ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ಗೌರವಧನ 9 ಮತ್ತು 7 ಸಾವಿರ ರೂ.ಗಳು

ಶಿವಮೊಗ್ಗ, ಫೆಬ್ರವರಿ 20: ಶಿವಮೊಗ್ಗದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿದೆ. ಯುವ ಪರಿವರ್ತಕರು ಹಾಗೂ ಸಮಾಲೋಚಕ ಆಯ್ಕೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು, ಅರ್ಹರು ಅರ್ಜಿ ಸಲ್ಲಿಕೆ ಮಾಡಲು ಫೆಬ್ರವರಿ 8 ಕೊನೆಯ ದಿನವಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 9 ಸಾವಿರ ರೂ. ಮತ್ತು 7 ಸಾವಿರ ರೂ. ಗೌರವ ಧನ ನೀಡಲಾಗುತ್ತದೆ.

ಯುವ ಸ್ಪಂದನ ಕಾರ್ಯಕ್ರಮದಡಿಯಲ್ಲಿ ಜನ ಆರೋಗ್ಯ, ಎಪಿಡೀಮಿಯಾಲಜಿ ವಿಭಾಗ, ನಿಮ್ಹಾನ್ಸ್ ಬೆಂಗಳೂರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಯುವ ಸ್ಪಂದನ ಕಾರ್ಯಕ್ರಮದಡಿ ಕಾರ್ಯ ನಿರ್ವಹಿಸಲು ಯುವ ಪರಿವರ್ತಕರು ಹಾಗೂ ಸಮಾಲೋಚಕರನ್ನು ಆಯ್ಕೆ ಮಾಡಲು ಅರ್ಜಿ ಕರೆಯಲಾಗಿದೆ.

Job Vacancy In Shivamogga Apply By February 28

ಆಸಕ್ತರು/ ಅರ್ಹರು ಅರ್ಜಿಗಳನ್ನು ಸಲ್ಲಿಸಲು ಫೆಬ್ರವರಿ 28 ಕೊನೆಯ ದಿನವಾಗಿದೆ. ಪ್ರಸ್ತುತ 3 ಯುವ ಪರಿವರ್ತಕರು ಮತ್ತು 1 ಯುವ ಸಮಾಲೋಚಕರ ಹುದ್ದೆ ಖಾಲಿ ಇದ್ದು, ಪದವಿ ಒಳಗೊಂಡಂತೆ ಸೈಕಾಲಜಿ, ಸೋಷಿಯಲ್ ವರ್ಕ್ ಪದವಿ ಹೊಂದಿದವರಿಗೆ ಆದ್ಯತೆ ನೀಡಲಾಗುತ್ತದೆ.

ಯುವ ಪರಿವರ್ತಕರ ಹುದ್ದೆಗೆ ಕನಿಷ್ಠ 21 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಮುದಾಯದಲ್ಲಿ ಕೆಲಸ ಮಾಡಲು ಆಸಕ್ತಿ ಮತ್ತು ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆಯನ್ನು ಅಭ್ಯರ್ಥಿಗಳು ಹೊಂದಿರಬೇಕು. ಆಯ್ಕೆಯಾದ ಅಭ್ಯರ್ಥಿಗಳಿಗೆ ಗೌರವಧನ ರೂ. 7 ಸಾವಿರ ನೀಡಲಾಗುತ್ತದೆ.

ಜಿಲ್ಲೆಗೆ ಓರ್ವ ಯುವ ಸಮಾಲೋಚಕರನ್ನು ಆಯ್ಕೆ ಮಾಡಲಾಗುತ್ತದೆ. ಯುವ ಸಮಾಲೋಚಕರ ಹುದ್ದೆಗೆ ವಯೋಮಿತಿ 21 ರಿಂದ 35 ವರ್ಷಗಳು. ಪದವಿ ಹಾಗೂ ಮೇಲ್ಪಟ್ಟು ವಿದ್ಯಾರ್ಹತೆ ಹೊಂದಿರಬೇಕು. ಆಪ್ತ ಸಮಾಲೋಚನೆಯನ್ನು ಒದಗಿಸುವ ಕೌಶಲ್ಯ, ಸಮುದಾಯದಲ್ಲಿ ಕೆಲಸ ಮಾಡುವ ಆಸಕ್ತಿ, ಉತ್ತಮ ಸಂವಹನ ಕೌಶಲ್ಯ, ಸ್ಪಷ್ಟವಾದ ಕನ್ನಡ ಉಚ್ಛಾರಣೆ ಹೊಂದಿರಬೇಕು ರೂ. 9000 ಗೌರವಧನ ನೀಡಲಾಗುತ್ತದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ನಗರದ ನೆಹರು ಕ್ರೀಡಾಂಗಣದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಛೇರಿಯನ್ನು ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

ಫೆಬ್ರವರಿ 24ರಂದು ಉದ್ಯೋಗ ಮೇಳ: ಶಿವಮೊಗ್ಗದಲ್ಲಿ ಫೆಬ್ರವರಿ 24ರಂದು ಎಟಿಎನ್‌ಸಿಸಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಸುಮಾರು 50ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಮೇಳದಲ್ಲಿ ಭಾಗಿಯಾಗಲಿದ್ದು, ನೇರ ಸಂದರ್ಶನ ಮೂಲಕ ವಿವಿಧ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳಿಗೆ ಸ್ಥಳದಲ್ಲಿಯೇ ನೇಮಕಾತಿ ಪತ್ರ ನೀಡಲಾಗುತ್ತದೆ.

ಈ ಉದ್ಯೋಗ ಮೇಳದಲ್ಲಿ ಯುವನಿಧಿ ಫಲಾನುಭವಿಗಳು, ತಾಂತ್ರಿಕ ತರಬೇತಿ ಪಡೆದವರು, 18 ರಿಂದ 35 ವಯೋಮಿತಿಯೊಳಗಿನ ನಿರುದ್ಯೋಗ ಯುವಕ/ ಯುವತಿಯರು ಮತ್ತು ಉದ್ಯೋಗಕ್ಕೆ ತಕ್ಕ ವಿದ್ಯಾರ್ಹತೆ ಹೊಂದಿರುವವರು ಪಾಲ್ಗೊಳ್ಳಬಹುದು.

ಆಸಕ್ತರು https://forms.gle/se41pagcoriexpppg ಮೂಲಕ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮವನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆಗಳು 08182-255294, 9019485688.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+