ಧಾರವಾಡ, ಬಳ್ಳಾರಿಯಲ್ಲಿ ಕೆಲಸ ಖಾಲಿ ಇದೆ: ವಿವರಗಳು
ಧಾರವಾಡ, ಜನವರಿ 02: ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಧಾರವಾಡದಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಳ್ಳಾರಿಯಲ್ಲಿ ಜನವರಿ 3ರಂದು ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ. ಈ ಎರಡೂ ನೇಮಕಾತಿಗಳ ಮಾಹಿತಿ ಇಲ್ಲಿದೆ.
ಧಾರವಾಡದಲ್ಲಿ ಕಾನೂನು ನೆರವು ಅಭಿರಕ್ಷಕರ ಕಛೇರಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಗಳನ್ನು ಜನವರಿ 10, 2025ರೊಳಗಾಗಿ ಸಲ್ಲಿಕೆ ಮಾಡಬಹುದಾಗಿದೆ.

ಧಾರವಾಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದಡಿಯಲ್ಲಿ ರಚನೆಗೊಂಡ ಕಾನೂನು ನೆರವು ಅಭಿರಕ್ಷಕರ ಕಛೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಖಾಲಿ ಇರುವ ಹುದ್ದೆಗಳು ಮುಖ್ಯ ಕಾನೂನು ನೆರವು ಅಭಿರಕ್ಷಕ 1, ಉಪ ಕಾನೂನು ನೆರವು ಅಭಿರಕ್ಷಕ 1, ಸಹಾಯಕ ಕಾನೂನು ನೆರವು ಅಭಿರಕ್ಷಕ 2. ಆಸಕ್ತ, ಅರ್ಹ ನ್ಯಾಯವಾದಿಗಳಿಂದಗಳನ್ನು ಕರೆಯಲಾಗಿದೆ.
ಭರ್ತಿ ಮಾಡಿದ ಅರ್ಜಿಗಳನ್ನು ಜನವರಿ 10ರೊಳಗಾಗಿ ಧಾರವಾಡ ಎಡಿಆರ್ ಕಟ್ಟಡ, ಸಿವಿಲ್ ನ್ಯಾಯಾಲಯ ಆವರಣದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ಕಾರ್ಯಾಲಯದಲ್ಲಿ ಸಲ್ಲಿಸಬೇಕು.
ಸಂಬಂಧಪಟ್ಟ ಮಾಹಿತಿ, ಅರ್ಜಿಗಳನ್ನು ಜಿಲ್ಲಾ ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಗಳ ಕಛೇರಿಯನ್ನು ಸಂಪರ್ಕಿಸಬಹುದು.
ಬಳ್ಳಾರಿಯಲ್ಲಿ ಬೃಹತ್ ಉದ್ಯೋಗ ಮೇಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬಳ್ಳಾರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಛೇರಿ ಇವರ ಸಂಯುಕ್ತಾಶ್ರಯದಲ್ಲಿ ಕೌಶಲ್ಯ ಮತ್ತು ರೋಜ್‌ಗಾರ್ ಮೇಳ ಅಡಿ ಜನವರಿ 3ರಂದು ಬಳ್ಳಾರಿಯಲ್ಲಿ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.
ಬೆಳಗ್ಗೆ 10 ಗಂಟೆಗೆ ನಗರದ ಡಾ. ರಾಜ್‌ಕುಮಾರ್ ರಸ್ತೆಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ) ಇಲ್ಲಿ ಬೃಹತ್ ಉದ್ಯೋಗ ಮೇಳ ಆರಂಭವಾಗಲಿದೆ.
ಉದ್ಯೋಗ ಮೇಳದಲ್ಲಿ ಸುಮಾರು 40 ರಿಂದ 50 ಕಂಪನಿಗಳು ಭಾಗವಹಿಸಲಿದ್ದು, ನಿರುದ್ಯೋಗ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸಲು ಉದ್ದೇಶಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಎಸ್‌ಎಸ್ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಉದ್ಯೋಕಾಂಕ್ಷಿಗಳು ಪೂರಕ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.
ಉದ್ಯೋಗಾಕಾಂಕ್ಷಿಗಳು ನೋಂದಣಿಗಾಗಿ ಇಲಾಖೆಯಿಂದ ರಚನೆ ಮಾಡಲಾಗಿರುವ https://forms.gle/YhbVhDQqMmHRF1uV7 ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದು.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್ ಕಚೇರಿಯನ್ನು ಸಂಪರ್ಕಿಸಿ. ದೂರವಾಣಿ ಸಂಖ್ಯೆ 08392-294230 ಮತ್ತು 9844444958, 6361607038.
ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ: ಆತ್ಮ ಯೋಜನೆಯಡಿ ನೇರ ಗುತ್ತಿಗೆ ಆಧಾರದ ಮೇಲೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ತಾಂತ್ರಿಕ ವ್ಯವಸ್ಥಾಪಕರನ್ನು ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಜಂಟಿ ಕೃಷಿ ನಿರ್ದೇಶಕರು ಕಚೇರಿಯಲ್ಲಿ ಪಡೆದು ಅಗತ್ಯ ದಾಖಲೆಗಳೊಂದಿಗೆ ಜನವರಿ 8 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಉಪ ಯೋಜನಾ ನಿರ್ದೇಶಕರನ್ನು ಸಂಪರ್ಕಿಸಬಹುದು. ಮೊಬೈಲ್ ಸಂಖ್ಯೆ 9844313707.












Click it and Unblock the Notifications