ಬಳ್ಳಾರಿಯಲ್ಲಿ ಉದ್ಯೋಗ ಮೇಳ, ಬೆಂಗಳೂರಿನಲ್ಲಿ ಕೆಲಸ ಖಾಲಿ ಇದೆ
ಬಳ್ಳಾರಿ, ಡಿಸೆಂಬರ್ 21: ಬೆಂಗಳೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದಿದೆ. ಬೆಂಗಳೂರಿನಲ್ಲಿ ಉಪನ್ಯಾಸಕರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜನವರಿ 3 ರಂದು ಬಳ್ಳಾರಿಯಲ್ಲಿ ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ. ಎರಡೂ ಉದ್ಯೋಗ ಮಾಹಿತಿಯ ವಿವರಗಳು ಇಲ್ಲಿವೆ.
ಜನವರಿ 3ರಂದು ಬೃಹತ್ ಉದ್ಯೋಗ ಮೇಳ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬಳ್ಳಾರಿ ಜಿಲ್ಲಾ ಕೌಶಲ್ಯಾಭಿವೃದ್ಧಿ ಕಚೇರಿ ಆಶ್ರಯದಲ್ಲಿ ಕೌಶಲ್ಯ ಮತ್ತು ರೋಜ್‌ಗಾರ್ ಮೇಳ ಅಡಿ 2025ರ ಜನವರಿ 3ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜನೆ ಮಾಡಲಾಗಿದೆ.

ಬಳ್ಳಾರಿ ನಗರದ ಡಾ. ರಾಜ್‌ಕುಮಾರ್ ರಸ್ತೆಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರ್ವಾಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು (ಸ್ವಾಯತ್ತ), ಇಲ್ಲಿ ಉದ್ಯೋಗ ಮೇಳ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ ಸುಮಾರು 40 ರಿಂದ 50 ಕಂಪನಿಗಳು ಭಾಗವಹಿಸಲಿದ್ದು, ನಿರುದ್ಯೋಗ ಯುವಕ, ಯುವತಿಯರು ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಉದ್ಯೋಗದ ಅವಕಾಶಗಳನ್ನು ಪಡೆಯಬಹುದಾಗಿದೆ.
ಈ ಉದ್ಯೋಗ ಮೇಳದಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿ, ಐಟಿಐ, ಡಿಪ್ಲೋಮಾ, ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳೊಂದಿಗೆ ಭಾಗವಹಿಸಬಹುದಾಗಿದೆ.
ಉದ್ಯೋಗಾಕಾಂಕ್ಷಿಗಳು ನೋಂದಣಿಗಾಗಿ ಗೂಗಲ್ ಫಾರ್ಮ್ ಲಿಂಕ್ https://forms.gle/YhbVhDQqMmHRF1uV7 ಅಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೌಶಲ್ಯ ಮಿಷನ್ ಕಚೇರಿಯನ್ನು ಸಂಪರ್ಕಿಸಿ ಅಥವಾ ಕರೆ ಮಾಡಲು ದೂರವಾಣಿ ಸಂಖ್ಯೆ 08392-294230, 9844444958, 6361607038.
ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ: ಗ್ರಾಮಾಭಿವೃದ್ಧಿ ಹಾಗೂ ಸ್ವ-ಉದ್ಯೋಗ ತರಬೇತಿ (ರುಡ್‍ಸೆಟ್) ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ಉಪನ್ಯಾಸಕರ ಹುದ್ದೆ ಖಾಲಿ ಇದ್ದು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ 22 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಕೆ ಮಾಡುವವರು ಮನೋವಿಜ್ಞಾನದಲ್ಲಿ ಎಂಎ, ಪತ್ರಿಕೋದ್ಯಮದಲ್ಲಿ ಎಂಎ, ಗ್ರಾಮೀಣಾಭಿವೃದ್ಧಿಯಲ್ಲಿ ಎಂಎ, ಸಮಾಜಶಾಸ್ತ್ರದಲ್ಲಿ ಎಂಎ, ಕೃಷಿ ಮತ್ತು ಸಂಬಂಧಿತ ವಿಷಯಗಳಲ್ಲಿ ಎಂಕಾಂ, ಬಿಎಸ್ಸಿ, ಎಂಎಸ್‍ಡಬ್ಲ್ಯು, ಬಿಬಿಎಂ, ಬಿಎ, ಬಿಎಸ್ಸಿ ಜೊತೆಗೆ ಬಿಇಡಿ ಅಥವಾ ಎಂಇಡಿ ವಿದ್ಯಾರ್ಹತೆಯನ್ನು ಹೊಂದಿರಬೇಕು.
