಡಿಯಲ್ಲಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಕಲಬುರಗಿ ನಗರದ ಎಂ.ಎಸ್.ಕೆ.ಮಿಲ್ ರಸ್ತೆಯ ಸರ್ಕಾರಿ ಐ.ಟಿ.ಐ. ಕಾಲೇಜು ಹಿಂದುಗಡೆ ಇರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.ಈ ಉದ್ಯೋಗ ಮೇಳದಲ್ಲಿ ರಾಜ್ಯದ 10ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸಲಿವೆ.

ಶಿವಮೊಗ್ಗದಲ್ಲಿ ಜನವರಿ 19 ರಂದು ಉದ್ಯೋಗ ಮೇಳಶಿವಮೊಗ್ಗದಲ್ಲಿ ಜನವರಿ 19 ರಂದು ಉದ್ಯೋಗ ಮೇಳ

ದಿನಾಂಕ/ಸಮಯ: ಜನವರಿ 21ರಂದು ಬೆಳಗಿನ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ವಿದ್ಯಾರ್ಹತೆ: ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐಟಿಐ, ಡಿಪ್ಲೋಮಾ, ಪದವೀಧರರು ಹಾಗೂ ಸ್ನಾತಕೋತ್ತರ ಪದವೀಧರ ವಿದ್ಯಾರ್ಹತೆಯುಳ್ಳ ಆಸಕ್ತ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗಪಡೆದುಕೊಳ್ಳಬೇಕು.

ಅರ್ಹ ನಿರುದ್ಯೋಗ ಪುರುಷ/ಮಹಿಳಾ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡಿಸಿಕೊಳ್ಳಬಹುದು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಸ್ವಂತ-ಪರಿಚಯ ಪತ್ರ (BIO-DATA) ದೊಂದಿಗೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ: ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846ಗೆ ಸಂಪರ್ಕಿಸಲು ಕೋರಲಾಗಿದೆ.

ಸೂಚನೆ: ಕೋವಿಡ್ -19 ಇರುವ ಹಿನ್ನೆಲೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಪಾಲಿಸಬೇಕು ಎಂದು ಅಧಿಕಾರಿಗಳು ಸೂಚಿಸಿದ್ದಾರೆ.(ಮಾಹಿತಿ ಕೃಪೆ: ಕರ್ನಾಟಕ ವಾರ್ತೆ)

English summary
Job fair: Direct Interview for various jobs is organised at District Job exchange center, MSK Mill road Government ITI college behind, Kalaburagi. Qualified candidates can Walk in on Jan 21, 2021.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X