ಬೆಂಗಳೂರು ವಿಮಾನ ನಿಲ್ದಾಣ; ಖಾಲಿ ಹುದ್ದೆಗಳ ಭರ್ತಿ, ವಿವರ

ಬೆಂಗಳೂರು, ನವೆಂಬರ್ 05: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಕುರಿತು ಸುತ್ತೋಲೆಯನ್ನು ಹೊರಡಿಸಲಾಗಿದೆ. ಆಸಕ್ತರು, ಅರ್ಹರು ಒಂದು ವಾರದೊಳಗೆ ಲಿಖಿತ ಮನವಿಯನ್ನು ಸಲ್ಲಿಕೆ ಮಾಡುವಂತೆ ಸೂಚನೆ ನೀಡಲಾಗಿದೆ.

ಕರ್ನಾಟಕ ಸರ್ಕಾರದ ಪರವಾಗಿ ಗಾಯತ್ರಿ ಜಿ. ಎನ್. ಸರ್ಕಾರದ ಅಧೀನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (ಸಿಬ್ಬಂದಿ) ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಸುತ್ತೋಲೆಯು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಲಿಯಿರುವ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

Jobs In Kempegowda International Airport Bengaluru Post Details

ಸುತ್ತೋಲೆಯ ವಿವರಗಳು; ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜ್ಯ ಶಿಷ್ಠಾಚಾರದ ಮುಖೇನ ರಾಜ್ಯ ಸರ್ಕಾರದ ಪರವಾಗಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯಕ್ಕೆ ಆಗಮಿಸುವ ಹಾಗೂ ನಿರ್ಗಮಿಸುವ ರಾಜ್ಯ ಅತಿಥಿಗಳು, ಅತೀ ಗಣ್ಯರು, ವಿದೇಶಿ ಗಣ್ಯರು ಹಾಗೂ ವಿದೇಶಿ ರಾಜ ತಾಂತ್ರಿಕರಿಗೆ, ಶಿಷ್ಟಾಚಾರ ಸೇವೆಗಳನ್ನು ಒದಗಿಸುತ್ತಿದೆ ಎಂದು ಸುತ್ತೋಲೆ ಹೇಳಿದೆ.

ಇತ್ತೀಚೆಗೆ ವಿಮಾನ ನಿಲ್ದಾಣದಲ್ಲಿ ಹೊಸದಾಗಿ ಟರ್ಮಿನಲ್-2 ಪ್ರಾರಂಭಗೊಂಡಿರುತ್ತದೆ. ಟರ್ಮಿನಲ್‌-1 ಮತ್ತು ಟರ್ಮಿನಲ್-2 ನಲ್ಲಿ ರಾಜ್ಯಕ್ಕೆ ಆಗಮಿಸುವ ರಾಜ್ಯ ಅತಿಥಿಗಳಿಗೆ ಶಿಷ್ಠಾಚಾರವನ್ನು ಸುಲಲಿತವಾಗಿ ಅನುವಾಗುವಂತೆ ದಿನಾಂಕ 27/10/2023ರ ಸರ್ಕಾರದ ಆದೇಶದಲ್ಲಿ ಒಟ್ಟು 14 ಹುದ್ದೆಗಳನ್ನು, ಸಚಿವಾಲಯದಲ್ಲಿ ರದ್ದಾದ ಸಾರ್ವಜನಿಕ ಉದ್ದಿಮೆಗಳ ಇಲಾಖೆ ಹಾಗೂ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ (ಹೈ.ಕ ವಿಶ್ಲೇಷ ಕೋಶ) ಗಳಿಂದ ಸಿಬ್ಬಂದಿ ಮತ್ತು ಸ್ಥಳಾಂತರಿಸಲಾಗಿರುತ್ತದೆ ಎಂದು ತಿಳಿಸಿದೆ.

ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಲಿಯಿರುವ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಲು ಆಸಕ್ತಿಯುಳ್ಳ ಸಚಿವಾಲಯದ ಅಧಿಕಾರಿ/ ನೌಕರರು ಲಿಖಿತದ ಮೂಲಕ ಮನವಿಯನ್ನು ಒಂದು ವಾರದೊಳಗಾಗಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸಲ್ಲಿಸುವಂತೆ ಸುತ್ತೋಲೆಯಲ್ಲಿ ಕೋರಲಾಗಿದೆ.

ವೃಂದ, ಹುದ್ದೆಗಳ ಸಂಖ್ಯೆ; ಸರ್ಕಾರದ ಸುತ್ತೋಲೆಯ ಪ್ರಕಾರ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶಾಖಾಧಿಕಾರಿ 5, ಹಿರಿಯ ಸಹಾಯಕ 3, ಸಹಾಯಕ 8, ಕಿರಿಯ ಸಹಾಯಕ 2 ಮತ್ತು ಗ್ರೂಪ್-ಡಿ 6 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಕೆ ಮಾಡಬಹುದು.

ದೇವನಹಳ್ಳಿಯಲ್ಲಿರುವ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಹಣೆಯನ್ನು ಬಿಐಎಎಲ್‌ ನೋಡಿಕೊಳ್ಳುತ್ತದೆ. ಆದರೆ ರಾಜ್ಯ ಸರ್ಕಾರದ ಶಿಷ್ಠಾಚಾರದ ಪ್ರಕಾರ ಗಣ್ಯ, ಅತಿಗಣ್ಯ ವ್ಯಕ್ತಿಗಳ ಆಗಮನ, ನಿರ್ಗಮದ ಜವಾಬ್ದಾರಿಯನ್ನು ರಾಜ್ಯ ಸರ್ಕಾರ ನೋಡಿಕೊಳ್ಳಬೇಕಿದೆ.

2022ರ ನವೆಂಬರ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಅನ್ನು ಉದ್ಘಾಟಿಸಿದ್ದರು. ಬಳಿಕ ಟ್ವೀಟ್ ಮಾಡಿದ್ದ ಅವರು, 'ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-2 ಸಾಮರ್ಥ್ಯ ಮತ್ತು ಹೆಚ್ಚಿನ ಅನುಕೂಲತೆಯನ್ನು ಸೇರಿಸುತ್ತದೆ. ಇದು ನಮ್ಮ ನಗರ ಕೇಂದ್ರಗಳಿಗೆ ಉನ್ನತ ದರ್ಜೆಯ ಮೂಲಸೌಕರ್ಯಗಳನ್ನು ಒದಗಿಸುವ ಗುರಿಯನ್ನು ಹೊಂದಿರುವ ನಮ್ಮ ಪ್ರಯತ್ನಗಳ ಒಂದು ಭಾಗವಾಗಿದೆ. ಟರ್ಮಿನಲ್ ಸುಂದರ ಮತ್ತು ಪ್ರಯಾಣಿಕರ ಸ್ನೇಹಿಯಾಗಿದೆ! ಉದ್ಘಾಟನೆ ಮಾಡಿದ್ದು ಖುಷಿ ತಂದಿದೆ' ಎಂದು ಹೇಳಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+