ಕೊಪ್ಪಳ: ಕೆಲಸ ಖಾಲಿ ಇದೆ, ವೇತನ 9000 ರೂ.ಗಳು, ವಿವರ

ಕೊಪ್ಪಳ, ಮಾರ್ಚ್‌ 09: ಕೊಪ್ಪಳದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಪ್ರಮುಖವಾದ ಮಾಹಿತಿಯೊಂದಿದೆ. ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಯನ್ನು ತಾತ್ಕಾಲಿಕ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 9000 ರೂ.ಗಳ ಗೌರವಧನವನ್ನು ನೀಡಲಾಗುತ್ತಿದೆ. ಆಸಕ್ತ ಮತ್ತು ಅರ್ಹರು ಅರ್ಜಿಗಳನ್ನು ಸಲ್ಲಿಕೆ ಮಾಡಲು ಮಾರ್ಚ್ 18 ಕೊನೆಯ ದಿನವಾಗಿದೆ.

ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಕೊಪ್ಪಳ ತಾಲೂಕಿನ ಬೂದಗುಂಪಾ ಗ್ರಾಮ ಪಂಚಾಯತಿಯಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ಹುದ್ದೆಗೆ ಅರ್ಜಿ ಕರೆಯಲಾಗಿದೆ. ಈ ಹುದ್ದೆಗೆ ವಿಕಲಚೇತ ಅಭ್ಯರ್ಥಿಗಳು ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ.

Jobs In Koppal Monthly Remuneration 9 Thousand Rs

ಬೂದಗುಂಪಾ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ ತಮ್ಮ ಹುದ್ದೆಗೆ ರಾಜೀನಾಮೆ ನೀಡಿರುವುದರಿಂದ ಖಾಲಿ ಇರುವ ಈ ಹುದ್ದೆಗೆ ತಾತ್ಕಾಲಿಕ ಆಧಾರದ ಮೇಲೆ ಮಾಸಿಕ ರೂ. 9000 ಗಳ ಗೌರವಧನದ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ.

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಬೂದಗುಂಪಾ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಅರ್ಹ ವಿಕಲಚೇತನರಾಗಿರಬೇಕು. ಆಸಕ್ತರು ಅರ್ಜಿ ನಮೂನೆಯನ್ನು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿಯಿಂದ ಪಡೆದು ಮಾರ್ಚ್ 18ರ ಒಳಗೆ ಅಗತ್ಯ ದಾಖಲೆಗಳ ಜೊತೆ ಸಲ್ಲಿಸಬೇಕು ಎಂದು ಸೂಚನೆ ನೀಡಲಾಗಿದೆ.

ಅಭ್ಯರ್ಥಿಗಳಿಗೆ ಸೂಚನೆಗಳು: ಈ ಹುದ್ದೆ ಸಂಪೂರ್ಣವಾಗಿ ಗೌರಧನದ ಆಧಾರದ ಮೇಲೆ ಹಾಗೂ ತಾತ್ಕಾಲಿಕವಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 45 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ ಹೊಂದಿರಬೇಕು. ವಿಶೇಷ ಶಿಕ್ಷಣ, ಆರ್‌ಸಿಐ ತರಬೇತಿ, ದಿವ್ಯಾಂಗ ಮಿತ್ರ ತರಬೇತಿ, ಸನ್ಹೆ ಭಾಷೆ ತರಬೇತಿ, ದೈಹಿಕ ವ್ಯಾಯಾಮ ತರಬೇತಿ ವಿಶೇಷ ಜ್ಞಾನಗಳನ್ನು ಪಡೆದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ.

ಅಂಗವಿಕಲರ ಯು.ಡಿ.ಐ.ಡಿ ವಿಶೇಷ್ಠ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಹೊಂದಿದವರಾಗಿರಬೇಕು. ಅಂಗವಿಕಲತೆಯು ಕನಿಷ್ಠ ಶೇ 40ರಷ್ಟಿರಬೇಕು. (ಭಾಗಶ: ಅಂಧರಿಗೆ, ಭಾಗಶ: ಶ್ರವಣ ದೋಷವುಳ್ಳವರಿಗೆ ಮತ್ತು ದೈಹಿಕ ಅಂಗವಿಕಲರಿಗೆ). ಅದೇ ಗ್ರಾಮ ಪಂಚಾಯತಿ ವ್ಯಾಪ್ತಿಯ ನಿವಾಸಿಯಾಗಿರಬೇಕು (ಗ್ರಾಮ ಪಂಚಾಯತಿ ದೃಢೀಕರಣ). ತಹಶೀಲ್ದಾರರಿಂದ ಪಡೆದ ಜಾತಿ, ಆದಾಯ ಮತ್ತು ವಾಸಸ್ಥಳ ಪ್ರಮಾಣ ಪತ್ರವನ್ನು ಲಗತ್ತಿಸಬೇಕು.

ವಿಕಲಚೇತನರ ಕಲ್ಯಾಣಕ್ಕಾಗಿ ಕೆಲಸ ಮಾಡಿದ ಅನುಭವವಿದ್ದಲ್ಲಿ ಸಂಬಂಧಪಟ್ಟ ದಾಖಲೆಗಳನ್ನು ಲಗತ್ತಿಸಬೇಕು. ಮಹಿಳಾ ವಿಕಲಚೇತನರಿಗೆ ಆದ್ಯತೆ ನೀಡಲಾಗುವುದು. ನಿಗದಿಪಡಿಸಿದ ದಿನಾಂಕ ನಂತರ ಬಂದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಸ್ವೀಕರಿಸಲಾಗುವುದಿಲ್ಲ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಕೊಪ್ಪಳ ಇವರನ್ನು ಸಂಪರ್ಕಿಸಬಹುದು. ಕರೆ ಮಾಡಲು ದೂರವಾಣಿ ಸಂಖ್ಯೆ 08539-295496.

ಅರ್ಜಿ ಸಲ್ಲಿಕೆ ಮಾಡಲು ವಿಳಾಸ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಕೊಪ್ಪಳ ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ 31, 32 ಜಿಯೋ ಪೆಟ್ರೋಲ್ ಬಂಕ್ ಎದುರುಗಡೆ ಹೊಸಪೇಟೆ ರಸ್ತೆ, ಕೊಪ್ಪಳ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+