Aadhaar: ರಾಜ್ಯದ 8 ಜಿಲ್ಲೆಗಳ ಆಧಾರ್ ಸೇವಾ ಕೇಂದ್ರಗಳಲ್ಲಿ ಉದ್ಯೋಗವಕಾಶ
Aadhaar: ರಾಜ್ಯದಲ್ಲಿ ಉದ್ಯೋಗವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಇದೀಗ ಕೇಂದ್ರ ಸರ್ಕಾರದ ಸಿಎಸ್‌ಸಿ ಅಡಿಯಲ್ಲಿ ಕರ್ನಾಟಕ ಆಧಾರ್ ಸೇವಾ ಕೇಂದ್ರದಲ್ಲಿ ಆಧಾರ್ ಸೂಪರ್ವೈಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಹಾಗಾದರೆ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ವಿಧಾನ, ಮಾಸಿಕ ಸಂಬಳ ಹಾಗೂ ಯಾವ್ಯವಾ ಜಿಲ್ಲೆಗಳಲ್ಲಿ ಎಷ್ಟು ಹುದ್ದೆಗಳು ಖಾಲಿಯಿವೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದೀಗ 8 ಜಿಲ್ಲೆಗಳಲ್ಲಿ ಹುದ್ದೆಗಳಿ ಖಾಲಿಯಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಬಾಗಲಕೋಟೆ - 1, ಬೆಳಗಾವಿ - 1, ಚಿಕ್ಕಮಗಳೂರು -1, ಗದಗ - 1, ಕೊಪ್ಪಳ - 1, ಉಡುಪಿ - 1,
ಉತ್ತರ ಕನ್ನಡ - 1, ಯಾದಗಿರಿಯಲ್ಲಿ 1 ಹುದ್ದೆಗಳು ಖಾಲಿಯಿವೆ.

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಪಿಯುಸಿ, ಐಟಿಐ ಅಥವಾ ಡಿಪ್ಲೊಮಾ ಪೂರ್ಣಗೊಳಿಸಿರಬೇಕು. ಈಗಾಗಲೇ ಆಧಾರ್ ಸೂಪರ್ವೈಸರ್ ಆಗಿ ಒಂದು ವರ್ಷದ ಹುದ್ದೆ ಅನುಭವ ಹೊಂದಿರಬೇಕು. ಇನ್ನು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಈ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿದೆ.
ಅರ್ಜಿ ಸಲ್ಲಿಸಲು ಕೊನೆ ದಿನ ಫೆಬ್ರವರಿ 28 ಆಗಿದ್ದು, ಈ ಹುದ್ದೆ ಕುರಿತು ಸಂಪೂರ್ಣ ಮಾಹಿತಿಗಾಗಿ ಅಧಿಕೃತ ಅಧಿಸೂಚನೆ cscspv.in ವೆಬ್ಸೈಟ್ಗೆ ಭೇಟಿ ನೀಡಬಹುದಾಗಿದೆ.
1,207 ಹುದ್ದೆಗಳ ಭರ್ತಿಗೆ ಅನುಮತಿ: ಇನ್ನು ರಾಜ್ಯ ಸರ್ಕಾರವು ಅಬಕಾರಿ ಇಲಾಖೆಯಲ್ಲಿನ 1,207 ಹುದ್ದೆಗಳ ಭರ್ತಿಗೆ ಅನುಮತಿ ನೀಡಿದ್ದು, ಶೀಘ್ರವೇ ಅಧಿಕೃತ ಆದೇಶ ಹೊರಬೀಳಲಿದೆ. ಈ ಮೂಲಕ ಉದ್ಯೋಗ ಹುಡುಕಾಟದಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ ಸಿಕ್ಕಂತಾಗಿದೆ. ಅಬಕಾರಿ ಇಲಾಖೆಯಲ್ಲಿ ಅಬಕಾರಿ ಉಪ ನಿರೀಕ್ಷಕ ಅಬಕಾರಿ ಪೇದೆಗಳ ಹುದ್ದೆಗಳ ಭರ್ತಿಗೆ ಸರ್ಕಾರ ಅನುಮತಿ ನೀಡಿದೆ.
ಅಬಕಾರಿ ಉಪ ನಿರೀಕ್ಷಕ-265 ಹುದ್ದೆಗಳು, ಅಬಕಾರಿ ಪೇದೆ - 942 ಹುದ್ದೆಗಳು ಸೇರಿ ಒಟ್ಟು 1207 ಹುದ್ದೆಗಳು ಖಾಲಿಯಿದ್ದು, ಅರ್ಜಿ ಸಲ್ಲಿಕೆ ದಿನಾಂಕದ ಬಗ್ಗೆ ಶೀಘ್ರವೇ ಅಧಿಸೂಚನೆ ಪ್ರಕಟವಾಗಲಿದೆ. ಇದರಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ರಾಜ್ಯ ಸರ್ಕಾರದ 7ನೇ ವೇತನ ಆಯೋಗದ ನಿಯಮಾವಳಿಗಳ ಅನ್ವಯ ವೇತನ ನಿಗದಿಯಾಗಲಿದೆ. ಕನಿಷ್ಟ 18 ವರ್ಷ ಗರಿಷ್ಟ 27 ವರ್ಷದವರೆಗಿನವರು ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅಭ್ಯರ್ಥಿಗಳನ್ನು ಸ್ಪರ್ಧಾತ್ಮಕ ಪರೀಕ್ಷೆ, ದೈಹಿಕ ಪರೀಕ್ಷೆ & ವೈದ್ಯಕೀಯ ಪರೀಕ್ಷೆಯನ್ನು ಇರುತ್ತದೆ.












Click it and Unblock the Notifications