ರಾಯಚೂರು; ಕೆಲಸ ಖಾಲಿ ಇದೆ, ಮಾ.10ರ ತನಕ ಅರ್ಜಿ ಹಾಕಿ

ರಾಯಚೂರು ಜಿಲ್ಲಾ ನ್ಯಾಯಾಲಯ ಶೀಘ್ರಲಿಪಿಗಾರರು, ಆದೇಶ ಜಾರಿಕಾರ, ಜವಾನ, ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆದಿದೆ.

ರಾಯಚೂರು, ಫೆಬ್ರವರಿ 22; ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ರಾಯಚೂರು ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಕೆ ಮಾಡಲು 10/3/2023 ಕೊನೆಯ ದಿನವಾಗಿದೆ.

ಶೀಘ್ರಲಿಪಿಗಾರರು ಗ್ರೇಡ್-3 7 ಹುದ್ದೆಗಳು. ಆದೇಶ ಜಾರಿಕಾರ 3 ಹುದ್ದೆ, ಜವಾನ 22 ಹುದ್ದೆ, ಬೆರಳಚ್ಚುಗಾರರು 1 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕಿದೆ.

ಅರ್ಜಿಗಳನ್ನು ಸಲ್ಲಿಕೆ ಮಾಡುವವರಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗಕ್ಕೆ 35 ವರ್ಷ, ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 38 ವರ್ಷಗಳು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

Jobs In Raichur District Court Apply For Stenographer Typist Process Server Post

ಅರ್ಜಿಗಳನ್ನು ಸಲ್ಲಿಕೆ ಮಾಡುವ ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳಿಗೆ, ವಿಧವೆಯರಿಗೆ, ಮಾಜಿ ಸೈನಿಕರಿಗೆ ಹಾಗೂ ಅಂಗವಿಕಲರಿಗೆ ನಿಯಾಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ಕರ್ನಾಟಕ ಸಿವಿಲ್ ಸೇವಾ(ಕಂಪ್ಯೂಟರ್‌ ಸಾಕ್ಷರತಾ ಪರೀಕ್ಷೆ) ನಿಯಮಗಳು 2012 ಹಾಗೂ ತಿದ್ದುಪಡಿ ನಿಯಮಗಳು 2015ರ ಅನ್ವಯ ಪ್ರತಿಶತ 50 ರಂತೆ ಅಂಕಗಳನ್ನು ಪಡೆದು ಪರಿವೀಕ್ಷಣಾ ಅವಧಿಯೊಳಗೆ ಉತ್ತೀರ್ಣರಾಗತಕ್ಕದ್ದು.

ಅರ್ಜಿ ಶುಲ್ಕದ ಮಾಹಿತಿ; ಮೇಲಿನ ಎಲ್ಲಾ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ಮಾಡುವ ಸಾಮಾನ್ಯ, 2ಎ, 2ಬಿ, 3ಎ ಮತ್ತು 3 ಬಿ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಅಂಗ ವಿಕಲರಿಗೆ ರೂ. 100 ಶುಲ್ಕವನ್ನು ಪಾವತಿ ಮಾಡಬೇಕಿದೆ. ಶುಲ್ಕವನ್ನು ಚಲನ್‌ ಮುಖಾಂತರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಯ ವ್ಯವಹಾರದ ವೇಳೆಯಲ್ಲಿ ಪಾವತಿಸತಕ್ಕದ್ದು.

ಅಭ್ಯರ್ಥಿಗಳನ್ನು ಕರ್ನಾಟಕ ಅಧೀನ ನ್ಯಾಯಾಲಯಗಳು (ಮಿನಿಸ್ಟ್ರೇಯಲ್ ಮತ್ತು ಇತರೆ ಹುದ್ದೆಗಳು) ನೇಮಕಾತಿ ನಿಮಯಗಳು 1982 ಮತ್ತು (ತಿದ್ದುಪಡಿ) 2007ರ ನ್ವಯ ನೇರ ನೇಮಕಾತಿ ಮೂಲಕ ಆಯ್ಕೆ ಮಾಡಲಾಗುತ್ತದೆ.

