• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೋಲಾರದಲ್ಲಿ ಕೆಲಸ ಖಾಲಿ ಇದೆ; ಅಕ್ಟೋಬರ್ 9ರಂದು ನೇರ ಸಂದರ್ಶನ

|

ಕೋಲಾರ, ಅಕ್ಟೋಬರ್ 07: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೋಲಾರ ಜಿಲ್ಲಾ ಘಟಕದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಅಕ್ಟೋಬರ್ 9ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಕೋವಿಡ್ 19 ವ್ಯಾಪಕವಾಗಿ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ಅನುಕೂಲವಾಗುವಂತೆ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ಒಟ್ಟು 107 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ಕೋಲಾರ; ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ಅರ್ಜಿ ಹಾಕಿ

ಈ ಹುದ್ದೆಗಳಿಗೆ ನೇಮಕಾತಿಯನ್ನು ಗುತ್ತಿಗೆ ಆಧಾರದ ಮೇಲೆ 6 ತಿಂಗಳ ಮಟ್ಟಿಗೆ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ; ಅ.17ರೊಳಗೆ ಅರ್ಜಿ ಹಾಕಿ

ನೇರ ಸಂದರ್ಶನಕ್ಕೆ ಬರುವವರು ತಮ್ಮ ಬಯೋಡೇಟಾ ಮತ್ತು ಮೂಲ ದಾಖಲೆಗಳನ್ನು ತರಬೇಕು. ಅಕ್ಟೋಬರ್ 9 ರಂದು ಬೆಳಗ್ಗೆ 11.00 ಗಂಟೆಗೆ ಹಾಜರಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ.

ಅರ್ಮಿ ಪಬ್ಲಿಕ್ ಸ್ಕೂಲ್ ನೇಮಕಾತಿ: 8000 ಶಿಕ್ಷಕ ಹುದ್ದೆಗಳಿವೆ

ನೇರ ಸಂದರ್ಶನ ನಡೆಯುವ ಸ್ಥಳ: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಛೇರಿ, ಕೋಲಾರ.

ಮಂಗಳವಾರದ ಮಾಹಿತಿ ಪ್ರಕಾರ ಕೋಲಾರದಲ್ಲಿ 161 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6426. ಸಕ್ರಿಯ ಪ್ರಕರಣಗಳು 1287.

English summary
Kolar health and family welfare department organized walk in interview on October 9, 2020 to fill 107 post. Candidates can attend interview on 11 am.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X