ಮೈಸೂರಲ್ಲಿ ಜನವರಿ 16 ರಂದು ಉದ್ಯೋಗ ಮೇಳ, ನೇರ ನೇಮಕಾತಿ
ಮೈಸೂರು, ಜನವರಿ 05: ಕೇಂದ್ರ ಸರ್ಕಾರದ ರಾಪ್ಟ್ರೀಯ ವೃತ್ತಿ ಸೇವಾ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಜನವರಿ 16 ರಂದು ಬೆಳಗ್ಗೆ 10-00 ಘಂಟೆಯಿಂದ ಸಂಜೆ 4-30 ಗಂಟೆ ವರೆಗೆ ಎನ್.ಆರ್.ಮೊಹಲ್ಲಾದ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಕಚೇರಿಯ ಆವರಣದಲ್ಲಿ ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಸುರಭಿ ಪ್ಲಾನ್‍ಟೆಕ್, ಬಿ.ಎಸ್.ಗೌಡ ಎಂಟರ್ ಪ್ರೈಸಸ್, ತೇಜಸ್ವಿನಿ ಎಂಟರ್ ಪ್ರೈಸಸ್ , ಹಿಂದುಜಾ ಗ್ಲೋಬಲ್ ಸಲ್ಯೂಷನ್, ಗ್ರಾಸ್ ರೋಟ್, ರಾಣೆ ಮದ್ರಾಸ್ ಪ್ರೈ. ಲಿ., ವರ್ಲ್ಡ್ ಡಿಜಿಟಲ್ ಪ್ರೈ.ಲಿ, ಪ್ಲಾಸ್ಸಿ, ತ್ರಿವೇಣಿ ಇಂಜಿನಿಯರಿಂಗ್ ವರ್ಕ್ಸ್, ಥೀರಂ ಕಂಪನಿ, ಪೀಪಲ್ ಮ್ಯಾನೇಜ್‍ಮೆಂಟ್, ಎಲೇಷೀಯಾ ಪ್ರೈ.ಲಿ, ಬಿ.ಎಸ್.ಎಲ್ ಇಂಡಿಯಾ ಪ್ರೈ.ಲಿ, ಜೋಆಲೋಕಾಸ್, ಬುರೇಕಾ ಎಕ್ಸ್ ಕರ್ಷನ್ ಪ್ರೈ.ಲಿ, ಯುರೇಕಾ ಪ್ರೈ.ಲಿ., ಅರಸ್ ಕಾರ್ ಪ್ರೈ.ಲಿ., ಪ್ರಥಮ್ ಎಜುಕೇಷನ್ ಫೌಂಡೇಷನ್, ಎಮ್ಸ್, ಟೇಸ್ಲೇ ಇನ್ಪೋಟೇಕ್ ಪ್ರೈ.ಲಿ ಬೆಂಗಳೂರು, ನೆಸೋ. ಜುಬಿಲೇಟ್ ಹಾಗೂ ಇನ್ನಿತರೆ ಖಾಸಗಿ ನಿಯೋಜಕರುಗಳು ಭಾಗವಹಿಸಲಿದ್ದಾರೆ.
ವಿದ್ಯಾರ್ಹತೆ: ಎಸ್‍ಎಸ್‍ಎಲ್‍ಸಿ ಉತ್ತೀರ್ಣ ಅಥವಾ ಅನುತ್ತೀರ್ಣ, ಪಿಯುಸಿ, ಜೆಓಸಿ, ಐಟಿಐ, ಡಿಪ್ಲೋಮಾ, ಇಂಜಿನಿಯರಿಂಗ್ ಯಾವುದೇ ಪದವಿಗಳಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಆಯ್ಕೆ ಪ್ರಕ್ರಿಯೆ ನಡೆಯಲಿದೆ.

ಅರ್ಹ ನಿರುದ್ಯೋಗ ಪುರುಷ/ಮಹಿಳಾ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ತಮ್ಮ ಸ್ವಂತ ಖರ್ಚಿನಲ್ಲಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಇದರ ಸದುಪಯೋಗ ಪಡಿಸಿಕೊಳ್ಳಬಹುದು. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ಸ್ವಂತ-ಪರಿಚಯ ಪತ್ರ (BIO-DATA) ದೊಂದಿಗೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಸಹಾಯಕ ನಿರ್ದೇಶಕರು, ದೂರವಾಣಿ ಸಂಖ್ಯೆ: 0821-2489972ರಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ












Click it and Unblock the Notifications