ಬೆಂಗಳೂರು; ವಿವಿಧ ಹುದ್ದೆಗಳ ನೇಮಕಾತಿ, ವಿವರಗಳು

ಬೆಂಗಳೂರು, ನವೆಂಬರ್ 30; ಬೆಂಗಳೂರು ನಗರ ಜಿಲ್ಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ರಾಷ್ಟ್ರೀಯ ಪೋಷಣ್ ಅಭಿಯಾನ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ತಾತ್ಕಾಲಿಕವಾಗಿ ಗೌರವಧನ ಆಧಾರದ ಮೇರೆಗೆ ಹಲವು ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಡಿಸೆಂಬರ್ 22ರ ಸಂಜೆ 5.30 ಕೊನೆಯ ದಿನ.

ಜಿಲ್ಲಾ ಕಾರ್ಯಕ್ರಮ ಸಹಾಯಕ 1 ಹಾಗೂ ಆನೇಕಲ್ ತಾಲ್ಲೂಕು ಕಾರ್ಯಕ್ರಮ ಸಂಯೋಜಕ 1. ಬೆಂಗಳೂರು ಪೂರ್ವ ತಾಲ್ಲೂಕು ಕಾರ್ಯಕ್ರಮ ಸಂಯೋಜಕ 1, ಬೆಂಗಳೂರು ರಾಜ್ಯ ತಾಲ್ಲೂಕು ಕಾರ್ಯಕ್ರಮ ಸಂಯೋಜಕ 1 ಸೇರಿ ಒಟ್ಟು 4 ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

Jobs In Bengaluru Apply For Various Post Till December 22

ವಿದ್ಯಾರ್ಹತೆಯ ವಿವರಗಳು; ಜಿಲ್ಲಾ ಕಾರ್ಯಕ್ರಮ ಸಹಾಯಕ ಹುದ್ದೆಗೆ ಅಭ್ಯರ್ಥಿಯು ನಿರ್ವಹಣೆ/ ಸಾಮಾಜಿಕ ವಿಜ್ಞಾನ/ ಪೋಷಣೆಯಲ್ಲಿ ಪದವಿ/ ಸ್ನಾತಕೋತ್ತರ ಡಿಪ್ಲೊಮಾ ಹೊಂದಿರಬೇಕು.

ತಾಲ್ಲೂಕು ಕಾರ್ಯಕ್ರಮ ಸಂಯೋಜಕ ಹುದ್ದೆಗೆ ಅಭ್ಯರ್ಥಿಯು ಪದವಿ, ತಂತ್ರಜ್ಞಾನ ಮತ್ತು ಸಾಫ್ಟ್ ವೇರ್ ಅಪ್ಲಿಕೇಶನ್‌ನಲ್ಲಿ ಕನಿಷ್ಠ 2 ವರ್ಷಗಳ ಅನುಭವ ಹೊಂದಿರಬೇಕು.

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳಿಗೆ ವಯೋಮಿತಿ 21 ರಿಂದ 45 ವರ್ಷಗಳು. ಆಸಕ್ತಿಯುಳ್ಳರ ಅಭ್ಯರ್ಥಿಗಳು ಅರ್ಜಿಗಳನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಪ ನಿರ್ದೇಶಕರ ಕಛೇರಿ, ಬೆಂಗಳೂರು ನಗರ ಜಿಲ್ಲೆ, ಇಲ್ಲಿ ಪಡೆದು ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ಸುಧಾರಣಾ ಸಂಸ್ಥೆಗಳ ಸಂಕೀರ್ಣ, ಡಾ. ಎಂ. ಹೆಚ್. ಮರಿಗೌಡ ರಸ್ತೆ, ಬೆಂಗಳೂರು ಅಥವಾ ದೂರವಾಣಿ ಸಂಖ್ಯೆ 080-29578688 ಮೂಲಕ ಸಂಪರ್ಕಿಸಬಹುದು.

ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ; ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2023-24 ನೇ ಸಾಲಿಗೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿ ಆಯೋಜನೆ ಮಾಡಿದೆ.

ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ ಇಬ್ಬರು ಅಭ್ಯರ್ಥಿಯನ್ನು ಹಾಗೂ ಪರಿಶಿಷ್ಟ ಪಂಗಡದ ಒಬ್ಬರನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಆಯ್ಕೆಯಾದ ಪ್ರತಿ ಅಪ್ರೆಂಟಿಸ್‌ಗೆ ಮಾಸಿಕ ರೂ. 15,000 ಸ್ಟೈಪೆಂಡ್ ನೀಡಲಾಗುತ್ತದೆ. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುತ್ತದೆ. ಅಭ್ಯರ್ಥಿ ಪತ್ರಿಕೋದ್ಯಮದಲ್ಲಿ ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷಾ ಬಳಕೆಯಲ್ಲಿ ಪ್ರಬುದ್ಧತೆ ಇರಬೇಕು.

ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದಂದು ಅಭ್ಯರ್ಥಿ ವಯಸ್ಸು 35 ವರ್ಷದೊಳಗಿರಬೇಕು. ಅರ್ಜಿಯೊಂದಿಗೆ ಎಸ್.ಎಸ್.ಎಲ್.ಸಿ ಅಂಕಪಟ್ಟಿ, ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಪಾಸ್ ಪೋರ್ಟ್ ಅಳತೆಯ ಎರಡು ಭಾವಚಿತ್ರ, ಕಂಪ್ಯೂಟರ್ ತರಬೇತಿ ಪ್ರಮಾಣ ಪತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿ-ಪ್ರತಿಯಲ್ಲಿ ಡಿಸೆಂಬರ್ 5ರೊಗೆ ಸಲ್ಲಿಸಬೇಕು.

ಅರ್ಜಿಗಳನ್ನು ಉಪನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರು ನಗರ ಜಿಲ್ಲೆ, ವಾರ್ತಾ ಸೌಧ, 2ನೇ ಮಹಡಿ, ನಂ.17, ಭಗವಾನ್ ಮಹಾವೀರ್ ರಸ್ತೆ, ಬೆಂಗಳೂರು- 560001 ಇಲ್ಲಿಗೆ ಸಲ್ಲಿಸಬೇಕು.

ತಡವಾಗಿ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಅರ್ಜಿ ಲಕೋಟೆಯ ಮೇಲೆ ಕಡ್ಡಾಯವಾಗಿ 'ವಿಶೇಷ ಘಟಕ ಯೋಜನೆಯಡಿ ಹಾಗೂ ಗಿರಿಜನ ಉಪಯೋಜನೆಯಡಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ನೀಡುವ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ' ಎಂದು ನಮೂದಿಸಬೇಕು.

ಆಸಕ್ತರು ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಕಛೇರಿಯ ದೂರವಾಣಿ ಸಂಖ್ಯೆ 080-22028059, ಇ-ಮೇಲ್ [email protected] ಹಾಗೂ ಮೊಬೈಲ್ ಸಂಖ್ಯೆ 9480841219 ಅನ್ನು ಸಂರ್ಪಕಿಸಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+