ಬೀದರ್, ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ; ವಿವರಗಳು
ಬೀದರ್, ಆಗಸ್ಟ್ 24; ಬೀದರ್ ಜಿಲ್ಲೆಯಲ್ಲಿ ಕಾನೂನು ಪದವಿ ಪಡೆದಿರುವ ಮತೀಯ ಅಲ್ಪ ಸಂಖ್ಯಾತ ಅಭ್ಯರ್ಥಿಗಳಿಗೆ ತರಬೇತಿ ನೀಡಲು ಅರ್ಜಿಗಳನ್ನು ಕರೆಯಲಾಗಿದೆ. ತರಬೇತಿ ಅವಧಿಯಲ್ಲಿ ಮಾಸಿಕ 5 ಸಾವಿರ ರೂ. ತರಬೇತಿ ಭತ್ಯೆ ನೀಡಲಾಗುತ್ತದೆ.
ಮತೀಯ ಅಲ್ಪ ಸಂಖ್ಯಾತ ಮೂರು ಅಭ್ಯರ್ಥಿಗಳಿಗೆ ಸರ್ಕಾರಿ ವಕೀಲರು ಮತ್ತು 20 ವರ್ಷಗಳಿಗಿಂತ ಹೆಚ್ಚಿನ ಅನುಭವವುಳ್ಳ ವಕೀಲರಿಂದ ತರಬೇತಿ ನೀಡಲಾಗುತ್ತದೆ. ತರಬೇತಿ ಅವಧಿ 4 ವರ್ಷಗಳು.
ಆಸಕ್ತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು ಆಗಸ್ಟ್ 31 ಕೊನೆಯ ದಿನವಾಗಿದೆ.

ಅರ್ಹತೆಗಳು; ಅರ್ಜಿ ಸಲ್ಲಿಸುವ ಅಭ್ಯರ್ಥಿ ಕಡ್ಡಾಯವಾಗಿ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ ಸಮುದಾಯಕ್ಕೆ ಸೇರಿರಬೇಕು. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ 3.50 ಲಕ್ಷಕ್ಕೆ ಮೀರಿರಬಾರದು.
ಅಭ್ಯರ್ಥಿ ಬಾರ್ ಕೌನ್ಸಿಲ್‌ನಲ್ಲಿ ಹೆಸರನ್ನು ನೋಂದಾಯಿಸಿರಬೇಕು. ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ 30 ವರ್ಷಗಳನ್ನು ಮೀರಿರಬಾರದು. ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ದಿನಾಂಕಕ್ಕೆ ಅಭ್ಯರ್ಥಿಯು 2 ವರ್ಷಗಳ ಅವಧಿಯೊಳಗೆ ಕಾನೂನು ಪದವಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲಾತಿಗಳ ಜೊತೆ ಅರ್ಜಿಗಳನ್ನು ಸಲ್ಲಿಕೆ ಮಾಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ದಾಖಲೆಗಳು
* ಎಸ್. ಎಸ್. ಎಲ್. ಸಿ. ಅಂಕಪಟ್ಟಿ
* ಕಾನೂನು ಪದವಿ ಪರೀಕ್ಷೆಯ ಎಲ್ಲಾ ವರ್ಷಗಳ ದೃಢೀಕೃತ ಅಂಕಪಟ್ಟಿ
* ತಹಶೀಲ್ದಾರ್ ನೀಡಲ್ಪಟ್ಟ ಜಾತಿ/ ಆದಾಯ ಪ್ರಮಾಣ ಪತ್ರ
* ವಾಸಸ್ಥಳ ಪ್ರಮಾಣ ಪತ್ರ ಮತ್ತು ಆಧಾರ್ ಕಾರ್ಡ್
* ಬಾರ್ ಕೌನ್ಸಿಲ್‌ನಲ್ಲಿ ಹೆಸರು ನೋಂದಣಿ ಮಾಡಿದ ಪ್ರಮಾಣ ಪತ್ರ
ಅಪೂರ್ಣವಾದ ಹಾಗೂ ಅವಧಿ ಮೀರಿ ಬಂದ ಅರ್ಜಿಗಳನ್ನು ಸ್ವೀಕಾರ ಮಾಡಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಅರ್ಜಿ ಸಲ್ಲಿಕೆಗೆ ವಿಳಾಸ; ಜಿಲ್ಲಾ ಅಧಿಕಾರಿಗಳು, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಬೀದರ್, ಮೌಲಾನಾ ಆಜಾದ ಭವನ, ಗುರುನಾನಕ ಝಿರಾ ದಿಂದ ಚಿಕ್ಕಪೇಟ ರಿಂಗ್ ರಸ್ತೆ, ಬೀದರ್.
ಮಿನಿ ಉದ್ಯೋಗ ಮೇಳ; ಕೌಶಲ್ಯ ಅಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯು ಶಿವಮೊಗ್ಗ ಜಿಲ್ಲಾ ಕೌಶಲ್ಯ ಮಿಷನ್ ಅಡಿಯಲ್ಲಿ ನಗರದ ಕಮಲಾ ನೆಹರು ಸ್ಮಾರಕ ರಾಷ್ಟ್ರೀಯ ಮಹಿಳಾ ಕಾಲೇಜು ಆವರಣದಲ್ಲಿ 26/8/2021 ಉದ್ಯೋಗ ಮೇಳದನ್ನು ಆಯೋಜನೆ ಮಾಡಲಾಗಿದೆ.
ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯ ತನಕ ಮಿನಿ ಉದ್ಯೋಗ ಮೇಳ ನಡೆಯಲಿದದೆ. ಉದ್ಯೋಗ ಮೇಳದಲ್ಲಿ ಸುಮಾರು 20 ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಗೂಗಲ್ ಲಿಂಕ್ www.tinyurl.com/smgmela ಮೂಲಕ ಹೆಸರು ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿಗಳು ಮನವಿ ಮಾಡಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 08182-255294 ಸಂಖ್ಯೆಗೆ ಕರೆ ಮಾಡಬಹುದು.












Click it and Unblock the Notifications