ಬೆಂಗಳೂರಿನ ಎಚ್‌ಎಎಲ್‌ನಲ್ಲಿ ಎಸ್‌ಎಸ್‌ಎಲ್‌ಸಿ ಓದಿದವರಿಗೆ ಉದ್ಯೋಗ
ಬೆಂಗಳೂರು, ಸೆಪ್ಟೆಂಬರ್ 19: ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (HAL) ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಒಟ್ಟು 2 ಫಾರ್ಮಾಸಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 19, 2023 ಅಂದರೆ ಇಂದು ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು ಆಸಕ್ತರು ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಹೆಚ್ಚಿನ ಮಾಹಿತಿಗಾಗಿ hal-india.co.inಗೆ ಭೇಟಿ ನೀಡಬಹುದು. ಈ ಕುರಿತು ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
ಒಟ್ಟು 2 ಫಾರ್ಮಾಸಿಸ್ ಹುದ್ದೆ, 10ನೇ ತರಗತಿ, ಪಿಯುಸಿ, ಡಿಪ್ಲೊಮಾ ವಿದ್ಯಾರ್ಹತೆ ಪಡೆದಿರಬೇಕು, ಸದರಿ ಹುದ್ದೆಗೆ ವೇತನ ನಿಗದಿಪಡಿಸಿಲ್ಲ, ಅರ್ಜಿ ಸಲ್ಲಿಸಲು ಕೊನೆಯ ದಿನ ಸೆಪ್ಟೆಂಬರ್ 19, 2023 ಆಗಿರುತ್ತದೆ.
ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಸೆಪ್ಟೆಂಬರ್ 1, 2023ಕ್ಕೆ ಗರಿಷ್ಠ 40 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಮುಖ್ಯ ವ್ಯವಸ್ಥಾಪಕರು, ಕೈಗಾರಿಕಾ ಆರೋಗ್ಯ ಕೇಂದ್ರ, ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ (ಬೆಂಗಳೂರು ಕಾಂಪ್ಲೆಕ್ಸ್), ಸುರಂಜನದಾಸ್ ರಸ್ತೆ, ಹಳೆಯ ವಿಮಾನ ನಿಲ್ದಾಣದ ಹತ್ತಿರ, ಬೆಂಗಳೂರು-560017 ವಿಳಾಸಕ್ಕೆ ಕಳುಹಿಸಬೇಕು.












Click it and Unblock the Notifications