ಕೊಪ್ಪಳ, ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ, ವಿವರ

ಬೆಂಗಳೂರು, ಜನವರಿ 12: ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿ. ಕೊಪ್ಪಳ, ದಾವಣಗೆರೆ ಮತ್ತು ಕೊಡಗಿನಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಹುದ್ದೆ ಮತ್ತು ಇತರ ವಿವರಗಳು ಇಲ್ಲಿವೆ. ಆಸಕ್ತರು ಸದುಪಯೋಗ ಪಡೆದುಕೊಳ್ಳಬಹುದಾಗಿದೆ.

ಕೊಪ್ಪಳ ತಾಲೂಕಿನ ದದೇಗಲ್‌ನಲ್ಲಿರುವ ಸರಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿಪ್ಲೋಮಾ ಮೆಕಟ್ರಾನಿಕ್ಸ್ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.

Jobs In Koppal Davanagere And Kodagu Post Details

ಭೋದನೆಯಲ್ಲಿ ಕನಿಷ್ಠ 1 ವರ್ಷ ಅನುಭವುಳ್ಳ, ಪ್ರಥಮ ದರ್ಜೆಯಲ್ಲಿ ಬಿಇ ಅಥವಾ ಎಂಟೆಕ್ ಇನ್ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಇಂಜಿನಿಯರ್ ಮತ್ತು ಬಿಇ ಅಥವಾ ಎಂಟೆಕ್ ಇನ್ ಎಲೆಕ್ಟ್ರಾನಿಕ್ಸ್ ಕಮ್ಯುನಿಕೇಶನ್ ಇಂಜಿನಿಯರ್ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ಜನವರಿ 25ರೊಳಗೆ ಅರ್ಜಿ ಸಲ್ಲಿಸಬೇಕು.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿ.ಟಿ.ಟಿ.ಸಿ ಕಾರ್ಯಾಲಯಕ್ಕೆ ಅಥವಾ ವಿಭಾಗದ ಮುಖ್ಯಸ್ಥರಾದ ಮೌನೇಶ ಅವರ ಮೊಬೈಲ್ ಸಂಖ್ಯೆ 7507094445ಗೆ ಸಂರ್ಪಕಿಸಬಹುದಾಗಿದೆ.

ದಾವಣಗೆರೆಯಲ್ಲಿ ಕೆಲಸ ಖಾಲಿ ಇದೆ; ದಾವಣಗೆರೆಯಲ್ಲಿ ಗುತ್ತಿಗೆ ಆಧಾರ ಮೇಲೆ ಮಹಿಳಾ ವೈದ್ಯಾಧಿಕಾರಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ದಾವಣಗೆರೆ ಶಿವಗಂಗೋತ್ರಿ ವಿಶ್ವವಿದ್ಯಾಲಯದ ಆರೋಗ್ಯ ಕೇಂದ್ರಕ್ಕೆ ಮಹಿಳಾ ವೈದ್ಯಾಧಿಕಾರಿಗಳಾಗಿ (ಅರೆಕಾಲಿಕ) ಸಂಚಿತ ವೇತನದ ಆಧಾರದ ಮೇರೆಗೆ ಈ ನೇಮಕಾತಿ ನಡೆಯುತ್ತಿದೆ.

ಅರ್ಜಿ ಸಲ್ಲಿಸುವವರು ಎಂ.ಬಿ.ಬಿ.ಎಸ್, ಬಿ.ಎ.ಎಂ.ಎಸ್, ಬಿ.ಹೆಚ್.ಎಂ.ಎಸ್, ಪದವಿ ಪಡೆದಿರಬೇಕು. ಕನಿಷ್ಠ 3 ವರ್ಷ ಮಹಿಳಾ ವೈದ್ಯಾಧಿಕಾರಿಗಳಾಗಿ ಸೇವೆ ಸಲ್ಲಿಸಿರಬೇಕು. ಅರ್ಜಿ ಸಲ್ಲಿಸಲು ಜ.22 ಕೊನೆಯ ದಿನವಾಗಿದೆ.

ಆಸಕ್ತರು ಅರ್ಜಿಯನ್ನು ವೆಬ್‌ಸೈಟ್ www.davangereuniversity.ac.in ನಲ್ಲಿ ಪಡೆದು ಕುಲಸಚಿವರು ದಾವಣಗೆರೆ ವಿಶ್ವವಿದ್ಯಾನಿಲಯ ಶಿವಗಂಗೋತ್ರಿ ದಾವಣಗೆರೆ-577007 ಇಲ್ಲಿಗೆ ಸಲ್ಲಿಸಬೇಕು.

ಕೊಡಗಿನಲ್ಲಿ ನೇರ ಸಂದರ್ಶನ; ರಾಷ್ಟ್ರೀಯ ಆಯುಷ್ ಅಭಿಯಾನ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯ ಪಾರಾಣೆ ಮತ್ತು ಶ್ರೀಮಂಗಲ ಆಯುಷ್ ಆರೋಗ್ಯ ಹಾಗೂ ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫೀಸರ್ (ಸಿಎಚ್‍ಒ) ಹುದ್ದೆಗಳಿಗೆ ಹಾಗೂ ವಿರಾಜಪೇಟೆ ಸರ್ಕಾರಿ ಆಯುರ್ವೇದ ಆಸ್ಪತ್ರೆಯಲ್ಲಿ ಖಾಲಿ ಇರುವ ಮಲ್ಟಿಪರ್ಪಸ್ ವರ್ಕರ್ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ಆಯೋಜನೆ ಮಾಡಲಾಗಿದೆ.

ಜನವರಿ 16 ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಆಯುಷ್ ಸಮಿತಿಯ ಅಧ್ಯಕ್ಷರಾದ ಜಿಲ್ಲಾಧಿಕಾರಿ ಅವರು ಹಾಗೂ ಸಮಿತಿ ಸದಸ್ಯರ ಸಮ್ಮುಖದಲ್ಲಿ ನೇರ ಸಂದರ್ಶನ ನಡೆಯಲಿದೆ.

ಅಭ್ಯರ್ಥಿಗಳು ತಮ್ಮ ಮೂಲ ದಾಖಲಾತಿಗಳೊಂದಿಗೆ ನಿಗದತಿ ಸಮಯಕ್ಕೆ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹಾಜರಾಗುವಂತೆ ಸೂಚಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಆಯುಷ್ ಕಚೇರಿಯ ದೂರವಾಣಿ ಸಂಖ್ಯೆ 08272-295128 ಹಾಗೂ 8618442161 ಅನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+