JOB: ಕೋಲಾರದಲ್ಲಿ ಬೃಹತ್ ಉದ್ಯೋಗ ಮೇಳ, ಎಲ್ಲಿ ಹಾಗೂ ಯಾವಾಗ: ಯಾರೆಲ್ಲ ಅರ್ಹರು ?
ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಗುಡ್‌ನ್ಯೂಸ್ ಇದೆ. ಕೋಲಾರದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗುತ್ತಿದ್ದು, ಆಸಕ್ತರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಕೋಲಾರದಲ್ಲಿ ಉದ್ಯೋಗಾವಕಾಶಕ್ಕೆ ಸಂಬಂಧಿಸಿದಂತೆ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ. ಯಾರೆಲ್ಲ ಅರ್ಜಿ ಸಲ್ಲಿಸಬಹುದು ಹಾಗೂ ಯಾರೆಲ್ಲ ಉದ್ಯೋಗ ಮೇಳಕ್ಕೆ ಅರ್ಹರು ಎನ್ನುವ ಸಂಪೂರ್ಣ ವಿವರ ಇಲ್ಲಿದೆ. ಕರ್ನಾಟಕದ ವಿವಿಧ ಭಾಗದಲ್ಲಿ ನಿರುದ್ಯೋಗ ಸಮಸ್ಯೆ ತೀವ್ರವಾಗಿದೆ. ಇದನ್ನು ತಪ್ಪಿಸುವ ನಿಟ್ಟಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರವು ಸುಧಾರಣೆ ಕ್ರಮಗಳನ್ನು ಅಳವಡಿಸಿಕೊಳ್ಳುತ್ತಿದೆ.
ಕೋಲಾರ ಹಾಗೂ ಕೋಲಾರದ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲಸ ಹುಡುಕುತ್ತಿರುವವರಿಗೆ ಇಲ್ಲೊಂದು ಸಿಹಿಸುದ್ದಿ ಇದೆ. ಕೋಲಾರದಲ್ಲಿ ಇದೇ 21ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದ್ದು, ಆಸಕ್ತರು ಇದರಲ್ಲಿ ಭಾಗವಹಿಸಬಹುದಾಗಿದೆ. ಡಿಸೆಂಬರ್ 21ರ ಬೆಳಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಈ ಉದ್ಯೋಗ ಮೇಳ ನಡೆಯಲಿದೆ. ಕೋಲಾರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಅಂತರಗಂಗೆ ರಸ್ತೆಯಲ್ಲಿ ಈ ಬೃಹತ್ ಉದ್ಯೋಗ ಮೇಳ ನಡೆಯಲಿದೆ.

ವಿವಿಧ ಖಾಸಗಿ ಸಂಸ್ಥೆಗಳು ಭಾಗಿ: ಇನ್ನು ಈ ಉದ್ಯೋಗ ಮೇಳದಲ್ಲಿ ವಿವಿಧ ಖಾಸಗಿ ಸಂಸ್ಥೆಗಳು ಭಾಗವಹಿಸಲಿವೆ ಎಂದು ಹೇಳಲಾಗಿದೆ. ಕೋಲಾರದ ಆರಕ್ಕೂ ಹೆಚ್ಚು ಹಾಗೂ ಪ್ರಮುಖ ಸಂಸ್ಥೆಗಳು ಈ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಲಿವೆ. ಈ ಉದ್ಯೋಗ ಮೇಳದಲ್ಲಿ ಸುಗುಣಾ ಫುಡ್ಸ್ ಪ್ರೈ. ಲಿ., ಸ್ಟೇನ್ ಕ್ರೆಡಿಟ್ ಕೇರ್ ಪ್ರೈ. ಲಿ., ಬಿಎಲ್ಆರ್, ನವ ಭಾರತ್ ಫರ್ಟಿಲೈಜರ್ಸ್, ಮೆಡ್‌ಪ್ಲಸ್, ಹ್ಯಾಪಿ ಮೈಂಡ್ಸ್ ಸೊಲ್ಯೂಷನ್ಸ್ ಹಾಗೂ ಸ್ಪಂದನ ಸ್ಫೂರ್ಟಿ ಫೈನಾನ್ಷಿಯಲ್ ಲಿ ಸೇರಿದಂತೆ ವಿವಿಧ ಸಂಸ್ಥೆಗಳು ಭಾಗವಹಿಸಲಿವೆ ಎಂದು ಹೇಳಲಾಗಿದೆ.
ಈ ಸಂಸ್ಥೆಗಳ ಆಡಳಿತ ಮಂಡಳಿಯು ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಉದ್ಯೋಗ ಮೇಳದಲ್ಲೇ ಉದ್ಯೋಗಿಗಳನ್ನು ಆಯ್ಕೆ ಮಾಡಿಕೊಳ್ಳಲಿದೆ.
ಸಂಸ್ಥೆಯ ಅಧಿಕಾರಿಗಳು ತಮ್ಮ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಿದ್ದಾರೆ.
ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾರೆಲ್ಲ ಅರ್ಹರು: ಈ ಉದ್ಯೋಗ ಮೇಳದಲ್ಲಿ ಹಲವರು ಭಾಗವಹಿಸುವುದಕ್ಕೆ ಅವಕಾಶ ಕಲ್ಪಿಸಲಾಗಿದೆ. ಎಸ್‌ಎಸ್ಎಲ್‌ಸಿ, ಪಿ.ಯು.ಸಿ, ಐಟಿಐ, ಡಿಪ್ಲೋಮಾ ಹಾಗೂ ಬಿಇ ಹೊರತುಪಡಿಸಿದ ಪದವೀಧರರು ಹಾಗೂ ಸ್ನಾತಕೋತ್ತರ ಪದವಿ ಪೂರೈಸಿರುವವರು ಭಾಗವಹಿಸಬಹುದಾಗಿದೆ.
ಏನೆಲ್ಲಾ ದಾಖಲೆಗಳು ಬೇಕು: ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಎಲ್ಲಾ ಪ್ರಮುಖ ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕು. ಇದರೊಂದಿಗೆ ಅಂಕಪಟ್ಟಿಗಳ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್, ಬಯೋಡೇಟಾ, ಇತ್ತೀಚಿಗೆ ತೆಗೆದ ಒಂದು ಭಾವಚಿತ್ರಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 7353232456 ಅಥವಾ 9740154413ಕ್ಕೆ ಕರೆ ಮಾಡಬಹುದಾಗಿದೆ. ಈ ದಾಖಲೆಗಳೊಂದಿಗೆ ಕೋಲಾರದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಭೇಟಿ ನೀಡಬಹುದಾಗಿದೆ.
ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಕೊನೆಯ ದಿನಾಂಕದ ವರೆಗೆ ಕಾಯದೆ ಸಾಧ್ಯವಾದಷ್ಟು ಬೇಗ ಅರ್ಜಿ ಸಲ್ಲಿಸಿ. ಕೋಲಾರದಲ್ಲಿ ಇರುವವರಿಗೆ ಈ ಉದ್ಯೋಗ ಮೇಳಕ್ಕೆ ಮೊದಲ ಆದ್ಯತೆ ಇರಲಿದೆ ಎಂದು ಹೇಳಲಾಗಿದೆ.












Click it and Unblock the Notifications