Supreme Court Recruitment: ಸುಪ್ರಿಂ ಕೋರ್ಟ್‌ನಲ್ಲಿ ಉದ್ಯೋಗಾವಕಾಶ
Supreme Court Recruitment: ಇದೀಗ ಉದ್ಯೋಗಾವಕಾಶಗಳು ತೆಗೆದುಕೊಳ್ಳುತ್ತಲೇ ಇವೆ. ಹಾಗೆಯೇ ಭಾರತದ ಪ್ರತಿಷ್ಠಿತ ನ್ಯಾಯಾಲಯವಾದ ಸುಪ್ರಿಂ ಕೋರ್ಟ್‌ನಲ್ಲಿ ಖಾಲಿ ಇರುವ 90 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದರೆ, ಅರ್ಜಿ ಸಲ್ಲಿಸಬಯಸುವವರು ಯಾವೆಲ್ಲಾ ಅರ್ಹತೆಗಳನ್ನು ಹೊಂದಿರಬೇಕು ಎನ್ನುವ ಸಂಪೂರ್ಣ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ತಿಳಿಯಿರಿ.
ಸುಪ್ರೀಂ ಕೋರ್ಟ್ ಕಾನೂನು ಕ್ಲರ್ಕ್ ಕಮ್ ರಿಸರ್ಚ್ ಅಸೋಸಿಯೇಟ್ಸ್ ಅಧಿಸೂಚನೆಯನ್ನು ಬಿಡುಗಡೆ ಮಾಡಿದೆ. ಇದಕ್ಕಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನ ಆಹ್ವಾನಿಸಿದೆ. ಆಸಕ್ತರು ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಕೊನೆಯ ದಿನ ಫೆಬ್ರವರಿ 7, 2025 ಆಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಖಾಲಿರುವ 90 ಕಾನೂನು ಕ್ಲರ್ಕ್ ಕಮ್ ರಿಸರ್ಚ್ ಅಸೋಸಿಯೇಟ್ಸ್ ಹುದ್ದೆಗಳಿಗೆ ಪರೀಕ್ಷೆಯನ್ನು ದೇಶದ ವಿವಿಧ ನಗರಗಳಲ್ಲಿ ನಡೆಸಲಾಗುತ್ತದೆ. ಇದರಲ್ಲಿ ಬೆಂಗಳೂರು ಕೂಡ ಸೇರಿದೆ. ಕೋರ್ಟ್ ವೆಬ್ಸೈಟ್ ttp://www.sci.gov.in ಆಗಿದೆ. ವಿದ್ಯಾರ್ಹತೆ ವಿಚಾರಕ್ಕೆ ಬಂದರೆ, ಭಾರತದ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಲ್ಲಿ ಕಾನೂನು ಪದವಿ (LLB) ಪಡೆದಿರಬೇಕು. ಅಂತಿಮ ವರ್ಷದಲ್ಲಿರುವ ಅಭ್ಯರ್ಥಿಗಳು ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ ಎಂದು ತಿಳಿಸಿದೆ.
ವಯೋಮಿತಿ ಹಾಗೂ ಅರ್ಜಿ ಶುಲ್ಕದ ವಿವರ: 20 ರಿಂದ 32 ವರ್ಷದವರಿಗಿನವರು ಈ ಹುದ್ದೆಗೆ ಸರ್ಜಿ ಸಲ್ಲಿಕೆ ಮಾಡಬಹುದು. ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 500 ರೂಪಾಯಿ, EWS, OBC ವರ್ಗಕ್ಕೆ ಸೇರಿದ ಅಭ್ಯರ್ಥಿಗಳಿಗೂ 500 ರೂಪಾಯಿ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ ಎಂದು ತಿಳಿಸಿದೆ.
ಆಯ್ಕೆ ಪ್ರಕ್ರಿಯೆ ಹೇಗಿರಲಿದೆ?: ಸ್ಕ್ರೀನಿಂಗ್ ಟೆಸ್ಟ್, ವಿಷಯಾಧಾರಿತ ಪರೀಕ್ಷೆ, ಸಂದರ್ಶನ, ದಾಖಲೆ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಇನ್ನು ಪರೀಕ್ಷೆ ಶುಲ್ಕ ಪಾವತಿಗೆ ಕೊನೆಯ ದಿನಾಂಕ ಫೆಬ್ರವರಿ 7 2025, ಪರೀಕ್ಷೆ ಮಾರ್ಚ್ 9ರಂದು ನೆಡಯಲಿದೆ.
ಹೆಚ್ಚಿನ ಮಾಹಿತಿಗಾಗಿ
https://cdnbbsr.s3waas.gov.in/s3ec0490f1f4972d133619a60c30f3559e/uploads/2025/01/2025011066.pdf, https://cdn3.digialm.com/EForms/configuredHtml/32912/92228/Index.html ಭೆಟಿ ನೀಡಬಹುದಾಗಿದೆ.
ಉದ್ಯೋಗಗಳ ನೇಮಕಾತಿಗೆ ಯೋಜನೆ: ಭಾರತದ ಪ್ರತಿಷ್ಠಿತ ಕಂಪನಿಗಳಲ್ಲಿ ವಿಪ್ರೋ ಕೂಡ ಒಂದಾಗಿದೆ. ಇದೀಗ ಈ ಕಂಪನಿ ಬೃಹತ್ ಸಖ್ಯೆಯಲ್ಲಿ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಮುಂದಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ, ಈ ಪ್ರಕ್ರಿಯೆ ಯಾವಾಗಿನಿಂದ ಆರಂಭವಾಗಲಿದೆ ಹಾಗೂ ಎಷ್ಟು ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಮುಂದಾಗಿದೆ ಎನ್ನುವ ಸಂಪೂರ್ಣ ವಿವರವನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಹಲವು ಕಂಪನಿಗಳು ಉದ್ಯೋಗವಕಾಶಳನ್ನು ಸೃಷ್ಟಿಸುತ್ತಲೇ ಇವೆ. ಹಾಗೆಯೇ ದೇಶದ ಪ್ರತಿಷ್ಠಿತ ಕಂಪನಿಗಳಲ್ಲೊಂದಾದ ವಿಪ್ರೋ 2025-26ರ ಆರ್ಥಿಕ ವರ್ಷದಲ್ಲಿ ಕ್ಯಾಂಪಸ್‌ಗಳಿಂದ 10,000-12,000 ಫ್ರೆಶರ್‌ಗಳನ್ನು ನೇಮಕ ಮಾಡಿಕೊಳ್ಳುವುದಾಗಿ ವಿಪ್ರೋ ಜನವರಿ 17ರಂದು ಮಾಹಿತಿ ಹೊರಹಾಕಿದೆ.












Click it and Unblock the Notifications