Doordarshan Recruitment 2025: ಬೆಂಗಳೂರು ದೂರದರ್ಶನ ಕೇಂದ್ರದಲ್ಲಿ ಉದ್ಯೋಗವಕಾಶ
Doordarshan Recruitment 2025: ಬೆಂಗಳೂರು ಪ್ರಸಾರ ಭಾರತಿ ದೂರದರ್ಶನದಲ್ಲಿನ ಖಾಲಿಯಿರುವ ಸೀನಿಯರ್ ಕರೆಸ್ಪಾಡೆಂಟ್ ಹುದ್ದೆ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಸುದ್ದಿ ವಿಭಾಗದಲ್ಲಿ ಈ ನೇಮಕಾತಿ ನಡೆಯುತ್ತಿದ್ದು, ಗುತ್ತಿಗೆ ಆಧಾರದ ಮೇಲೆ ತೆಗೆದುಕೊಳ್ಳಲಾಗುತ್ತದೆ. ಹಾಗಾದರೆ ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಈ ಹುದ್ದೆಯನ್ನು ಎರಡು ವರ್ಷದ ಗುತ್ತಿಗೆ ಅವಧಿ ಮೇರೆಗೆ ನೇಮಕ ಮಾಡಲಾಗುವುದು. ಆಯ್ಕೆಯಾದವರಿಗೆ ಮಾಸಿಕ 80,000 ದಿಂದ 1,25,000 ವೇತನ ನಿಗದಿಪಡಿಸಲಾಗಿದೆ. ಅರ್ಜಿ ಸಲ್ಲಿಕೆ ಕೊನೇ ದಿನಾಂಕ ಜನವರಿ 31, 2025 ಆಗಿದೆ.

ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು ಪತ್ರಿಕೋದ್ಯಮ, ಸಮೂಹ ಮಾಧ್ಯಮ ಅಥವಾ ಇನ್ನಿತರ ಸಂಬಂಧಿತ ಕ್ಷೇತ್ರದಲ್ಲಿ ಪದವಿ, ಸ್ನಾತಕೋತ್ತರ ಪದವಿ ಅಥವಾ ಡಿಪ್ಲೊಮಾ ಪದವಿ ಪಡೆದಿರಬೇಕಾಗುತ್ತದೆ. ಅಭ್ಯರ್ಥಿಗಳು ಪ್ರಾದೇಶಿಕ ಭಾಷೆ ಹಿಡಿತದ ಜೊತೆಗೆ ಇಂಗ್ಲಿಷ್ ಮತ್ತು ಹಿಂದಿ ಭಾಷೆ ಜ್ಞಾನ ಹೊಂದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ 5 ವರ್ಷ ಕಾರ್ಯನಿರ್ವಹಿಸಿದ ಅನುಭವ ಇರಬೇಕು ಎಂದು ತಿಳಿಸಿದೆ.
ಅಭ್ಯರ್ಥಿಗಳು ಈ ಹುದ್ದೆಗೆ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕಾಗುತ್ತದೆ. applications.prasarbharati.org ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಶಾರ್ಟ್ಲಿಸ್ಟ್ ಆದ ಅಭ್ಯರ್ಥಿಗಳನ್ನು ಇಮೇಲ್ ಮೂಲಕ ಸಂಪರ್ಕಿಸಲಾಗುತ್ತದೆ. ಈ ಹುದ್ದೆಗೆ ಸಂಬಂಧಿಸಿದ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ prasarbharati.gov.inಗೆ ಭೇಟಿ ನೀಡಬಹುದಾಗಿದೆ.
ವಿಮಾನ ನಿಲ್ದಾಣ ಪ್ರಾಧಿಕಾರದಲ್ಲಿ ಉದ್ಯೋಗಾವಕಾಶ: ದೇಶದಲ್ಲಿ ಉದ್ಯೋಗವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಇದೀಗ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಖಾಲಿ ಇರುವ 89 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಹಾಗಾದರೆ, ಅರ್ಜಿ ಸಲ್ಲಿಸಬಯಸುವವರು ಹೊಂದಿರಬೇಕಾದ ಅರ್ಹತೆಗಳೇನು ಹಾಗೂ ಮಾಸಿಕ ವೇತನ ಎಷ್ಟಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರವು ಕಿರಿಯ ಸಹಾಯಕ (Fire Services) 89 ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ aai.aero ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ.
ಹಂತ I ಮತ್ತು ಹಂತ IIರ ಅಡಿಯಲ್ಲಿ ಆನ್‌ಲೈನ್ ನೋಂದಣಿ ಪೂರ್ಣಗೊಳಿಸಲು ಜನವರಿ 28, 2025 ಕೊನೇ ದಿನವಾಗಿದೆ. ಅರ್ಜಿ ಸಲ್ಲಿಸಬಯಸುವವರು ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರಬೇಕಾಗುತ್ತದೆ. ಜೊತೆಗೆ ಮೆಕ್ಯಾನಿಕಲ್, ಆಟೋಮೊಬೈಲ್ ಅಥವಾ ಅಗ್ನಿಶಾಮಕ ವಿಭಾಗದಲ್ಲಿ 3 ವರ್ಷಗಳ ಡಿಪ್ಲೊಮಾ ಮಾಡಿರಬೇಕು ಅಥವಾ 12ನೇ ತರಗತಿ ಉತ್ತೀರ್ಣರಾಗಿರಬೇಕಾಗುತ್ತದೆ.
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?: ಆಯ್ಕೆ ಪ್ರಕ್ರಿಯೆಯು ಎರಡು ಹಂತಗಳಲ್ಲಿ ನಡೆಯಲಿದೆ, ಮೊದಲನೇ ಹಂತದಲ್ಲಿ ಕಂಪ್ಯೂಟರ್ ಆಧಾರಿತ ಪರೀಕ್ಷೆ ಮಾಡಲಾಗುತ್ತದೆ. ಸಮಯ 2 ಗಂಟೆಯಾಗಿರುತ್ತದೆ. ಸಾಮಾನ್ಯ, EWS ಮತ್ತು ಒಬಿಸಿ ವರ್ಗಕ್ಕೆ 100ಕ್ಕೆ ಶೇಕಡ 50ರಷ್ಟು ಅಂಕಗಳನ್ನು ಗಳಿಸಬೇಕು. ಎಸ್‌ಸಿ/ಎಸ್‌ಟಿ ವರ್ಗದ ಅಭ್ಯರ್ಥಿಗಳು 100ಕ್ಕೆ ಶೇಕಡ 40ರಷ್ಟು ಅಂಗಳನ್ನು ಗಳಿಸಬೇಕಾಗುತ್ತದೆ.












Click it and Unblock the Notifications