ನವಮಂಗಳೂರು ಬಂದರು ಟ್ರಸ್ಟ್‌ನಲ್ಲಿ ಉದ್ಯೋಗವಕಾಶ, ಇಲ್ಲಿದೆ ವಿವರ
ಮಂಗಳೂರು, ಡಿಸೆಂಬರ್, 14: ನವಮಂಗಳೂರು ಬಂದರು ಟ್ರಸ್ಟ್‌ನಲ್ಲಿ ಒಂದು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ ಖಾಲಿ ಇದೆ. ಈ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಮುಖವಾಗಿ ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಉದ್ಯೋಗ ಪಡೆಯಲು ಆಸಕ್ತ ಅಭ್ಯರ್ಥಿಗಳು ಕೂಡಲೇ ಅರ್ಜಿ ಸಲ್ಲಿಸಬಹುದಾಗಿದೆ. 2023ರ ಜನವರಿ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಈ ದಿನಾಂಕದೊಳಗೆ ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳಿಂದ ಆಫ್ಲೈನ್ನಲ್ಲಿ ಮಾತ್ರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ ಎನ್ನು ಮಾಹಿತಿಯನ್ನು ನವ ಮಂಗಳೂರು ಬಂದರು ಟ್ರಸ್ಟ್ ನೀಡಿದೆ.
ಖಾಲಿ ಇರುವ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ
ಅರ್ಜಿ ಸಲ್ಲಿಸಲು ಮೊದಲು ಹುದ್ದೆಯ ಕುರಿತು ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆಯ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳುವುದು ಮುಖ್ಯವಾಗಿದೆ. ಹಾಗೆಯೇ ಅಭ್ಯರ್ಥಿಗಳಿಗೆ ಕೆಲವು ಪ್ರಮುಖ ಮಾಹಿತಿಗಳನ್ನು ಇಲ್ಲಿ ನೀಡಲಾಗಿದೆ.

ನವ ಮಂಗಳೂರು ಬಂದರು ಟ್ರಸ್ಟ್‌ನಲ್ಲಿ ಒಂದು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಇಲ್ಲಿ ಆಯ್ಕೆಯಾದವರಿಗೆ ಮಾಸಿಕ ವೇತ 70,000 ನೀಡಲಾಗುತ್ತದೆ ಎಂದು ತಿಳಿಸಲಾಗಿದೆ. ಮಂಗಳೂರು ಉದ್ಯೋಗದ ಸ್ಥಳವಾಗಿದೆ.
ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲದಿಂದ ಕಡ್ಡಾಯವಾಗಿ ಸಿಎಂ ಅಥವಾ ಐಸಿಎಂಎ ಅನ್ನು ಪೂರ್ಣಗೊಳಿಸಿರಬೇಕು. ಹಾಗೂ ಅಭ್ಯರ್ಥಿಗಳ ವಯಸ್ಸು ಗರಿಷ್ಠ 30 ವರ್ಷ ಮೀರಿರಬಾರದು ಎನ್ನುವ ಮಾಹಿತಿಯನ್ನು ನೀಡಿದೆ.
ಆಯ್ಕೆ ಪ್ರಕ್ರಿಯೆಯ ವಿವರ ಇಲ್ಲಿದೆ
ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ಫೈನಾನ್ಸಿಯಲ್ ಅಡ್ವೈಸರ್ & ಚೀಫ್ ಅಕೌಂಟ್ಸ್ ಆಫೀಸರ್ ನವ ಮಂಗಳೂರು ಬಂದರು ಪ್ರಾಧಿಕಾರ ಪಣಂಬೂರು ಮಂಗಳೂರು-575010 ಇಲ್ಲಿಗೆ ಕಳುಹಿಸಬಹುದಾಗಿದೆ. ಡಿಸೆಂಬರ್ 12ರಿಂದ ಅರ್ಜಿ ಸಲ್ಲಿಕೆಗೆ ಸಮಯ ಆರಂಭವಾಗಿದ್ದು, 2023 ಜನವರಿ 15 ಕೊನೆಯ ದಿನಾಂಕವಾಗಿದೆ.












Click it and Unblock the Notifications