
ನವಮಂಗಳೂರು ಬಂದರಿನಲ್ಲಿ ಉದ್ಯೋಗವಕಾಶ, ಇಲ್ಲಿದೆ ವಿವರ
ಮಂಗಳೂರು, ಡಿಸೆಂಬರ್, 01: ನವಮಂಗಳೂರು ಬಂದರು ಟ್ರಸ್ಟ್ನಲ್ಲಿ 2 ಅಸಿಸ್ಟೆಂಟ್ ಸೆಕ್ರೆಟರಿ ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಮುಖವಾಗಿ ಮಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಆಸಕ್ತರಿಗೆ ಇದೊಂದು ಉತ್ತಮ ಅವಕಾಶವಾಗಿದ್ದು, ಅಭ್ಯರ್ಥಿಗಳು ತಕ್ಷಣ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಅರ್ಜಿ ಸಲ್ಲಿಸಲು ಡಿಸೆಂಬರ್ 30, 2022 ಕೊನೆಯ ದಿನವಾಗಿದೆ. ಆಫ್ಲೈನ್ನಲ್ಲಿ ಮಾತ್ರ ಅರ್ಜಿ ಸ್ವೀಕಾರ ಮಾಡಲಾಗುತ್ತದೆ ಎಂದು ನವ ಮಂಗಳೂರು ಬಂದರು ಟ್ರಸ್ಟ್ ತಿಳಿಸಿದೆ.
ಸುರತ್ಕಲ್ ಟೋಲ್ ರದ್ದು; ಉದ್ಯೋಗ ಕಳೆದುಕೊಂಡ 50 ಜನ
ನವ ಮಂಗಳೂರು ಬಂದರು ಟ್ರಸ್ಟ್‌ನಿಂದ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು, ಆಸಕ್ತರು 2 ಅಸಿಸ್ಟೆಂಟ್ ಸೆಕ್ರೆಟರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಆಯ್ಕೆಯಾದವರಿಗೆ 40,000-1,40,000 ರೂಪಾಯಿವರೆಗೂ ಮಾಸಿಕ ವೇತನ ನೀಡಲಾಗುವುದು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯವಾಗಿದೆ. ಅರ್ಜಿಸಲ್ಲಿಸಲು ಬಯಸುವವರರು ನವ ಮಂಗಳೂರು ಬಂದರು ಟ್ರಸ್ಟ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪಡೆದಿರಬೇಕು. ಇನ್ನು ಲಿಖಿತ, ಸಂದರ್ಶನದ ಮೂಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿಯನ್ನು ಅಗತ್ಯ ದಾಖಲಾತಿಗಳೊಂದಿಗೆ ನವ ಮಂಗಳೂರು ಬಂದರು ಪ್ರಾಧಿಕಾರ ಪಣಂಬೂರು ಮಂಗಳೂರು -575010 ಈ ವಿಳಾಸಕ್ಕೆ ಕಳುಹಿಸಬೇಕು. ನವೆಂಬಂರ್ 28ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಡಿಸೆಂಬರ್ 30 ಕೊನೆ ದಿನವಾಗಿದೆ. ಆಸಕ್ತ ಅಭ್ಯರ್ಥಿಗಳು ಸ್ವಿಚ್ಚೆಯಿಂದ ಅರ್ಜಿ ಸಲ್ಲಿಸಬಹುದಾಗಿದೆ. ಉದ್ಯೋಗ ಹುಡುತ್ತಿರುವವರಿಗೆ ಇದು ಸುವರ್ಣವಕಾಶವಾಗಿದ್ದು, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಕೇಂದ್ರಿಯ ವಿದ್ಯಾಲಯ 13,404 ಹುದ್ದೆಗಳ ನೇಮಕಾತಿ, ಈಗಲೇ ಅರ್ಜಿ ಹಾಕಿ