ಅರ್ಹ ಯುವಕ/ ಯುವತಿಯರು ಕನ್ನಡ ಹಾಗೂ ಇಂಗ್ಲೀಷ್ ಭಾಷೆಯನ್ನು ಬಲ್ಲವರು, ಟೈಪಿಂಗ್ ಮಾಡುವ ಪರಿಣಿತಿಯನ್ನು ಹೊಂದಿರಬೇಕು. ಕಂಪ್ಯೂಟರ್‌ನಲ್ಲಿ ಎಂಎಸ್ ವರ್ಡ್, ಎಂಎಸ್ ಎಕ್ಸೆಲ್ ಹಾಗೂ ಎಂಎಸ್ ಪವರ್ ಪಾಯಿಂಟ್‌ನಲ್ಲಿ ಪರಿಣಿತಿಯನ್ನು ಹೊಂದಿರುವುದು ಕಡ್ದಾಯ.
ಆಸಕ್ತ ಅಭ್ಯರ್ಥಿಗಳು ತಮ್ಮ ಬಯೋಡಾಟವನ್ನು ಇ-ಮೇಲ್ ಮುಖಾಂತರ ಮಾತ್ರ ಕಳುಹಿಸಬೇಕು. ಇ-ಮೇಲ್ ವಿಳಾಸ [email protected]. ಅರ್ಜಿ ಸಲ್ಲಿಕೆ ಮಾಡಲು ಡಿಸೆಂಬರ್ 28 ಕೊನೆಯ ದಿನವಾಗಿದೆ. ಅಭ್ಯರ್ಥಿಗಳಿಗೆ ಮಾಸಿಕ ವೇತನ ರೂ. 30 ಸಾವಿರ ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ ಕರೆ ಮಾಡಿ 9113880324, 9686172444.
ಗ್ರಾಮ ಆಡಳಿತ ಅಧಿಕಾರಿ ನೇಮಕ, ವೆಬಸೈಟ್‌ನಲ್ಲಿ ಪಟ್ಟಿ ಪ್ರಕಟ: ಧಾರವಾಡ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿತ್ತು. ಖಾಲಿ ಇರುವ ಹುದ್ದೆಗಳ ಪೈಕಿ 12 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆಯಲ್ಲಿ ನಿಗದಿಯಾಗಿರುವ ಹುದ್ದೆಗಳ ಎದುರಾಗಿ 1:3 ಅನುಪಾತದಲ್ಲಿ ಅಭ್ಯರ್ಥಿಗಳ ಪಟ್ಟಿಯನ್ನು ಮೂಲ ದಾಖಲೆಗಳ ಪರಿಶೀಲನೆಗಾಗಿ ದಿನಾಂಕ 21/12/2024ರಂದು ವೆಬ್‌ಸೈಟ್ http://dharwad.nic.in ಪ್ರಕಟಿಸಲಾಗಿದೆ.
ಈ ಪಟ್ಟಿಯಲ್ಲಿರುವ ಅಭ್ಯರ್ಥಿಗಳು ಮೂಲ ದಾಖಲಾತಿಗಳ ಪರಿಶೀಲನೆಗೆ ದಿನಾಂಕ 7/1/2025ರಂದು ಬೆಳಗ್ಗೆ 10.30 ಗಂಟೆಗೆ ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯದ, ನೂತನ ಸಭಾ ಭವನ ಇಲ್ಲಿ ಹಾಜರಾಗಲು ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಧಾರವಾಡ ಜಿಲ್ಲಾಧಿಕಾರಿಯವರ ಕಛೇರಿಯ ದೂರವಾಣಿ ಸಂಖ್ಯೆ 0836-2233880, 2233840ಕ್ಕೆ ಸಂಪರ್ಕಿಸಬಹುದು.












Click it and Unblock the Notifications