ಕೊಡಗು ಜಿಲ್ಲೆಯಲ್ಲಿ ಕೆಲಸ ಖಾಲಿ ಇದೆ: ವೇತನ ಮಾಹಿತಿ
ಮಡಿಕೇರಿ, ಜನವರಿ 18: ಕೊಡಗು ಜಿಲ್ಲೆಯಲ್ಲಿ ಕೆಲಸ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಮಾಹಿತಿಯೊಂದಿದೆ. ಕಮ್ಯುನಿಟಿ ಹೆಲ್ತ್ ಆಫೀಸರ್ ಹುದ್ದೆಗಳಿಗೆ ಅರ್ಜಿ ಕರೆಯಲಾಗಿದೆ. ಅಂಚೆ ಜೀವ ವಿಮೆಯ ನೇರ ಕಾರ್ಯಕರ್ತರಾಗಲು ನೇರ ಸಂದರ್ಶನವನ್ನು ಜನವರಿ 22ರಂದು ಆಯೋಜಿಸಲಾಗಿದೆ. ಆಸಕ್ತ, ಅರ್ಹ ಅಭ್ಯರ್ಥಿಗಳು ಉದ್ಯೋಗದ ಅವಕಾಶವನ್ನು ಬಳಸಿಕೊಳ್ಳಬಹುದು.
ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯಲ್ಲಿ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫೀಸರ್(ಸಿಎಚ್‍ಒ) ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ತಮ್ಮ ಸಂಪೂರ್ಣ ವಿವರವುಳ್ಳ ಅರ್ಜಿಯನ್ನು ನಿಗದಿಪಡಿಸಿದ ಕನಿಷ್ಠ ವಿದ್ಯಾರ್ಹತೆ, ವಯೋಮಿತಿ ಹಾಗೂ ಇತರೆ ಎಲ್ಲಾ ದಾಖಲಾತಿಗಳೊಂದಿಗೆ ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದೆ. ನೇರ ಸಂದರ್ಶನದ ದಿನಾಂಕವನ್ನು ನಂತರ ತಿಳಿಸಲಾಗುತ್ತದೆ.
ಕಮ್ಯುನಿಟಿ ಹೆಲ್ತ್ ಆಫೀಸರ್(ಸಿಎಚ್‍ಒ) ಸ.ಆ.ಚಿ ಶ್ರೀಮಂಗಲ-1 ಹುದ್ದೆ, ಸ.ಹೋ.ಚಿ ಪಾರಾಣೆ-1 ಹುದ್ದೆ, ಕನಿಷ್ಠ ವಿದ್ಯಾರ್ಹತೆ ಬಿಎಎಂಎಸ್ ಮಾಸಿಕ ವೇತನ ರೂ. 40,000 (ರೂ.25,000 ಒಂದು ತಿಂಗಳಿಗೆ ಮತ್ತು ರೂ.15 ಸಾವಿರ ಒಂದು ತಿಂಗಳಿಗೆ ಫರ್ಮಾರ್ಮೆನ್ಸ್ ಪೇಮೆಂಟ್) ಸಾ. ಅಭ್ಯರ್ಥಿ 1. ಈ ಹುದ್ದೆಯು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ Community Health Officer (CHO) ಹುದ್ದೆಗಳನ್ನು ಒಂದು ವರ್ಷದವರಗೆ ಅಥವಾ ಸದರಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಖಾಯಂ ವೈದ್ಯಾಧಿಕಾರಿಗಳ ಹುದ್ದೆಗಳು ಭರ್ತಿಯಾಗುವವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಚಾಲ್ತಿಯಲ್ಲಿರುತ್ತದೆ.
ಈ ಎಲ್ಲಾ ಹುದ್ದೆಗಳಿಗೆ ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು. ಅರ್ಜಿಯನ್ನು ಪಡೆದು ಸಲ್ಲಿಸಬೇಕಾದ ವಿಳಾಸ, ಜಿಲ್ಲಾ ಆಯುಷ್ ಅಧಿಕಾರಿಗಳು, ಜಿಲ್ಲಾ ಆಯುಷ್ ಕಛೇರಿ, ಮಹದೇವಪೇಟೆ, ಮಡಿಕೇರಿ-571201, ಕೊಡಗು ಜಿಲ್ಲೆ.
ಜನವರಿ 22ರಂದು ನೇರ ಸಂದರ್ಶನ: ಭಾರತೀಯ ಅಂಚೆ ಇಲಾಖೆಯಲ್ಲಿ ಅಂಚೆ ಜೀವ ವಿಮೆಯ ನೇರ ಕಾರ್ಯಕರ್ತರಾಗಲು (ಡೈರೆಕ್ಟ್ ಏಜೆಂಟ್) ಜನವರಿ 22 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನೇರ ಸಂದರ್ಶನ ಆಯೋಜಿಸಲಾಗಿದೆ.
ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷ ಮತ್ತು ಗರಿಷ್ಠ ವಯೋಮಿತಿ ಇರುವುದಿಲ್ಲ. 10ನೇ ತರಗತಿ ಮತ್ತು ಮೇಲ್ಪಟ್ಟು, ನಿರುದ್ಯೋಗಿಗಳು, ಸ್ವಯಂ ಉದ್ಯೋಗ ಮಾಡುತ್ತಿರುವ ಅಕ್ಷರಸ್ಥ ಯುವಕರು, ಯಾವುದೇ ಜೀವ ವಿಮಾ ಸಲಹೆಗಾರರಾಗಿದ್ದವರು, ಸೈನಿಕ ಸೇವೆಯಲ್ಲಿ ಇದ್ದವರು, ಅಂಗನವಾಡಿ ಕಾರ್ಯಕರ್ತರು, ಮಹಿಳಾ ಮಂಡಳಿ ಕಾರ್ಯಕರ್ತರು, ನಿವೃತ್ತ ಶಿಕ್ಷಕರು ಅಥವಾ ಈ ಯಾವುದೇ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಅರ್ಹರು.
ಅಭ್ಯರ್ಥಿ ಅರ್ಜಿ, 10ನೇ ತರಗತಿ ಉತ್ತೀರ್ಣ ಪ್ರಮಾಣ ಪತ್ರ, 5 ಸಾವಿರ ರೂ.ಗಳ ಎನ್‍ಎಸ್‍ಸಿ/ ಕೆವಿಪಿ (ಸಂದರ್ಶನದ ನಂತರ), ಆಧಾರ್, ವೋಟರ್ ಐಡಿ, ಯಾವುದೇ ಭಾವಚಿತ್ರವುಳ್ಳ ವಿಳಾಸ ದಾಖಲಾತಿ ಹಾಗೂ ಪಾನ್ ಕಾರ್ಡ್ ಪ್ರತಿಯನ್ನು ಸಲ್ಲಿಸಬೇಕು.
ಆಸಕ್ತರು ಹೆಚ್ಚಿನ ಮಾಹಿತಿಗೆ ಕೊಡಗು ಅಂಚೆ ವಿಭಾಗೀಯ ಕಚೇರಿ, ಕೊಡಗು ಅಂಚೆ ವಿಭಾಗ, ಮಡಿಕೇರಿ-571201 ಇವರನ್ನು ಸಂಪರ್ಕಿಸಬೇಕು. ದೂರವಾಣಿ ಸಂಖ್ಯೆ 08272-295496 ಅನ್ನು ಸಂಪರ್ಕಿಸಬಹುದು.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications