ಧಾರವಾಡ: ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಕೆಲಸ ಖಾಲಿ ಇದೆ

ಧಾರವಾಡ, ಮಾರ್ಚ್ 03: ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ನಿವೃತ್ತ ಜಿಲ್ಲಾ ನ್ಯಾಯಾಧೀಶ, ನಿವೃತ್ತ ಹಿರಿಯ ಸಿವಿಲ್ ನ್ಯಾಯಾಧೀಶರಿಂದ ಅರ್ಜಿ ಆಹ್ವಾನಿಸಲಾಗಿದೆ.

ಧಾರವಾಡ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಹಾಗೂ ಇತರೆ ಎಲ್ಲ ತರಹದ ವ್ಯಾಜ್ಯ ಪ್ರಕರಣಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆಗಳನ್ನು ನೀಡಲು ಜಿಲ್ಲಾಧಿಕಾರಿಗಳ ಕಛೇರಿಯ ಕಾನೂನು ಕೋಶಕ್ಕೆ ಓರ್ವ ಕಾನೂನು ಸಲಹೆಗಾರರನ್ನು ಗುತ್ತಿಗೆ ಆಧಾರದಲ್ಲಿ ನೇಮಿಸಿಕೊಳ್ಳಲಾಗುತ್ತದೆ.

Jobs In Dharwad DC Office Apply Till March 7

ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಹಿರಿಯ ಸಿವಿಲ್ ನ್ಯಾಯಾಧೀಶರನ್ನು ಗುತ್ತಿಗೆ ಆಧಾರದಲ್ಲಿ ಮಾಸಿಕ ಸಂಚಿತ ವೇತನವನ್ನು ನೀಡುವ ಷರತ್ತಿಗೊಳಪಡಿಸಿ, ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಆಸಕ್ತ ನಿವೃತ್ತ ಜಿಲ್ಲಾ ನ್ಯಾಯಾಧೀಶರು ಅಥವಾ ನಿವೃತ್ತ ಹಿರಿಯ ಸಿವಿಲ್ ನ್ಯಾಯಾಧೀಶರು ಮಾರ್ಚ್ 7, 2024ರೊಳಗಾಗಿ ಧಾರವಾಡ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಮಂಗಳೂರಿನಲ್ಲಿ ಕೆಲಸ ಖಾಲಿ ಇದೆ: ಮಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ 2023-24ನೇ ಸಾಲಿನ ಶಿಶು ಅಭಿವೃದ್ಧಿ ಯೋಜನೆಯಡಿ ಮಂಗಳೂರು, ಮೂಲ್ಕಿ ಉಳ್ಳಾಲ ಹಾಗೂ ಮೂಡುಬಿದಿರೆ ತಾಲೂಕಿನಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಕರೆಯಲಾಗಿದೆ.

ಮಂಗಳೂರು ಗ್ರಾಮಾಂತರ ವ್ಯಾಪ್ತಿಯಲ್ಲಿ ಗ್ರಾಮ ಪಂಚಾಯಿತಿಗೆ ಒಬ್ಬರಂತೆ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣ ಅಥವಾ ಅನುತ್ತಿರ್ಣರಾದ ಅಂಗವಿಕಲರನ್ನು ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆಯರ (ವಿಆರ್‌ಡ್ಯೂ) ನೇಮಕ ಮಾಡಲು ಅವಕಾಶವಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ವಯೋಮಿತಿ 18 ರಿಂದ 45 ವರ್ಷಗಳು. ಆಯ್ಕೆಯಾದ ಅಭ್ಯರ್ಥಿಗಳಿಗೆ 9 ಸಾವಿರ ರೂ.ಮಾಸಿಕ ಗೌರವಧನ ಇರಲಿದೆ.

ಈ ಹುದ್ದೆಗಳು ಮಲ್ಲೂರು, ಪಡುಮಾರ್ನಾಡು, ಪಾಲಡ್ಕ ಪುತ್ತಿಗೆ, ಹಳೆಯಂಗಡಿ, ಅಂಬ್ಲಮೊಗರು ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇದ್ದು, ಅಂಗವಿಕಲ ಅಭ್ಯರ್ಥಿಗಳು ಮಾರ್ಚ್ 20ರೊಳಗೆ ನಗರದ ಬಿಜೈನಲ್ಲಿರುವ ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ, 1ನೇ ಮಹಡಿ ಜಿಲ್ಲಾ ಸ್ತ್ರೀಶಕ್ತಿ ಭವನ ಕಟ್ಟಡ ಇಲ್ಲಿಂದ ಅರ್ಜಿ ನಮೂನೆಯನ್ನು ಪಡೆದು ದ್ವಿಪ್ರತಿಯಲ್ಲಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ 9110897458.

ಗ್ರಾಮ ಒನ್ ಪ್ರಾಂಚೈಸಿಗೆ ಅರ್ಜಿ ಆಹ್ವಾನ: ಕೊಡಗು ಜಿಲ್ಲೆಯಲ್ಲಿ ಪ್ರಸ್ತುತ 20 ಗ್ರಾಮ ಪಂಚಾಯತ್‍ಗಳಲ್ಲಿ ಸಮಗ್ರ ನಾಗರಿಕ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಿಗೆ ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಡಿಕೇರಿ ತಾಲ್ಲೂಕಿನ ಹೊಸ್ಕೇರಿ, ಕರಿಕೆ, ಅಯ್ಯಂಗೇರಿ, ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು, ಪೊನ್ನಂಪೇಟೆ ತಾಲ್ಲೂಕಿನ ಬಲ್ಯಮಂಡೂರು, ಕೆ.ಬಾಡಗ, ಬಿ.ಶೆಟ್ಟಿಗೇರಿ, ಕಿರುಗೂರು, ನಾಲ್ಕೇರಿ, ಶ್ರೀಮಂಗಲ, ಸೋಮವಾರಪೇಟೆ ತಾಲ್ಲೂಕಿನ ಬೆಟ್ಟದಳ್ಳಿ, ಗರ್ವಾಲೆ, ಹಾನಗಲ್ಲು, ವಿರಾಜಪೇಟೆ ತಾಲ್ಲೂಕಿನ ಬೆಟೋಳಿ, ಅಮ್ಮತ್ತಿ, ಮಾಲ್ದಾರೆ, ಹೊಸೂರು, ಆರ್ಜಿ ಮತ್ತು ಚೆನ್ನಯ್ಯನಕೋಟೆ ಗ್ರಾಮ ಪಂಚಾಯಿತಿಗಳಿಗೆ ಅರ್ಜಿ ಸಲ್ಲಿಸಬೇಕು.

ಆಸಕ್ತ ಪ್ರಾಂಚೈಸಿಗಳು https://kal-mys.gramaone.karnataka.gov.in/ ಮೂಲಕ ಅರ್ಜಿ ಸಲ್ಲಿಸಲು ಮಾರ್ಚ್ 15 ರವರೆಗೆ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 9148712473 ಇ-ಮೇಲ್ ಐಡಿ [email protected] ಅನ್ನು ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+