Bengaluru Coffee Board Recruitment: ಬೆಂಗಳೂರು ಕಾಫಿ ಬೋರ್ಡ್‌ನಲ್ಲಿ ಉದ್ಯೋಗಾವಕಾಶ
Bengaluru Coffee Board Recruitment: ಇತ್ತೀಚಿನ ದಿನಗಳಲ್ಲಿ ಉದ್ಯೋಗಾವಕಾಶಗಳು ತೆರೆದುಕೊಳ್ಳುತ್ತಲೇ ಇವೆ. ಹಾಗೆಯೇ ಇದೀಗ ಬೆಂಗಳೂರು ಕಾಫಿ ಬೋರ್ಡ್‌ನಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾಗಾದ್ರೆ ಯಾರೆಲ್ಲಾ ಅರ್ಜಿ ಸಲ್ಲಿಕೆ ಮಾಡಬಹುದು ಹಾಗೂ ಆಯ್ಕೆ ಆದವರಿಗೆ ಮಾಸಿಕ ವೇತನ ಎಷ್ಟಿರಲಿದೆ ಎನ್ನುವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ಬೆಂಗಳೂರು ಕಾಫಿ ಬೋರ್ಡ್ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, 11 ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಬರಿಸ್ತಾ ಟ್ರೈನರ್ - 1, ಟೆಕ್ನಿಕಲ್ ಅಸಿಸ್ಟೆಂಟ್ - 1 ಹುದ್ದೆಗಳು ಖಾಲಿಯಿವೆ. ಆಸಕ್ತರು ಅರ್ಜಿ ಸಲ್ಲಿಕೆ ಮಾಡಬಹುದು.

* ಬರಿಸ್ತಾ ಟ್ರೈನರ್ ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು ಕನಿಷ್ಠ ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕಾಗುತ್ತದೆ. ಅಲ್ಲದೆ, ಈಗಾಗಲೇ ಈ ಕ್ಷೇತ್ರದಲ್ಲಿ ಕನಿಷ್ಠ 2 ವರ್ಷ ಹುದ್ದೆ ನಿರ್ವಹಿಸಿದ ಅನುಭವ ಇರಬೇಕು. ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ 50,000 ವೇತನ ನೀಡಲಾಗುತ್ತದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ ಗರಿಷ್ಠ 40 ವರ್ಷ ಮೀರಿರಬಾರದು
* ಟೆಕ್ನಿಕಲ್ ಟ್ರೈನರ್ ಹುದ್ದೆಗೆ ಅರ್ಜಿ ಸಲ್ಲಿಸಬಯಸುವವರು ಲೈಫ್ ಸೈನ್ಸ್‌ನಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಸಂಬಂಧಿಸಿದ ಕ್ಷೇತ್ರದಲ್ಲಿ ಹುದ್ದೆ ನಿರ್ವಹಣೆಯ ಅನುಭವ ಇರಬೇಕಾಗುತ್ತದೆ. ಆಯ್ಕೆಯಾದವರಿಗೆ ಮಾಸಿಕ ವೇತನ 45,000 ರೂಪಾಯಿ ನಿಗದಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗೆ 35 ವರ್ಷ ಮೀರಿರಬಾರದು. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇರಲಿದೆ.
ಅಭ್ಯರ್ಥಿಗಳನ್ನು ಶೈಕ್ಷಣಿಕ ಸಾಧನೆ, ಅನುಭವ ಮತ್ತು ಸಂದರ್ಶನದ ಮೇಲೆ ಆಯ್ಕೆ ಮಾಡಲಾಗುತ್ತದೆ. ಬರಿಸ್ತಾ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆಯ ಜೊತೆಗೆ ನೀಡಲಾಗಿರುವ ಅಧಿಕೃತ ಅರ್ಜಿಯನ್ನ ಭರ್ತಿ ಮಾಡಿ, ಅಗತ್ಯ ಪ್ರಮಾಣ ಪತ್ರದೊಂದಿಗೆ ಮಾರ್ಚ್ 25ಕ್ಕೆ ಮುನ್ನ ಈ ವಿಳಾಸಕ್ಕೆ ಸಲ್ಲಿಸಬೇಕು.
ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅಭ್ಯರ್ಥಿಗಳು ಅಧಿಕೃತ ಜಾಲತಾಣದ ಮೂಲಕ ಆನ್‌ಲೈನ್‌ನಲ್ಲಿ ಮಾರ್ಚ್ 24ಕ್ಕೆ ಮುನ್ನ ಅರ್ಜಿ ಸಲ್ಲಿಕೆ ಮಾಡಬಹುದು. ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ coffeeboard.gov.in ಇಲ್ಲಿಗೆ ಭೇಟಿ ನೀಡಬಹುದಾಗಿದೆ.
2,500 ಹುದ್ದೆಗಳ ನೇಮಕ: ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಮುಂದಾಗಿದೆ. ಹಾಗಾದ್ರೆ ಅರ್ಜಿ ಸಲ್ಲಿಕೆ ಆರಂಭ ಯಾವಾಗ ಹಾಗೂ ಅಭ್ಯರ್ಥಿಗಳು ಯಾವೆಲ್ಲಾ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಎನ್ನಯವ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ ಗಮನಿಸಿ.
ರಾಜ್ಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 1,500 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 1000 ಸಹಾಯಕಿ ಯರು ಸೇರಿದಂತೆ ಒಟ್ಟು 2,500 ಹುದ್ದೆಗಳ ಭರ್ತಿಗೆ ಮುಂದಾಗಿದೆ. ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ಉತ್ತೀರ್ಣರಾದ ಮಹಿಳೆಯರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡಬಹುದು. ಆಯ್ಕೆಯಾದವರಿಗೆ ಮಾಸಿಕ ವೇತನ 10,000-15,000 ರೂಪಾಯಿವರೆಗೂ ಇರಲಿದೆ. ಶೀಘ್ರದಲ್ಲೇ ಜಿಲ್ಲಾವಾರು ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ.












Click it and Unblock the Notifications