Jobs In Raichur District Court Apply For Stenographer Typist Process Server Post

ಸಂದರ್ಶನಕ್ಕೆ ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ನ್ಯಾಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಸಂದರ್ಶನಕ್ಕೆ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ರವಾನಿಸಲಾಗುವುದು. ಸಂದರ್ಶನಕ್ಕೆ ಆಯ್ಕೆಯಾಗುವ ಅಭ್ಯರ್ಥಿಗಳು ರಾಯಚೂರು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಗೆ ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಾಗಬೇಕು

ಅಭ್ಯರ್ಥಿಗಳು ಸಂದರ್ಶನ/ ದಾಖಲಾತಿ ಪರಿಶೀಲನೆಯ ಸಮಯದಲ್ಲಿ ಆನ್‌ಲೈನ್ ಮೂಲಕ ಸಲ್ಲಿಸಲಾದ ಅರ್ಜಿಯ ಪ್ರತಿ, ಹುದ್ದೆಗೆ ನಿಗದಿಪಡಿಸಿದ ಶುಲ್ಕವನ್ನು ಪಾವತಿಸಿದ ರಶೀದಿ ಪ್ರತಿ, ಎಸ್. ಎಸ್. ಎಲ್. ಸಿ ಅಂಕಪಟ್ಟಿ ಹಾಗೂ ಆಯಾ ಹುದ್ದೆಗಳಿಗೆ ನಿಗದಿಪಡಿಸಿರುವ ವಿದ್ಯಾರ್ಹತೆಗೆ ಸಂಬಂಧಿಸಿದ ಅಂಕಪಟ್ಟಿಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ನಮೂನೆ 'ಡಿ' ಯಲ್ಲಿ ಪ್ರವರ್ಗ-1 ರ ಅಭ್ಯರ್ಥಿಗಳು ನಮೂನೆ 'ಇ' ಯಲ್ಲಿ ಮತ್ತು 2ಎ, 2ಬಿ ಮತ್ತು 3ಬಿ ಗೆ ಸೇರಿದ ಅಭ್ಯರ್ಥಿಗಳು ನಮೂನೆ 'ಎಫ್' ನಲ್ಲಿ ಸಂಬಂಧಪಟ್ಟ ತಹಶೀಲ್ದಾರರಿಂದ ಪಡೆದ ಚಾಲ್ತಿಯಲ್ಲಿರುವ ಜಾತಿ/ ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಸಲ್ಲಿಸಬೇಕು.

ಅಭ್ಯರ್ಥಿಗಳು ಅರ್ಜಿಯನ್ನು Online ಮೂಲಕ ಸಲ್ಲಿಸುವ ಮೊದಲು ಎಲ್ಲಾ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳಬೇಕು ಮತ್ತು ತಪ್ಪಾಗದಂತೆ ನೋಡಿಕೊಳ್ಳುವುದು. ಸರಿಯಾದ ಮಾಹಿತಿ ನೀಡದೇ ಇರುವ ಮತ್ತು ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು ಎಂದು ಅಧಿಸೂಚನೆ ತಿಳಿಸಿದೆ.

ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಭ್ಯರ್ಥಿಯು ಅರ್ಜಿಯಲ್ಲಿ ನಮೂದಿಸುವ ಜನ್ಮ ದಿನಾಂಕ, ವಿದ್ಯಾರ್ಹತೆ, ಮೀಸಲಾತಿ ಹಾಗೂ ವಯೋಮಿತಿ ಸಡಿಲಿಕೆ, ಇತ್ಯಾದಿ ವಿವರಗಳನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಲಾಗುವುದು ಹಾಗೂ ಈ ಬಗ್ಗೆ ಅನಂತರದಲ್ಲಿ ಬದಲಾವಣೆ ಕುರಿತಂತೆ ಸಲ್ಲಿಸುವ ಯಾವುದೇ ಕೋರಿಕೆ ಪತ್ರಗಳನ್ನು ಪುರಸ್ಕರಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಅಭ್ಯರ್ಥಿಗಳ ಮೊಬೈಲ್ ಸಂಖ್ಯೆಯನ್ನು ಕಡ್ಡಯಾವಾಗಿ ನಮೂದಿಸುವುದು ಹಾಗೂ ಇ ಮೇಲ್ ಐಡಿಯನ್ನು ಹೊಂದಿದ್ದಲ್ಲಿ ನಮೂದಿಸುವುದು, ಒಂದು ವೇಳೆ SMS ಅಥವಾ ಇ ಮೇಲ್ ಮುಖಾಂತರ ಅಭ್ಯರ್ಥಿಗಳಿಗೆ ಸಂದೇಶ ತಲುಪದಿದ್ದಲ್ಲಿ ಈ ಪ್ರಾಧಿಕಾರವು ಹೊಣೆಯಾಗುವುದಿಲ್ಲ.

ಆಸಕ್ತರು ಅರ್ಜಿ ಸಲ್ಲಿಸಲು, ಹೆಚ್ಚಿನ ಮಾಹಿತಿಗಾಗಿ https://districts.ecourts.gov.in/raichur ಅಥವಾ http://karnatakajudiciary.kar.nic.in/districtrecruitment.asp ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+