ಧಾರವಾಡ: ಕೆಲಸ ಖಾಲಿ ಇದೆ, ನೇರ ಸಂದರ್ಶನದ ಮಾಹಿತಿ

ಧಾರವಾಡ, ಜನವರಿ 23: ಧಾರವಾಡದಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿದೆ. ಐದು ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ಧಾರವಾಡದಲ್ಲಿ ನೇಮಕಾತಿ ನಡೆಯುತ್ತಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಅಗತ್ಯ ದಾಖಲೆಗಳ ಜೊತೆ ಹಾಜಗಾರಬೇಕು ಎಂದು ಮಾಹಿತಿ ನೀಡಲಾಗಿದೆ.

ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸ ವೈದ್ಯಾಧಿಕಾರಿ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಗುತ್ತಿಗೆ ಆಧಾರದ ಮೇಲೆ ಈ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ನೇರ ಸಂದರ್ಶನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

Jobs In Dharwad Walk In Interview On February 1

ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಖಾಲಿ ಇರುವ 5 ತುರ್ತು ಚಿಕಿತ್ಸೆ ವೈದ್ಯಾಧಿಕಾರಿ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳನ್ನು ಮೆರಿಟ್ ಕಂ ರೋಸ್ಟರ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

ಈ ಹುದ್ದೆಗಳ ಭರ್ತಿಗಾಗಿ ಫೆಬ್ರುವರಿ 1, 2025ರಿಂದ ನೇಮಕಾತಿ ಪೂರ್ಣಗೊಳ್ಳುವವರೆಗೆ ಜಿಲ್ಲಾ ಶಸ್ತ್ರ ಚಿಕಿತ್ಸಕರು, ಜಿಲ್ಲಾ ಆಸ್ಪತ್ರೆ ಧಾರವಾಡ ಕಛೇರಿಯಲ್ಲಿ ನೇರ ಸಂದರ್ಶನ ನಡೆಸಲಾಗುತ್ತದೆ.

ಆಸಕ್ತ ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಶಸ್ತ್ರ ಚಿಕಿತ್ಸಕರು, ಜಿಲ್ಲಾ ಆಸ್ಪತ್ರೆ, ಧಾರವಾಡ-580008 ವಿಳಾಸಕ್ಕೆ ಅರ್ಜಿ ಸಲ್ಲಿಸಬೇಕು ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ಕೌಶಲ್ಯ ತರಬೇತಿಗಾಗಿ ಅರ್ಜಿ ಆಹ್ವಾನ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪ. ಜಾ. ಯುವಜನರ ಸ್ವಾವಲಂಬನೆಗೆ ಉತ್ತೇಜಿಸುವ ತರಬೇತಿಗಾಗಿ ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಜನವರಿ 27 ರಿಂದ ಫೆಬ್ರವರಿ 10 ರವರೆಗೆ 15 ದಿನಗಳ ಜಿಮ್ ತರಬೇತಿ ಶಿಬಿರಕ್ಕಾಗಿ ದ್ವಿತೀಯ ಪಿಯುಸಿ (ಪಾಸ್/ ಫೇಲ್) ವಿದ್ಯಾರ್ಹತೆಯುಳ್ಳ 18 ರಿಂದ 40 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಯುವನಿಕ ಸಭಾಂಗಣದಲ್ಲಿ ನಡೆಯುವ ಫೆಬ್ರವರಿ 11 ರಿಂದ 18ರವರೆಗೆ 8 ದಿನಗಳ ನಿರುಪಣಾ ಮತ್ತು ವಾರ್ತಾ ವಾಚಕ ತರಬೇತಿ ಶಿಬಿರಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಹತೆಯುಳ್ಳ 18 ರಿಂದ 40 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಈ ತರಬೇತಿಯಲ್ಲಿ ಹಾಜರಾಗುವ ಅಭ್ಯರ್ಥಿಗಳಿಗೆ ಲಘು ಉಪಹಾರ ಹಾಗೂ ಹೊರ ಜಿಲ್ಲೆಗಳಿಂದ ಭಾಗವಹಿಸುವ ಶಿಭಿರಾರ್ಥಿಗಳಿಗೆ ಸಾಮಾನ್ಯ ವಸತಿ ವ್ಯವಸ್ಥೆಯನ್ನು ನೀಡಲಾಗುತ್ತದೆ.

ದಾವಣಗೆರೆಯಲ್ಲಿ ಉದ್ಯೋಗ ಮೇಳ: ದಾವಣಗೆರೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮಾದರಿ ವೃತ್ತಿ ಕೇಂದ್ರ, ಇವರ ವತಿಯಿಂದ ಜನವರಿ 24ರಂದು ಬೆಳಗ್ಗೆ 10ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಠಡಿ ಸಂಖ್ಯೆ-51, ಡಿಸಿ ಆಫೀಸ್, ದಾವಣಗೆರೆ ಇಲ್ಲಿ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ಉದ್ಯೋಗಮೇಳದಲ್ಲಿ ಖಾಸಗಿ ಸಂಸ್ಥೆಗಳು ಭಾಗವಹಿಸುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಐಟಿಐ, ಡಿಪ್ಲೊಮಾ, ಪಿಯುಸಿ, ಪದವಿ ಮತ್ತು ಸ್ನಾತಕೋತ್ತರ ಪದವಿಯಲ್ಲಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲಿದ್ದಾರೆ.

ಆಸಕ್ತ ಅಭ್ಯರ್ಥಿಗಳು ಕನಿಷ್ಠ 5 ಸ್ವವಿವರ ಮತ್ತು ಆಧಾರ್ ನಂಬರ್‌ನೊಂದಿಗೆ ಭಾಗವಹಿಸಿ ಈ ಉದ್ಯೋಗಮೇಳದ ಸದುಪಯೋಗ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 7483808321.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+