Get Updates
Get notified of breaking news, exclusive insights, and must-see stories!

Job Opportunities: ಹುಬ್ಬಳ್ಳಿಯಲ್ಲಿ ಜನವರಿ 24ಕ್ಕೆ ಮಿನಿ ಉದ್ಯೋಗ ಮೇಳ, ಯಾರು ಅರ್ಜಿ ಸಲ್ಲಿಸಬಹುದು ?

Job Opportunities: ಹುಬ್ಬಳ್ಳಿ ಹಾಗೂ ಹುಬ್ಬಳ್ಳಿಯ ಸುತ್ತಮುತ್ತಲಿನ ಪ್ರದೇಶದಲ್ಲಿ ಇರುವವರಿಗೆ ಉದ್ಯೋಗಕ್ಕೆ ಸಂಬಂಧಿಸಿದಂತೆ ಇಲ್ಲೊಂದು ಗುಡ್‌ನ್ಯೂಸ್‌ ಇದೆ. ಹುಬ್ಬಳ್ಳಿಯಲ್ಲಿ ಇದೀಗ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದ್ದು. ಉದ್ಯೋಗ ಮೇಳವು ಜನವರಿ 24ಕ್ಕೆ ನಡೆಯಲಿದೆ.

ಯಾವ ಪ್ರದೇಶದಲ್ಲಿ ಉದ್ಯೋಗ ಮೇಳ ನಡೆಯಲಿದೆ. ಉದ್ಯೋಗ ಮೇಳಕ್ಕೆ ಯಾರೆಲ್ಲ ಅರ್ಹರು ಹಾಗೂ ಯಾರು ಅರ್ಜಿ ಸಲ್ಲಿಸಬಹುದು ಎನ್ನುವ ವಿವರ ಇಲ್ಲಿದೆ. ಹುಬ್ಬಳ್ಳಿಯಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲೊಂದು ಗುಡ್‌ನ್ಯೂಸ್‌ ಇದೆ. ಹುಬ್ಬಳ್ಳಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗುತ್ತಿದೆ. ಇದರ ವಿವರ ನೋಡೋಣ..

Job Opportunities Mini Job Fair in Hubli on January 24th

ಹುಬ್ಬಳ್ಳಿಯಲ್ಲಿ ಜನವರಿ 24ಕ್ಕೆ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಹುಬ್ಬಳ್ಳಿಯ ನವನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಮಿನಿ ಉದ್ಯೋಗ ಮೇಳವನ್ನು ಜನವರಿ 24 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ನವಮಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಹಮ್ಮಿಕೊಳ್ಳಲಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಯಾರೆಲ್ಲ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು ಹಾಗೂ ಯಾವ ವಿದ್ಯಾ ಅರ್ಹತೆ ಇರುವವರಿಗೆ ಇಲ್ಲಿ ಉದ್ಯೋಗಾವಕಾಶ ಇದೆ ಎನ್ನುವ ವಿವರ ಮುಂದಿದೆ.

ಎಲ್ಲರಿಗೂ ಅವಕಾಶ: ಇನ್ನು ಈ ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ನರ್ಸಿಂಗ್, ಹಾಗೂ ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಾಸ್‌ ಆಗಿರುವವರಿಗೆ ಉದ್ಯೋಗಾವಕಾಶ ಇರಲಿದೆ. ಮುಂದುವರಿದು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರ ವಯಸ್ಸು 18 ರಿಂದ 35 ವರ್ಷದ ಒಳಗಿರಬೇಕು. ಈ ವಯಸ್ಸಿನ ಒಳಗಿನವರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ ಎಂದು ಹೇಳಲಾಗಿದೆ.

ಈ ದಾಖಲೆಗಳು ಕಡ್ಡಾಯ: ಇನ್ನು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ತಮ್ಮ ಆಧಾರ್ ಕಾರ್ಡ್, ಬಯೋಡಾಟಾ (ರೆಸ್ಯೂಮ್‌) ಗಳ ಹೆಚ್ಚಿನ ಪ್ರತಿಗಳೊಂದಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು https:// forms.gle/qdtkEhLjQsdC1GD68 ವೆಬ್‌ಸೈಟ್ ಮುಖಾಂತರ ನೋಂದಣಿ ಮಾಡಿಕೊಂಡು ಸಂದರ್ಶನಕ್ಕೆ ಹಾಜರಾಗಬೇಕು ಎಂದು ಸೂಚನೆ ನೀಡಲಾಗಿದೆ.

Job Opportunities Mini Job Fair in Hubli on January 24th

ಉದ್ಯೋಗ ಮೇಳಕ್ಕೆ ಇನ್ನು ಮೂರು ದಿನಗಳು ಮಾತ್ರ ಬಾಕಿ ಉಳಿದಿದೆ. ಹೀಗಾಗಿ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಈಗಲೇ ನೋಂದಣಿ ಮಾಡಿಕೊಳ್ಳಿ.

6ಕ್ಕೂ ಹೆಚ್ಚು ಕಂಪನಿಗಳು ಭಾಗಿ: ಈ ಉದ್ಯೋಗ ಮೇಳದಲ್ಲಿ 6ಕ್ಕೂ ಹೆಚ್ಚು ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಈ ಕಂಪನಿಯ ಮ್ಯಾನೇಜರ್‌ಗಳು ಭಾಗವಹಿಸಲಿದ್ದು. ಸಂಸ್ಥೆಯಲ್ಲಿರುವ ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳ ಸಂದರ್ಶನವನ್ನು ಮಾಡಲಿದ್ದು. ಅರ್ಹ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಹೇಳಲಾಗಿದೆ.

ಮಾಹಿತಿಗಾಗಿ: ಇನ್ನು ಈ ಮಿನಿ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಯಾವುದೇ ಗೊಂದಲ ಅಥವಾ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 9535360259, 8453208555, 9806905751 ಹಾಗೂ 7353307657 ಕರೆ ಮಾಡಬಹುದಾಗಿದೆ. ಕಚೇರಿ ಸಮಯದಲ್ಲಿ ಕರೆ ಮಾಡಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಹಾಯಕ ನಿರ್ದೇಶಕರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+